Homeಕರ್ನಾಟಕಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ.

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಐದು ತಿಂಗಳಾದರೂ ಗೌರವಧನ ಬಿಡುಗಡೆಯಾಗಿಲ್ಲ. ಹತ್ತು-ಹದಿನೈದು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತೆಯರು ಇದೀಗ ಕೊರೊನಾ ಲಾಕ್‌ಡೌನ್‌ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಯಾವುದೇ ಅಧಾಯದ ಮೂಲಗಳು ಇಲ್ಲದ ಅವರು ಇದೇ ವೃತ್ತಿಯನ್ನು ನಂಬಿ ಜೀವನ ದೂಡುತ್ತಿದ್ದು, ಗೌರವಧನ ಸಿಗದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಬಂದಿದೆ.

ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಇವರನ್ನು ಗೌರವಧನದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳು ಆರಂಭವಾಗುವ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ಬಿಸಿಯೂಟ ಕಾರ್ಯಕರ್ತೆಯರಿಗೆ ಸಂಜೆ 4 ಗಂಟೆಯವರೆಗೂ ಕೆಲಸವಿರುತ್ತದೆ.

ಯಾವುದೇ ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರು ಇಲ್ಲ. ಹಾಗಾಗಿ ಬಿಸಿಯೂಟ ಮಾಡುವ ಮೊದಲು ಕೊಠಡಿಗಳು ಮತ್ತು ಆವರಣ ಸ್ವಚ್ಚಗೊಳಿಸುವ ಕೆಲಸವೂ ಬಿಸಿಯೂಟ ಕಾರ್ಯಕರ್ತೆಯರ ಮೇಲೆ ಬೀಳುತ್ತದೆ. ಕೈತೋಟಗಳನ್ನು ಆರೈಕೆ ಮಾಡುವ ಕೆಲಸವನ್ನು ನೋಡಿಕೊಳ್ಳಬೇಕಾಗುತ್ತದೆ. ಬಿಸಿಯೂಟ ಮಾಡಿ ಮಕ್ಕಳಿಗೆ ಊಟ ಬಡಿಸಿದ ಮೇಲೆ ಪಾತ್ರೆಗಳ ಶುಚಿಗೊಳಿಸುವುದು ನಂತರ ಶಾಲಾ ಕೈತೋಟದಲ್ಲಿ ಕೆಲಸ ಇರುತ್ತದೆ.

ದಿನದ ಸುಮಾರು ಆರು ಗಂಟೆಗಳನ್ನು ಶಾಲೆಯಲ್ಲೇ ಕಳೆಯಬೇಕಾಗುತ್ತದೆ. ಹಾಗಾಗಿ ಬಿಸಿಯೂಟದವರು ಬೇರೆ ಕೂಲಿ ಕೆಲಸಗಳಿಗೂ ಹೋಗಲು ಸಾಧ್ಯವಿಲ್ಲ. ಅಕ್ಷರದಾಸೋಹ ಯೋಜನೆಯಡಿ ಬರುವ ಮಾಸಿಕ 2600 ರೂ ಗೌರವಧನ ಹೊರತುಪಡಿಸಿ ಬೇರೆ ಹಣಕಾಸಿನ ಮೂಲಗಳು ಇಲ್ಲ. ಬರುವ ಕಡಿಮೆ ಗೌರವಧನದಲ್ಲಿ ಕುಟುಂಬವನ್ನು ನಿರ್ವಹಣೆ ಮಾಡಬೇಕಾಗಿದೆ.

ಕೊರೊನ ಸೋಂಕು ವ್ಯಾಪಕವಾಗಿ ಸಮುದಾಯದ ನಡುವೆ ಹರಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಕೋವಿಡ್-19 ಮತ್ತು ಲಾಕ್ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಮಾಡಿದೆ. ಐದು ತಿಂಗಳಿಂದ ಗೌರವಧನ ಸಿಕ್ಕಿಲ್ಲ. ಕೂಲಿಯೂ ಇಲ್ಲ, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬಿಸಿಯೂಟ ಮಹಿಳೆಯರು ನಾನುಗೌರಿ.ಕಾಂ ಜೊತೆ ನೋವು ತೋಡಿಕೊಂಡರು.

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ ಮಾತನಾಡಿ “ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಹಲವು ಮನವಿಗಳನ್ನು ನೀಡಿದ್ದೇವೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇವೆ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದೇವೆ. ಅವರೆಲ್ಲರೂ ಕೊಡುವ ಮಾತನಾಡುತ್ತಾರೆಯೇ ಹೊರತು ಕೊಟ್ಟಿಲ್ಲ. ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ಕೊಡುವ ಭರವಸೆಗಳನ್ನು ನೀಡಿದರು. ಆದರೂ ಹಣ ಬಂದಿಲ್ಲ. ಹಾಗಾಗಿ ಆಗಸ್ಟ್ 11 ರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ನಿನ್ನೆ ಮತ್ತು ಇಂದು ರಜೆ ಇದ್ದರಿಂದ ಉಪವಾಸವನ್ನು ನಿಲ್ಲಿಸಿದ್ದೆವು. ಆಗಸ್ಟ್ 17ರಿಂದ ಮತ್ತೆ ಉಪವಾಸ ಕೂರುತ್ತೇವೆ ಎಂದು ಅವರು ಹೇಳಿದರು.

ಏಪ್ರಿಲ್ ತಿಂಗಳಿಂದಲೂ ಹಣ ಬಿಡುಗಡೆಯಾಗದೇ ಇರುವುದು ಬಡತನದಲ್ಲಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರು ಕುಟುಂಬಗಳನ್ನು ಸಂಭಾಳಿಸುವುದು ಕಷ್ಟವಾಗಿದೆ. ಕೂಡಲೇ ಸರ್ಕಾರ ಗೌರವಧನ ಬಿಡುಗಡೆ ಮಾಡಬೇಕು. ಅವರ ಕುಟುಂಬಗಳನ್ನು ರಕ್ಷಣೆ ಮಾಡಬೇಕು ಎಂದು ಮಾಲಿನಿ ಮೆಸ್ತ ಆಗ್ರಹಿಸಿದರು.


ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...