Homeಚಳವಳಿದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

- Advertisement -
- Advertisement -

ಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ ಗ್ರಾಮದ ದಲಿತ ಮುಖಂಡರು ಮತ್ತು ಸಮಾಜ ಪರಿವರ್ತನೆ ಸಂಘಟನೆಯ ಮುಖಂಡರಾದ ಚೆಲುವರಾಜುರವರ ಪ್ರಶ್ನಿಸಿ ಪ್ರತಿಭಟಿಸಿದ ನಂತರವಷ್ಟೇ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದರಿಂದ ದಲಿತರಿಗೆ ಕ್ಷೌರ ಮಾಡಲಾಗಿದೆ.

ದಲಿತ ಮುಖಂಡರಾದ ಚೆಲುವರಾಜುರವರು ಕಣಿವೆಕೊಪ್ಪಲು ಗ್ರಾಮದಲ್ಲಿ ಆರಂಭವಾಗಿರುವ ಸ್ನೇಹಜೀವಿ ಮೆನ್ಸ್ ಬ್ಯೂಟಿ ಪಾರ್ಲರ್‌ನಲ್ಲಿ ಏಕೆ ದಲಿತರಿಗೆ ಕಟಿಂಗ್, ಸೇವಿಂಗ್ ಮಾಡುವುದಿಲ್ಲ, ನಿಮಗೆ ಸಮಸ್ಯೆಯೇನು? ಅವರು ದುಡ್ಡು ಕೊಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೆಯಿಂದಲೂ ಮಾಡಿಲ್ಲ. ಹಾಗಾಗಿ ಈಗಲೂ ಮಾಡುವುದಿಲ್ಲ ಎಂದು ಕ್ಷೌರದ ಅಂಗಡಿಯ ಮಾಲೀಕ ಕುಮಾರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಸಂವಿಧಾನದ ಅಡಿಯಲ್ಲಿ ಈ ದೇಶ ನಡೆಯುತ್ತಿದೆ ಮತ್ತು ಸಂವಿಧಾನವು ಎಲ್ಲಾ ರೀತಿಯ ಅಸ್ಪೃಶ್ಯತೆಯನ್ನು ನಿಷೇಧಿಸಿದೆ. ನಾವೆಲ್ಲರೂ ಸರ್ವ ಸಮಾನರಾಗಿದ್ದು ನೀವು ಸಾರ್ವಜನಿಕ ಸೇವೆ ನೀಡುವಾಗ ತಾರತಮ್ಯ ಮಾಡುವಂತಿಲ್ಲ ಎಂದು ಚೆಲುವರಾಜುರವರು ತಾಕೀತು ಮಾಡಿದ್ದಾರೆ.

ಇಂದು ಬೆಳಿಗ್ಗೆಯಿಂದ ಇಬ್ಬರು ದಲಿತರಿಗೆ ನೀವು ಕ್ಷೌರ ಮಾಡಲು ನಿರಾಕರಿಸಿದ್ದೀರಿ. ಇದು ಕಾನೂನಿನ ಪ್ರಕಾರ ಅಪರಾಧವಾಗಿದೆ ಎಂದು ಚೆಲುವರಾಜುರವರು ಹೇಳಿದಾಗ ಅಲ್ಲೆ ಕ್ಷೌರ ಮಾಡಿಸಿಕೊಳ್ಳುತ್ತಿದ್ದ ಸವರ್ಣಿಯ ಜಾತಿಗೆ ಸೇರಿದವನೊಬ್ಬ ಹಿಂದೆ ಮಾಡಿಲ್ಲ, ಹೀಗಲೂ ಮಾಡುವುದಿಲ್ಲ ಎಂದು ಜೋರು ಮಾಡಿದ್ದಾರೆ. ತದನಂತರ ಚೆಲುವರಾಜುರವರು ದಲಿತ ಯುವಕರ ಜೊತೆ ಸೇರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಅಂಗಡಿ ಮಾಲೀಕನಿಗೆ ಬುದ್ದಿ ಹೇಳಿ ಅಲ್ಲಿಯೇ ದಲಿತ ಯುವಕರಿಗೆ ಕಟಿಂಗ್ ಸೇವಿಂಗ್ ಮಾಡಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿದ ಚೆಲುವರಾಜುರವರು “ಇಷ್ಟು ದಿನಗಳಾದರೂ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ಜಾತಿಪದ್ದತಿ ಜಾರಿಯಲ್ಲಿರುವುದು ದುರಂತ. ಜನ ಎಷ್ಟೇ ವಿದ್ಯಾವಂತರಾದರೂ ಜನ ಸಂವಿಧಾನವನ್ನು ಅರ್ಥ ಮಾಡಿಕೊಂಡಿಲ್ಲ, ಅಸ್ಪೃಶ್ಯತೆ ಆಚರಣೆ ನಿಲ್ಲಿಸಿಲ್ಲ. ಈ ದೇಶದ ಶೇ.95 ರಷ್ಟು ಹಳ್ಳಿಗಳ ಪರಿಸ್ಥಿತಿ ಇದೇ ರೀತಿಯಲ್ಲಿದೆ. ಹಾಗಾಗಿ ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ” ಎಂದರು.

ನಮ್ಮ ಹೋರಾಟದ ನಂತರ ಕೊನೆಗೂ ಸಣ್ಣ ಜಯ ಸಿಕ್ಕಿದೆ. ನಮ್ಮೂರಿನ ದಲಿತರಿಗೆ ಕ್ಷೌರ ಮಾಡಲಾಗಿದೆ. ಹಂತ ಹಂತವಾಗಿ ಎಲ್ಲಾ ರೀತಿಯ ಅಸ್ಪೃಶ್ಯತೆ ನಿರ್ಮೂಲನೆಗೆ ಹೋರಾಡುತ್ತೇವೆ ಎಂದಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲೆರೆ ಎಂಬ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಿದ ಏಕೈಕ ಕಾರಣಕ್ಕೆ ಸವಿತಾ ಸಮಾಜದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಜರುಗಿತ್ತು. ಇದಕ್ಕೆ ವ್ಯಾಪಕ ವಿರೋಧ ಕೇಳಿಬಂದ ನಂತರ ತಹಶೀಲ್ದಾರ್‌ರವರು ಗ್ರಾಮಕ್ಕೆ ತೆರಳಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡಿದ್ದರು.

ಸಂವಿಧಾನದ 17ನೇ ವಿಧಿಯು ಎಲ್ಲಾ ರೀತಿಯ ಅಸ್ಪೃಶ್ಯತೆ ಆಚರಣೆಯನ್ನು ನಿಷೇಧಿಸುತ್ತದೆ. ದೇವಾಲಯ ಪ್ರವೇಶಕ್ಕೆ ನಿರಾಕರಣೆ, ಬಾವಿ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ತಡೆ, ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ಆಚರಿಸುವುದರಲ್ಲಿ ತಾರತಮ್ಯವನ್ನು ನಿಷೇಧಿಸುತ್ತದೆ. ಈ ಆಚರಣೆಗೆಳು ಮುಂದುವರೆದರೆ ಅದನ್ನು ಅಸ್ಪೃಶ್ಯತೆ ಎಂದು ಪರಿಗಣಿಸುವುದು ಹಾಗೂ ಅದನ್ನು ಆಚರಿಸುವ ವ್ಯಕ್ತಿ ಆಪಾದಿತ ಎಂದು ಪರಿಗಣಿಸುವುದು ಹಾಗೂ ಅದನ್ನು ಅಲ್ಲಗಳೆಯುವ ಜವಾಬ್ದಾರಿಯನ್ನು ಆಪಾದಿತನ ಮೇಲೆ ಹೊರಿಸುವುದು ಕಾಯಿದೆಯ ಮುಖ್ಯ ಅಂಶವಾಗಿತ್ತು. ಆದರೆ ಶಿಕ್ಷೆಯ ಪ್ರಮಾಣ ಮುಂತಾದ ಹಲವು ನ್ಯೂನತೆಗಳಿಂದಾಗಿ ಕಾನೂನಿನಲ್ಲಿ ಬದಲಾವಣೆ ತರಬೇಕಾಯಿತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು (ದೌರ್ಜನ್ಯಗಳ ತಡೆ) ಕಾಯಿದೆ 1989 ಮತ್ತು 1995ರಲ್ಲಿ ಅದರಡಿ ರೂಪಿಸಲಾದ ನಿಯಮಗಳು ಜಾರಿಯಲ್ಲಿವೆ.


ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...