Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

- Advertisement -
- Advertisement -

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. “ಮಸೂದೆಯಲ್ಲಿ ಯಾವುದೇ ಸುಧಾರಣೆಗಳಿಲ್ಲ, ವಿದ್ಯಾರ್ಥಿಗಳ ಭವಿಷ್ಯದ ಮೇಲೆ ರಾಜಕೀಯಕ್ಕೆ ಆದ್ಯತೆ ನೀಡುತ್ತಿದೆ, ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆಸಿದ ದೌರ್ಜನ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜವಾಬ್ದಾರಿ ಹೊರಬೇಕು” ಎಂದು ಒತ್ತಾಯಿಸಿದರು.

“ಸರ್ಕಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ಗೆ ಆದೇಶಿಸಿದೆ” ಎಂದು ಖರ್ಗೆ ಆರೋಪಿಸಿದರು.

“ದೆಹಲಿ ಪೊಲೀಸರು ಮತ್ತು ಸಿಆರ್‌ಪಿಎಫ್ ಕೇಂದ್ರ ಗೃಹ ಸಚಿವರ ನೇರ ಅಧಿಕಾರ ವ್ಯಾಪ್ತಿಗೆ ಬರುತ್ತದೆ. ಗೃಹ ಸಚಿವಾಲಯದ ಅನುಮೋದನೆ ಇಲ್ಲದೆ ಅಂತಹ ಕ್ರಮ ನಡೆಯಲು ಸಾಧ್ಯವಿಲ್ಲ. ನೀವು ಯಾವುದಕ್ಕೂ ಉತ್ತರಿಸದೆ ಕೋಣೆಯೊಳಗೆ ಕುಳಿತಿದ್ದೀರಿ, ಆದರೆ ನಾವು ನಿಮ್ಮನ್ನು ಹೊರಗೆ ತರುತ್ತೇವೆ. ಗೃಹ ಸಚಿವರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಖರ್ಗೆ ಹೇಳಿದರು.

ದೆಹಲಿಯಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಬಗ್ಗೆ ಅಮಿತ್ ಶಾ ಅವರಿಂದ ಉತ್ತರಕ್ಕೆ ಅವರು ಒತ್ತಾಯಿಸಿದರು.

ಮಸೂದೆ ಸಮಯವನ್ನು ಪ್ರಶ್ನಿಸಿದ ಖರ್ಗೆ, ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ಮಸೂದೆಯನ್ನು ಮೊದಲೇ ಏಕೆ ತರಲಿಲ್ಲ ಎಂದು ಕೇಳಿದರು.

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯವನ್ನು ಭದ್ರಪಡಿಸುವ ಬದಲು ರಾಜಕೀಯದಲ್ಲಿ ನಿರತವಾಗಿದೆ ಎಂದು ಅವರು ಆರೋಪಿಸಿದರು. “ದೆಹಲಿಯಲ್ಲಿ ಪ್ರತಿಭಟನೆಗಳನ್ನು ನಿಲ್ಲಿಸಲು ನೀವು ಮಸೂದೆಯನ್ನು ತಂದಿದ್ದೀರಿ. ಸುಧಾರಣೆಗಳಿಗಾಗಿ ನೀವು ಮಸೂದೆಯನ್ನು ತಂದಿಲ್ಲ” ಎಂದು ಅವರು ಆರೋಪಿಸಿದರು.

“ಬಿಜೆಪಿಯ ರಾಜಕೀಯದಿಂದಾಗಿ, ದೇಶವು ಪ್ರಶ್ನೆಪತ್ರಿಕೆ ಸೋರಿಕೆ, ಪ್ರತಿಭಟನೆಗಳು ಮತ್ತು ಪೊಲೀಸ್ ದೌರ್ಜನ್ಯಕ್ಕೆ ಸಾಕ್ಷಿಯಾಗಬೇಕಾಯಿತು. ಆಡಳಿತ ಪಕ್ಷವು ಕ್ಷುಲ್ಲಕ ರಾಜಕೀಯದಲ್ಲಿ ತೊಡಗದಿದ್ದರೆ ಇದೆಲ್ಲವನ್ನೂ ತಡೆಯಬಹುದಿತ್ತು” ಎಂದು ಹೇಳಿದರು.

ಪ್ರತಿಭಟನಾಕಾರರ ಮೇಲೆ ಉಂಟಾಗುವ ಪ್ರತಿಯೊಂದು ಗಾಯಕ್ಕೂ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ, ಪ್ರಶ್ನೆಪತ್ರಿಕೆ ಸೋರಿಕೆಯ ನಂತರ ಹಾನಿ ನಿಯಂತ್ರಣದ ಮೇಲೆ ಕೇಂದ್ರೀಕರಿಸುವುದು ಸಾಕಾಗುವುದಿಲ್ಲ ಎಂದು ಅವರು ವಾದಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಿಲ್ಲಿಸಲು ಸರ್ಕಾರ ಹೇಗೆ ನಿಖರವಾಗಿ ಯೋಜಿಸಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಿಲ್ಲ ಎಂದು ಅವರು ಆರೋಪಿಸಿದರು.

“ಈಗಿರುವ ಉದ್ವಿಗ್ನ ವಾತಾವರಣವನ್ನು ತಗ್ಗಿಸಲು, ಬೀದಿಗಿಳಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ಸಮಾಧಾನಪಡಿಸಲು ಮಸೂದೆಯನ್ನು ಪರಿಚಯಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ನಡೆದ ಘಟನೆಗಳು ರಾಷ್ಟ್ರವನ್ನೇ ಬೆಚ್ಚಿಬೀಳಿಸಿವೆ. ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ಪರೀಕ್ಷಾ ವ್ಯವಸ್ಥೆಯ ವೈಫಲ್ಯಗಳ ವಿರುದ್ಧ ಧ್ವನಿ ಎತ್ತಿದ್ದರು. ವಿರೋಧ ಪಕ್ಷಗಳು ಬೀದಿಗಳಿಂದ ಸಂಸತ್ತಿನವರೆಗೆ ಆ ಧ್ವನಿಯನ್ನು ಹೆಚ್ಚಿಸಿದ್ದವು” ಎಂದರು ಹೇಳಿದರು.

ವಿದ್ಯಾರ್ಥಿಗಳು ಮತ್ತು ಯುವಜನರನ್ನು ಅಭಿನಂದಿಸಿದ ಅವರು, “ವಿದ್ಯಾರ್ಥಿಗಳ ಹೋರಾಟವು ಫಲ ನೀಡಿದೆ, ಸರ್ಕಾರವು ಕಾರ್ಯನಿರ್ವಹಿಸುವಂತೆ ಒತ್ತಾಯಿಸಿದರು, ಧರ್ಮೇಂದ್ರ ಪ್ರಧಾನ್ ಅವರನ್ನು ಪದಚ್ಯುತಗೊಳಿಸಲು ಕಾರಣವಾಯಿತು. ಇದು ಯುವಕರ ಶಕ್ತಿಯನ್ನು ಪ್ರದರ್ಶಿಸಿತು” ಎಂದರು.

“ಅಧಿಕಾರ ಕಳೆದುಕೊಳ್ಳುವ ಭಯದಿಂದ, ಸರ್ಕಾರವು ಬೇಡಿಕೆಗಳಿಗೆ ಒಪ್ಪಿಕೊಂಡಿತು, ಆದರೂ ಅದರ ಮೂಲ ಉದ್ದೇಶ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ನಿಜವಾಗಿಯೂ ಪರಿಹರಿಸುವ ಬದಲು ತನ್ನದೇ ಆದ ಸ್ಥಾನವನ್ನು ರಕ್ಷಿಸಿಕೊಳ್ಳುವುದಾಗಿತ್ತು” ಎಂದು ಖರ್ಗೆ ಹೇಳಿದರು.

“ಆರಮಭದಲ್ಲೇ ಪರೀಕ್ಷಾ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸಿದಾಗ, ಸರ್ಕಾರವು ನಮ್ಮ ಕಳವಳಗಳನ್ನು ತಳ್ಳಿಹಾಕಿತು. ಪ್ರತಿಯೊಂದು ಪ್ರಶ್ನೆಯನ್ನು ರಾಜಕೀಯ ಪ್ರೇರಿತ ಎಂದು ಲೇಬಲ್ ಮಾಡಿತು” ಎಂದು ಅವರು ನೆನಪಿಸಿಕೊಂಡರು.

“ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು. ಆದರೆ ಯಾರೂ ಅವರೊಂದಿಗೆ ಭಾಗಿಯಾಗಲಿಲ್ಲ. ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪರಿಹರಿಸಲು ಪ್ರತಿಭಟನಾಕಾರರನ್ನು ಚರ್ಚೆಗೆ ಆಹ್ವಾನಿಸುವ ಬದಲು, ಸರ್ಕಾರ ಅವರನ್ನು ನಿರ್ಲಕ್ಷಿಸಿತು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...