“ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಯಾವ ರಾಜ್ಯಗಳೂ ಆಗ್ರಹಿಸಿಲ್ಲ” ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
“ನೀತಿ ಆಯೋಗದ ಆಡಳಿತ ಮಂಡಳಿಯ ಆರನೇ ಸಭೆಯಲ್ಲಿ ಭಾಗವಹಿಸಿದ್ದ ಯಾವ ರಾಜ್ಯಗಳು ಕೂಡಾ ಹೊಸ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿಲ್ಲ. ಸಭೆಯಲ್ಲಿ ನಡೆದ ಚರ್ಚೆಗಳು ಕೃಷಿ ವಲಯದ ಸಮಸ್ಯೆಗಳ ಬಗ್ಗೆ ಕೇಂದ್ರಿತವಾಗಿದ್ದವು” ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದ ಈ ಕ್ರಮದಿಂದ ಧರ್ಮನಿರಪೇಕ್ಷತೆಗೆ ಕತ್ತರಿ – ಡಾ.ಬಿ.ಪಿ.ಮಹೇಶ್ ಚಂದ್ರ ಗುರು
ಬಿಹಾರ ಮತ್ತು ಸಿಕ್ಕಿಂನಂಥ ದೇಶಗಳು ಕೃಷಿ ಅವಲಂಬಿತ ರಾಜ್ಯಗಳಾಗಿದ್ದು, ಕೃಷಿ ಸುಧಾರಣೆಗೆ ಆಗ್ರಹಿಸಿವೆ ಎಂದು ಕುಮಾರ್ ಹೇಳಿದರು.
“ಪ್ರತಿ ಜಿಲ್ಲೆಗಳ ಹವಾಮಾನ ಪರಿಸ್ಥಿತಿಗೆ ಅನುಗುಣವಾದ ಬೆಳೆ ವ್ಯವಸ್ಥೆ, ನೀರಿನ ಸಂರಕ್ಷಣೆಗೆ ಉತ್ತೇಜನ, ಪೌಷ್ಟಿಕ ಆಹಾರಧಾನ್ಯ ಮತ್ತು ಬೇಳೆಕಾಳುಗಳನ್ನು ಬೆಳೆಯುವುದು, ತೋಟಗಾರಿಕೆ, ಮೀನುಗಾರಿಕೆ, ಪಶು ಸಂಗೋಪನೆ, ಆಹಾರ ಸಂಸ್ಕರಣೆ, ಕೃಷಿ ಆಧಾರಿತ ಕೈಗಾರಿಕೆಗಳು ಮತ್ತು ರಫ್ತಿನ ಬಗ್ಗೆ ಚರ್ಚೆಗಳು ನಡೆದಿವೆ” ಎಂದು ನೀತಿ ಆಯೋಗದ ಸಿಇಓ ಅಮಿತಾಬ್ ಕಾಂತ್ ಹೇಳಿದ್ದಾರೆ.
ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಪ್ರಗತಿಯ ಅಗತ್ಯತೆ ಬಗ್ಗೆ ಚರ್ಚಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು


