Homeಕರ್ನಾಟಕ5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ, ಕುಮಾರಿ ಸೇರಿದಂತೆ 20 ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -
- Advertisement -

ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಬೆಂಗಳೂರಿನ ನಿವಾಸದ ಎದುರು ಪ್ರತಿಭಟನೆ ನಡೆಸಿದ 20ಕ್ಕೂ ಹೆಚ್ಚು ಮಂದಿ ಬಿಸಿಯೂಟ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಷರದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ನೌಕರರಿಗೆ ಕಳೆದ ಐದು ತಿಂಗಳಿಂದ  ಗೌರವಧನ ನೀಡಿಲ್ಲ. ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಕಿವಿಗೊಡುತ್ತಿಲ್ಲ. ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳನ್ನು ಬೇಟಿಯಾಗಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಬಿಸಿಯೂಟ ನೌಕರರನ್ನು ಪಿಎಫ್, ಇಎಸ್ಐ ಅಡಿ ತರಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಎಳೆದಾಡಿದರು. ಮಹಿಳೆಯರು ಎಂಬುದನ್ನು ನೋಡದೆ ತಳ್ಳಿಹಾಕಿದರು. ಪುರುಷ ಪೊಲೀಸರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದರು ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ, ಕುಮಾರಿ ಸೇರಿದಂತೆ 20 ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಷರದಾಸೋಹ ನೌಕರರಿಗೆ ನೀಡಬೇಕಾದ ಗೌರವಧನ ಕೇಳಲು ಹೋದರೆ ಸರ್ಕಾರ ಪ್ರತಿಭಟನಾಕಾರ ರನ್ನು ಬಂಧಿಸಿ ಹಕ್ಕುಗಳನ್ನು ದಮನ ಮಾಡುತ್ತಿದೆ ಎಂದು ಸಿಐಟಿಯು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...