HomeUncategorizedಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

- Advertisement -
- Advertisement -

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಮತ್ತು ವಿವಾಹ ಸಮಾನತೆಯ ಹಕ್ಕುಗಳನ್ನು ನೀಡಲು ಸುಪ್ರೀಂಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಮಂಗಳವಾರ ನಿರಾಕರಿಸಿದ್ದು, ಈ ಕುರಿತು ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು ಎಂದು ಹೇಳಿದೆ.

ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ, ನ್ಯಾಯಾಲಯವು ಕಾನೂನನ್ನು ರೂಪಿಸಲು ಸಾಧ್ಯವಿಲ್ಲ. ವಿಶೇಷ ವಿವಾಹ ಕಾಯ್ದೆಯನ್ನು ಬದಲಾಯಿಸುವ ಹಕ್ಕು ಸಂಸತ್ತಿಗೆ ಇರುವುದಾಗಿದೆ ಎಂದು ಹೇಳಿದ್ದಾರೆ.

ವಿಶೇಷ ವಿವಾಹ ಕಾಯಿದೆಯು ಸಲಿಂಗ ವಿವಾಹಗಳಿಗೆ ಮಾನ್ಯತೆ ನೀಡುವುದಿಲ್ಲ ಎಂಬ ಕಾರಣಕ್ಕೆ ಅದನ್ನು ಅಸಂವಿಧಾನಿಕ ಎಂದು ಘೋಷಿಸಲು ಆಗದು. ಸಾಮಾನ್ಯ ದಂಪತಿಗಳು ಮಾತ್ರ ಒಳ್ಳೆಯ ಹೆತ್ತವರಾಗಬಹುದು ಎಂಬ ಊಹೆ ತಪ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜೀವನದ ಅವಿಭಾಜ್ಯ ಅಂಗ. ಎಲ್‌ಜಿಬಿಟಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳು, ಅಗತ್ಯ ಸೇವೆಗಳನ್ನು ನಿರಾಕರಿಸಬಾರದು. ಪರೋಕ್ಷವಾಗಿ ಕೂಡ ಸಮುದಾಯದ ಸ್ವಾತಂತ್ರ್ಯ ಉಲ್ಲಂಘನೆ ಮಾಡಬಾರದು, ಅದನ್ನು ಗೌರವಿಸಬೇಕು ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನದ ಪೀಠವು 10 ದಿನಗಳ ನಿರಂತರ ವಿಚಾರಣೆಯ ನಂತರ ಮೇ 11 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇವತ್ತು ನೀಡಿದೆ. ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು ಇದ್ದರು.

ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವುದಾಗಿದೆ. ಕ್ವೀರ್((ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಅವರನ್ನು ಹೆಸರಿಸಲು ಬಳಸುವ ಪದ) ಎಂಬುವುದು ಯುಗಯುಗಾಂತರಗಳಿಂದ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಸಲಿಂಗ ಆಸಕ್ತಿ ಎಂಬುವುದು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ ಎಂದು ಕೋರ್ಟ್‌ ಹೇಳಿದೆ.

ಸಲಿಂಗ ವಿವಾಹದ ಕುರಿತು ನ್ಯಾಯಾಲಯ ಕಾನೂನು ರೂಪಿಸಲು ಸಾಧ್ಯವಿಲ್ಲ. ಆದರೆ ರೂಪಿಸಿದ ಕಾನೂನನ್ನು ವ್ಯಾಖ್ಯಾನಿಸಬಹುದು. ವಿಶೇಷ ವಿವಾಹ ಕಾಯಿದೆಯಲ್ಲಿನ ಬದಲಾವಣೆಯನ್ನು ಸಂಸತ್ತು ನಿರ್ಧರಿಸಬೇಕು. ಈ ನ್ಯಾಯಾಲಯವು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತನ್ನ ತೀರ್ಪಿನಲ್ಲಿ ಹೇಳಿದೆ.

ಪರಸ್ಪರ ಪ್ರೀತಿ ಮತ್ತು ಸಂಪರ್ಕವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ರೊಮ್ಯಾಂಟಿಕ್‌, ರಿಲೇಷನ್‌ಶಿಪ್‌ಗಳು ಕೂಡ ಇರಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿದೆ. ಸಲಿಂಗ ವಿವಾಹ ಕುರಿತು ಕಳವಳ ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿ ರಚಿಸಬೇಕು. ಪಡಿತರ ಚೀಟಿಗಳು, ಪಿಂಚಣಿ, ಉತ್ತರಾಧಿಕಾರ ಸೇರಿದಂತೆ ಎಲ್ಲದಕ್ಕೂ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಸಮುದಾಯದ ಕುರಿತಂತೆ ತಾರತಮ್ಯ ಮಾಡಬಾರದು. ಲಿಂಗದ ಗುರುತಿನ ಬಗ್ಗೆ ವಿಚಾರಿಸಲೆಂದು ಠಾಣೆಗೆ ಬರಲು ಹೇಳಿ ಎಲ್‌ಜಿಬಿಟಿ ಸಮುದಾಯಕ್ಕೆ ಯಾವುದೇ ಕಿರುಕುಳ ನೀಡಬಾರದು. ತಮ್ಮ ಹೆತ್ತವರ ಕುಟುಂಬಕ್ಕೆ ಮರಳುವಂತೆ ಕ್ವೀರ್ ಸಮುದಾಯದವರಿಗೆ ಪೊಲೀಸರು ಬಲವಂತಪಡಿಸುವಂತಿಲ್ಲ. ಸಾರ್ವಜನಿಕರಿಗೆ ಕ್ವೀರ್ ಸಮುದಾಯದವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಮುದಾಯಕಕೆ ಸುರಕ್ಷಿತ ತಾಣಗಳನ್ನು ನಿರ್ಮಿಸಬೇಕು. ತೃತೀಯ ಲಿಂಗಿ ಮಕ್ಕಳಿಗೆ ಶಸ್ತ್ರಕ್ರಿಯೆಗೆ ಬಲವಂತಪಡಿಸಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ವಿಶೇಷ ವಿವಾಹ ಕಾಯಿದೆ (SMA) ಅಡಿಯಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ದಂಪತಿ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ  ಸರಿಯಾದ ಕ್ರಮವಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಏಕೆಂದರೆ ನ್ಯಾಯಾಲಯವು ಅದರ ಪರಿಣಾಮಗಳನ್ನು ಊಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು. ಸಲಿಂಗ ವಿವಾಹದ ವಿಷಯದ ಬಗ್ಗೆ ಏಳು ರಾಜ್ಯಗಳಿಂದ ಪ್ರತಿಕ್ರಿಯೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು. ರಾಜಸ್ಥಾನ, ಆಂಧ್ರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಅಂತಹ ವಿವಾಹಕ್ಕೆ ಕಾನೂನು ಅನುಮೋದನೆ ಕೋರಿದ್ದ ಅರ್ಜಿದಾರರ ವಾದವನ್ನು ವಿರೋಧಿಸಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...