Homeಕರ್ನಾಟಕಕಳೆದ 37 ವರ್ಷಗಳಲ್ಲಿ ಯಾವುದೇ ಆಡಳಿತರೂಢ ಸರ್ಕಾರ ಮರು ಆಯ್ಕೆಯಾಗಿಲ್ಲ; ಈ ಬಾರಿ ಏನಾಗಲಿದೆ?

ಕಳೆದ 37 ವರ್ಷಗಳಲ್ಲಿ ಯಾವುದೇ ಆಡಳಿತರೂಢ ಸರ್ಕಾರ ಮರು ಆಯ್ಕೆಯಾಗಿಲ್ಲ; ಈ ಬಾರಿ ಏನಾಗಲಿದೆ?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ರಂದು ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿಸಂಹಿತೆ ಜಾರಿ ಮಾಡಲಾಗಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಮನೆಮಾಡಿದೆ. ಏಕೆಂದರೆ ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈಗ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಗೆಲುವು ಸಾಧಿಸಿ, ಅಧಿಕಾರಕ್ಕೆ ಮರಳುವುದೇ? ಅಥವಾ ಕರ್ನಾಟಕ ಜನತೆ ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸುತ್ತಾರೆಯೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

ಮೂರು ಪಕ್ಷಗಳ ಮತಗಳು ಭೌಗೋಳಿಕವಾಗಿ ಹಂಚಿಹೋಗಿರುವಲ್ಲಿಯೂ ವ್ಯತ್ಯಾಸಗಳಿವೆ. ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಮತದಾರರು ಗಣನೀಯವಾಗಿ ಇದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತಗಳು ಮುಖ್ಯವಾಗಿ ರಾಜ್ಯದ ಉತ್ತರ ಮತ್ತು ಮಧ್ಯ ಭಾಗದಲ್ಲಿನ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಲಿಂಗಾಯತ ಸಮುದಾಯದ ಬೆಂಬಲವನ್ನು ಬಿಜೆಪಿ ಹೆಚ್ಚಿನ ಮಟ್ಟದಲ್ಲಿ ಪಡೆದಿದೆ. ಜನತಾ ದಳ-ಜಾತ್ಯತೀತ (ಜೆಡಿಎಸ್) ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಕೇಂದ್ರೀಕೃತವಾಗಿದ್ದಾರೆ. ಕಾಂಗ್ರೆಸ್ ಜೊತೆಯಲ್ಲಿ ಪರಿಶಿಷ್ಟ ಜಾತಿಗಳು, ಮುಸ್ಲಿಂ, ಒಬಿಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಗಳು ಗುರುತಿಸಿಕೊಂಡಿವೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚು ಮತಗಳನ್ನು ಪಡೆದರೂ, ಇತರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗೆಲ್ಲಲೂಬಹುದು. ಉದಾಹರಣೆಗೆ, 2004ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 7% ಹೆಚ್ಚು ಮತಗಳನ್ನು ಗಳಿಸಿತು, ಆದರೆ ಬಿಜೆಪಿಯು ಕಾಂಗ್ರೆಸ್‌ ಪಕ್ಷಕ್ಕಿಂತ 14 ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3.5, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ಬಲಾಢ್ಯ ಜಾತಿಗಳ ಪ್ರಾಬಲ್ಯವನ್ನು ಡಿ.ದೇವರಾಜ ಅರಸು (ಮುಖ್ಯಮಂತ್ರಿ, 1972-1980) ಅವರು ಮುರಿದಿದ್ದರು. ಲಿಂಗಾಯತರು ಮತ್ತು ಒಕ್ಕಲಿಗರನ್ನು ಬಿಟ್ಟು ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಜಾತಿಗಳನ್ನು ಸಂಘಟಿಸಿ ಚುನಾವಣಾ ನಿಯಮಗಳನ್ನು ಅರಸು ಬದಲಿಸಿದ್ದರು.

ಆದರೆ ಸಾಂಪ್ರದಾಯಿಕವಾಗಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಪಡೆಯುತ್ತಾರೆ. ಈ ಸಮುದಾಯಗಳ ಸಂಖ್ಯಾ ಬಲಕ್ಕಿಂತ ಹೆಚ್ಚಿನ ರಾಜಕೀಯ ಸ್ಥಾನಮಾನ ಈ ಜಾತಿಗಳಿಗೆ ಇದೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು.

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಮತ್ತೆ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಯಿತು.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಶೇ. 40 ಕಮಿಷನ್ ಆರೋಪವನ್ನು ಈ ಸರ್ಕಾರ ಎದುರಿಸುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿದೆ. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸುತ್ತಿವೆ. ಮತೀಯ ಗೂಂಡಾಗಿರಿ, ಹಿಜಾಬ್ ವಿವಾದ, ಹಲಾಲ್‌ ಕಟ್‌, ಜಟ್ಕಾ ಕಟ್‌, ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಬಳಿ ಅವಕಾಶ ನೀಡಲ್ಲ ಎನ್ನುವುದು- ಇವೆಲ್ಲವೂ 2023ರ ಚುನಾವಣೆಯಲ್ಲಿ ಯಾವ ಪರಿಣಾಮಗಳನ್ನು ಬೀರುತ್ತವೆ ಎಂಬುದು ಸದ್ಯದ ಕುತೂಹಲ. ಒಂದು ವೇಳೆ ಬಿಜೆಪಿ ಸರ್ಕಾರ ಮರು ಆಯ್ಕೆಯಾದರೆ 37 ವರ್ಷಗಳ ರಾಜಕೀಯ ಪರಂಪರೆ ಅಂತ್ಯವಾದಂತೆಯೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...