Homeಮುಖಪುಟಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ವರದಿಗಳು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ ಮಂಗಳವಾರ (ಜುಲೈ 22) ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಠಾವಳೆ, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ, 2013, ಡಿಸೆಂಬರ್ 6, 2013 ರಿಂದ ಜಾರಿಗೆ ಬಂದಿದ್ದು, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಶೌಚಗುಂಡಿಗಳು ಅಥವಾ ಮ್ಯಾನ್‌ ಹೋಲ್‌ಗಳಿಗೆ ಇಳಿದ ಕಾರ್ಮಿಕರು ಉಸಿರುಗಟ್ಟಿ ಸಾಯುತ್ತಿರುವ ಬಗ್ಗೆ ಪದೇ ಪದೇ ವರದಿಯಾಗುತ್ತಿರುತ್ತವೆ. ವಿವಿಧ ಕಾರ್ಮಿಕ ಮತ್ತು ಸಾಮಾಜಿಕ ಸಂಘ, ಸಂಸ್ಥೆಗಳು, ಹೋರಾಟಗಾರರು ಈ ಪದ್ದತಿ ವಿರುದ್ದ ಧ್ವನಿ ಎತ್ತುತ್ತಿದ್ದಾರೆ. ಆದರೂ, ಈ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ ಎಂದು ಸಚಿವರು ಕೈ ತೊಳೆದುಕೊಂಡಿದ್ದಾರೆ.

ಈ ನಡುವೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನೈರ್ಮಲ್ಯ ಕಾರ್ಮಿಕರ ಸಾವುಗಳನ್ನು ಅಧ್ಯಯನ ಮಾಡಲು ಸಚಿವಾಲಯವು ಸೆಪ್ಟೆಂಬರ್ 2023ರಲ್ಲಿ ಸೋಶಿಯಲ್ ಆಡಿಟ್ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಮುಂಬೈ, ಪುಣೆ, ಪರ್ಭಾನಿ ಮತ್ತು ಸತಾರ ಸೇರಿದಂತೆ ಒಟ್ಟು ಎಂಟು ರಾಜ್ಯಗಳ 17 ಜಿಲ್ಲೆಗಳಲ್ಲಿ 2022 ಮತ್ತು 2023 ರಲ್ಲಿ ಸಂಭವಿಸಿದ 54 ಸಾವುಗಳ ಕುರಿತು ಆಡಿಟ್ ಪರಿಶೀಲಿಸಿದೆ.

ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವುದರಿಂದ ಮತ್ತು 2013ರ ಕಾಯ್ದೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ರೂಪಿಸಲಾದ ಸುರಕ್ಷತಾ ಕಾರ್ಯವಿಧಾನಗಳನ್ನು ಪಾಲಿಸದ ಕಾರಣ ಈ ಸಾವುಗಳು ಸಂಭವಿಸಿವೆ ಎಂದು ಆಡಿಟ್ ಬಹಿರಂಗಪಡಿಸಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಅಂತಹ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಮತ್ತು ನಿಷೇಧಿತ ಚಟುವಟಿಕೆಗಳಲ್ಲಿ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ಕಾರಣರಾದವರ ವಿರುದ್ಧ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಇನ್ನು ಮಲ ಹೊರುವ ಪದ್ದತಿಗೆ ಇತಿಶ್ರಿ ಹಾಡಲು ಸರ್ಕಾರವು 2023–24ರಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ರಾಷ್ಟ್ರೀಯ ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ಕಾರ್ಯ ಯೋಜನೆ ರೂಪಿಸಿದೆ.

ಈ ಉಪಕ್ರಮವು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಯುಎಲ್‌ಬಿ) ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸುವುದು ಮತ್ತು ಅವರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯು ಪಿಪಿಇ ಕಿಟ್‌ಗಳು, ಆಯುಷ್ಮಾನ್ ಭಾರತ್-ಪಿಎಂಜೆಎವೈ ಆರೋಗ್ಯ ಕಾರ್ಡ್‌ಗಳು, ಔದ್ಯೋಗಿಕ ಸುರಕ್ಷತಾ ತರಬೇತಿ, ತುರ್ತು ಪ್ರತಿಕ್ರಿಯೆ ನೈರ್ಮಲ್ಯ ಘಟಕಗಳಿಗೆ (ಇಆರ್‌ಎಸ್‌ಯು) ಸುರಕ್ಷತಾ ಸಾಧನಗಳು, ನೈರ್ಮಲ್ಯ ಯಂತ್ರೋಪಕರಣಗಳಿಗೆ ಬಂಡವಾಳ ಸಬ್ಸಿಡಿಗಳು ಮತ್ತು ಅಪಾಯಕಾರಿ ಶುಚಿಗೊಳಿಸುವ ಪದ್ಧತಿಗಳನ್ನು ತಡೆಗಟ್ಟಲು ಕಾರ್ಯಾಗಾರಗಳನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...