Homeಮುಖಪುಟಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ: ಯಡಿಯೂರಪ್ಪ

ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂಬ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಶಿಫಾರಸಿನ ಆಧಾರದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳ ಆರಂಭ ಇಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಇಲಾಖೆಯ ಪ್ರತಿನಿಧಿಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದ ಯಡಿಯೂರಪ್ಪ ಈ ಕ್ರಮ ಕೈಗೊಂಡಿದ್ದಾರೆ.

ಭಾನುವಾರ (ನವೆಂಬರ್ 22) ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರ್ಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ.

ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...