Homeಮುಖಪುಟ'ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

‘ಸಂಘರ್ಷ ಶಮನಕ್ಕೆ ಯಾವುದೇ ಪರಿಹಾರ ತಿಳಿಸಿಲ್ಲ’: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

- Advertisement -
- Advertisement -

ಜನಾಂಗೀಯ ಸಂಘರ್ಷ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಶನಿವಾರ (ಸೆ.13) ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡಿದ್ದು, ಇಂಫಾಲ್ ಮತ್ತು ಚುರಚಂದಪುರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೂ ಮೊದಲು, ಸಂಘರ್ಷದ ಪರಿಣಾಮ ಆಂತರಿಕವಾಗಿ ಸ್ಥಳಾಂತರಗೊಂಡ ಮೈತೇಯಿ ಮತ್ತು ಕುಕಿ-ಝೋ ಬುಡಕಟ್ಟು ಸಮುದಾಯಗಳ ಜನರನ್ನು (ಐಡಿಪಿಗಳು) ಪ್ರಧಾನಿ ಭೇಟಿಯಾಗಿದ್ದಾರೆ. ಈ ವೇಳೆ ಅವರು ನಡೆಸಿರುವ ಚರ್ಚೆಯ ಕುರಿತು ಎರಡೂ ಸಮುದಾಯಗಳ ಜನರನ್ನು ಅತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಿರಾಶ್ರಿತರಿಗೆ ಪ್ರಧಾನಿ ಜೊತೆ ಇಂತಿಷ್ಟೇ ಮಾತನಾಡಬೇಕು ಮತ್ತು ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಬೇಕು ಎಂಬ ಒಂದು ಮಿತಿಯನ್ನು ನಿಗದಿಪಡಿಸಲಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿರುವ ಚುರಚಂದಪುರದ ಕೆಲವು ಸ್ಥಳೀಯರು, ಕೇಂದ್ರಾಡಳಿತ ಪ್ರದೇಶ ರಚನೆಯ ಮೂಲಕ ‘ಪ್ರತ್ಯೇಕ ಆಡಳಿತ’ದ ನಮ್ಮ ಬೇಡಿಕೆಯನ್ನು ಮುಂದಿಡಲು ಸಾಧ್ಯವಾಗಿಲ್ಲ” ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

“ಪ್ರತ್ಯೇಕ ಆಡಳಿತದ ಬಗ್ಗೆ ಪ್ರಧಾನಿಯೊಂದಿಗೆ ಏನನ್ನೂ ಕೇಳಬಾರದು ಎಂದು ನಮಗೆ ಸೂಚಿಸಲಾಗಿತ್ತು. ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಇತ್ಯಾದಿ ವಿಷಯಗಳ ಬಗ್ಗೆ ಮಾತ್ರ ಮಾತನಾಡಲು ಅನುಮತಿ ನೀಡಲಾಗಿತ್ತು” ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಚುರಚಂದಪುರದ ನಿವಾಸಿಯೊಬ್ಬರು ಹೇಳಿದ್ದಾಗಿ ವರದಿ ವಿವರಿಸಿದೆ.

ಪ್ರಧಾನಿ ಮೋದಿ ಹಿಂದಿಯಲ್ಲಿ ಮಾತನಾಡಿದ ಬಗ್ಗೆಯೂ ಸ್ಥಳೀಯರ ಒಂದು ಗುಂಪು ಅಸಮಾಧಾನ ವ್ಯಕ್ತಪಡಿಸಿದೆ.

“ಅವರು ಮಿಜೋರಾಂನಲ್ಲಿ ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದರು. ಆದರೆ, ಚುರಚಂದಪುರದಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. ಈ ಬಗ್ಗೆ ನಮಗೆ ಅಸಮಾಧಾನವಿದೆ. ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸಿಲ್ಲ. ಅಭಿವೃದ್ಧಿ ಪ್ಯಾಕೇಜ್ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಹೆಸರು ಬಹಿರಂಗಪಡಿಸಲು ಬಯಸದ ಮತ್ತೊಬ್ಬರು ಸ್ಥಳೀಯರು ಹೇಳಿದ್ದಾರೆ.

ಇದು ಒಬ್ಬ ವ್ಯಕ್ತಿಯ ಭಾವನೆಯಲ್ಲ, ಬದಲಾಗಿ ಸಾರ್ವಜನಿಕ ಭಾವನೆ ಎಂದು ಆ ಸ್ಥಳೀಯ ತಿಳಿಸಿದ್ದಾರೆ.

“ಸಂಘರ್ಷವನ್ನು ಪರಿಹರಿಸುವ ಯಾವುದೇ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿಲ್ಲ. ಸರ್ಕಾರಕ್ಕೆ ಯೋಜನೆಗಳಿದ್ದರೆ, ಅವರೇ ಏನಾದರೂ ಹೇಳಬೇಕೆಂದು ನಾವೆಲ್ಲರೂ ಬಯಸುತ್ತಿದ್ದೆವು. ಅಲ್ಲದೆ, ಭಾಷಣವೂ ಸಂಕ್ಷಿಪ್ತವಾಗಿತ್ತು. ಆದರೆ, ಪ್ರತಿಕೂಲ ಹವಾಮಾನದ ಹೊರತಾಗಿಯೂ ಅವರು ಬಂದಿದ್ದಕ್ಕೆ ನಮಗೆ ಸಂತೋಷವಾಗಿದೆ” ಎಂದು ಮತ್ತೊಬ್ಬರು ಸ್ಥಳೀಯ ಮುಂಗ್ ಹಂಘಲ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಇಂಫಾಲದಲ್ಲಿ ಪ್ರಧಾನಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡುವ ಮೊದಲು ನಿರಾಶ್ರಿತರನ್ನು ಭೇಟಿಯಾದಾಗ, ಅವರಲ್ಲಿ ಕೆಲವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿಯ ಮಾತುಗಳಿಂದ ಸ್ಥಳೀಯರು ತೃಪ್ತರಾಗಿಲ್ಲ ಎಂದು ವರದಿ ಹೇಳಿದೆ.

ಚುರಚಂದಪುರದಂತೆಯೇ, ಇಂಫಾಲದ ಜನರೂ ಕೂಡ ಪ್ರಧಾನಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆಂದು ನಿರೀಕ್ಷಿಸಿದ್ದರು. “ಪ್ರಧಾನಿಯ ಭಾಷಣ ಚೆನ್ನಾಗಿತ್ತು, ಆದರೆ ನನಗೆ ಖಚಿತವಿಲ್ಲ. ಪರಿಹಾರದ ಹಾದಿ ನಮಗೆ ತಿಳಿದಿಲ್ಲ” ಎಂದು ಇಂಫಾಲದ ಸ್ಥಳೀಯ ಸೂರಜ್‌ಕುಮಾರ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ಭೇಟಿಯಿಂದ ಕೆಲವು ಅಭಿವೃದ್ಧಿ ಯೋಜನೆಗಳು ಘೋಷಣೆಯಾಗಿವೆ. ಆದರೆ, ಪರಿಹಾರ ಶಿಬಿರಗಳಲ್ಲಿ ಇನ್ನೂ ನರಳುತ್ತಿರುವ ಸ್ಥಳಾಂತರಗೊಂಡ ಮೈತೇಯಿ ಕುಟುಂಬಗಳಿಗೆ ಅದು ದೊಡ್ಡ ಭರವಸೆ ನೀಡಿಲ್ಲ. ಪುನರ್ವಸತಿ ಬಗ್ಗೆ ಸ್ಪಷ್ಟತೆಯನ್ನು ನಾವು ನಿರೀಕ್ಷಿಸಿದ್ದೆವು. ಜನರು ಯಾವಾಗ ತಮ್ಮ ಮನೆಗಳಿಗೆ ಮರಳಲು ಸಾಧ್ಯವಾಗುತ್ತದೆ, ಅವರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಮತ್ತು ಯಾವ ಪುನರ್ವಸತಿ ಪ್ಯಾಕೇಜ್‌ಗಳನ್ನು ನೀಡಲಾಗುತ್ತದೆ?”ಎಂದು ಇಂಫಾಲದ ನಿವಾಸಿ ಲೀಶಾಂಗ್ಥೆಮ್ ಪ್ರಿಯೊ ಪ್ರಶ್ನಿಸಿದ್ದಾರೆ.

Courtesy :newindianexpress.com

ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...