Homeಮುಖಪುಟಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

ಸಿಂಘು ಗಡಿಯಲ್ಲಿ ಕೊಲೆ: ಪಶ್ಚಾತಾಪವಿಲ್ಲವೆಂದ ಆರೋಪಿ ನಿಹಾಂಗ್

- Advertisement -
- Advertisement -

ಸಿಂಘು ಗಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ್ದ ಬರ್ಬರ ಹತ್ಯೆಯ ಹೊಣೆ ಹೊತ್ತಿರುವ ನಿಹಾಂಗ್ ಗುಂಪಿನ ಸರವ್ ಜಿತ್ ಸಿಂಗ್ ತನ್ನ ಕೃತ್ಯಕ್ಕೆ ಯಾವುದೇ ಪಶ್ಚಾತಾಪವಿಲ್ಲ ಎಂದಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಬರ್ಬರ ಕೊಲೆಗೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ವೈರಲ್ ಆಗಿವೆ. ಶರಣಾಗುವ ಮುನ್ನ ದಾಖಲಾಗಿರುವ ವಿಡಿಯೋವೊಂದರಲ್ಲಿ ಪತ್ರಕರ್ತನೊಬ್ಬ ನಿಮಗೆ ಪಶ್ಚಾತಾಪವಿದೆಯೇ ಎಂಬ ಪ್ರಶ್ನೆಗೆ ಸರವ್ ಜಿತ್ ಸಿಂಗ್ ಎಂದು ತಲೆಯಾಡಿಸಿದ್ದಾನೆ.

ನ್ಯಾಯಾಲಯವು ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನು ನಾಲ್ವರು ಶಂಕಿತರಿಂದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.

ಮೃತರನ್ನು ಪಂಜಾಬ್‌ನ ತರ್ನ್‌ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ (35) ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ. ದಲಿತರಾಗಿರುವ ಅವರು ಕಾರ್ಮಿಕರಾಗಿದ್ದು, ದತ್ತು ಪುತ್ರ, ಒಬ್ಬ ಸಹೋದರಿ, ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಲಖ್ಬೀರ್ ಸಿಂಗ್ ಅವರನ್ನು ಹೊಡೆದು ಸಾಯಿಸಲಾಗಿದೆ. ಆತನ ಎಡಗೈ ಮತ್ತು ಬಲಗಾಲನ್ನು ಕತ್ತರಿಸಲಾಗಿದೆ ಎಂದು ವರದಿಗಳು ಹೇಳುತ್ತವೆ. ನಂತರ ಆತನ ಕೊಲೆಗಾರರು ಶವವನ್ನು ಪೊಲೀಸ್ ಬ್ಯಾರಿಕೇಡ್‌ಗೆ ಕಟ್ಟಿದ್ದರು ಎಂದು ತಿಳಿದುಬಂದಿದೆ.

ಆದರೆ ಲಖ್ಬೀರ್ ಸಿಂಗ್ ಸ್ವಗ್ರಾಮದಲ್ಲಿನ ಜನರು ಬೇರೆಯದೆ ಹೇಳಿಕೆ ನೀಡುತ್ತಿದ್ದಾರೆ. “ಅವನು ಇದನ್ನು ಮಾಡಲು ಸಾಧ್ಯವಿಲ್ಲ; ಅವನು ಆ ರೀತಿಯ ವ್ಯಕ್ತಿಯಲ್ಲ. ಅವನಿಂದ ಇದನ್ನು ಮಾಡಿಸಲಾಗಿದೆ” ಎಂದು ಮಾಸಾ ಸಿಂಗ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ. “ಲಖ್ಬೀರ್ ಸಿಖ್ ಧರ್ಮಗ್ರಂಥವನ್ನು ಅಪವಿತ್ರಗೊಳಿಸುವುದರಲ್ಲಿ ಭಾಗಿಯಾಗಿರಲು ಸಾಧ್ಯವಿಲ್ಲ. ಆತನನ್ನು ಆ ಕೃತ್ಯ ಎಸಗುವಂತೆ ಪ್ರೇರೆಪಿಸಲಾಗಿದೆ” ಎಂದು ನಿವೃತ್ತ ಸೈನಿಕ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಇದೇ ರೀತಿಯ ಆರೋಪವನ್ನು ಸಂಯುಕ್ತ ಕಿಸಾನ್ ಮೋರ್ಚಾದ ಜಗ್ಜಿತ್ ಸಿಂಗ್ ದಲ್ಲೆವಾಲ್ ಮಾಡಿದ್ದರು. ಮೃತ ವ್ಯಕ್ತಿಗೆ 30,000 ಹಣದ ಆಮಿಷವೊಡ್ಡಿ ಈ ಕೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದಿದ್ದರು.

ಸಂಯುಕ್ತ ಕಿಸಾನ್‌ ಮೋರ್ಚಾ ಖಂಡನೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಕಾನೂನುಬದ್ಧ ತನಿಖೆಗೆ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...