Homeಮುಖಪುಟ'ಚೆನ್ನೈ ವಿಮಾನ ನಿಲ್ದಾಣದಲ್ಲಿ ತಮಿಳು ಪತ್ರಿಕೆಗಳಿಲ್ಲ..'; ಪ್ರತಿ ಹಂತದಲ್ಲೂ ಹಿಂದಿ ಹೇರಿಕೆ ಎಂದು ಆಕ್ರೋಶ

‘ಚೆನ್ನೈ ವಿಮಾನ ನಿಲ್ದಾಣದಲ್ಲಿ ತಮಿಳು ಪತ್ರಿಕೆಗಳಿಲ್ಲ..’; ಪ್ರತಿ ಹಂತದಲ್ಲೂ ಹಿಂದಿ ಹೇರಿಕೆ ಎಂದು ಆಕ್ರೋಶ

- Advertisement -
- Advertisement -

ಚೆನ್ನೈ ವಿಮಾನ ನಿಲ್ದಾಣದ ಟರ್ಮಿನಲ್ 4 ಲೌಂಜ್‌ನಲ್ಲಿ ತಮಿಳು ನಿಯತಕಾಲಿಕೆಗಳ ಬದಲಿಗೆ ಹಿಂದಿ ಭಾಷಾ ಪತ್ರಿಕೆ ಇಟ್ಟಿರುವ ಬಗ್ಗೆ ಡಿಎಂಕೆ ಸಂಸದ ಪಿ.ವಿಲ್ಸನ್ ಕಳವಳ ವ್ಯಕ್ತಪಡಿಸಿದ್ದಾರೆ. “ಪ್ರತಿ ಹಂತದಲ್ಲೂ ಹಿಂದಿ ಹೇರಿಕೆ” ಎಂದು ಅವರು ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಲ್ಸನ್ ಲೌಂಜ್‌ನಿಂದ ಮ್ಯಾಗಜೀನ್ ರ್ಯಾಕ್‌ನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ವಿಮಾನ ನಿಲ್ದಾಣವು ಚೆನ್ನೈನಲ್ಲಿದ್ದರೂ ತಮಿಳು ಪತ್ರಿಕೆಗಳ ಕೊರತೆಯನ್ನು ಎತ್ತಿ ತೋರಿದ್ದಾರೆ.

“ಈ ಮ್ಯಾಗಜೀನ್ ರ್ಯಾಕ್ ಚೆನ್ನೈ ಟಿ 4 ವಿಮಾನ ನಿಲ್ದಾಣದ ಲೌಂಜ್‌ನಿಂದ ಬಂದಿದೆ, ನವದೆಹಲಿ ಅಥವಾ ಹಿಂದಿ ಹೃದಯಭಾಗದಿಂದ ಅಲ್ಲ! ದುರದೃಷ್ಟವಶಾತ್, ಚೆನ್ನೈನಲ್ಲಿರುವ ಈ ವಿಮಾನ ನಿಲ್ದಾಣದ ಟಿ 4 ಲೌಂಜ್‌ನಲ್ಲಿ ಓದಲು ಯಾವುದೇ ತಮಿಳು ನಿಯತಕಾಲಿಕೆಗಳು ಲಭ್ಯವಿಲ್ಲ” ಎಂದು ಅವರು ಬರೆದಿದ್ದಾರೆ.

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಹಿಂದಿಯನ್ನು ವಿರೋಧಿಸುವುದಿಲ್ಲ, ಬದಲಾಗಿ ಅದರ ಹೇರಿಕೆಯನ್ನು ಮಾತ್ರ ವಿರೋಧಿಸುತ್ತದೆ ಎಂದು ಒತ್ತಿ ಹೇಳಿದ ವಿಲ್ಸನ್, ಪ್ರಾದೇಶಿಕ ಭಾಷೆಗಳ ಮಹತ್ವವನ್ನು ಗುರುತಿಸುತ್ತದೆಯೇ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವನ್ನು (ಎಎಐ) ಪ್ರಶ್ನಿಸಿದರು. ವಿಮಾನ ನಿಲ್ದಾಣಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಸರಿಯಾದ ಮನ್ನಣೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು ಅವರನ್ನು ಒತ್ತಾಯಿಸಿದರು.

“ಗೌರವಾನ್ವಿತ ಸಚಿವರೆ, ಆಯಾ ವಿಮಾನ ನಿಲ್ದಾಣಗಳಲ್ಲಿ ಎಲ್ಲ ಪ್ರಾದೇಶಿಕ ಭಾಷೆಗಳ ಮಹತ್ವವನ್ನು ಗುರುತಿಸುವಂತೆ ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ವಿಮಾನ ನಿಲ್ದಾಣಗಳಲ್ಲಿನ ಫಲಕಗಳು ಪ್ರಾದೇಶಿಕ ಭಾಷೆಗಳಲ್ಲೂ ಇರಬೇಕು, ಎಲ್ಲ ವಿಮಾನ ನಿಲ್ದಾಣಗಳಲ್ಲಿನ ಸಿಬ್ಬಂದಿಗಳು ಆಯಾ ಪ್ರಾದೇಶಿಕ ಭಾಷೆಯಲ್ಲಿ ಮಾತನಾಡಬೇಕು” ಎಂದು ಅವರು ಹೇಳಿದರು.

ವಿಮಾನಗಳ ಸುರಕ್ಷತಾ ಮಾಹಿತಿಗಳನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ವಿಲ್ಸನ್ ಗಮನಸೆಳೆದರು. ನಿರ್ಗಮನ ವಿಮಾನ ನಿಲ್ದಾಣದ ಪ್ರಾದೇಶಿಕ ಭಾಷೆಯಲ್ಲಿ ಪ್ರಯಾಣಿಕರಿಗೆ ಸುರಕ್ಷತಾ ಮಾನದಂಡಗಳ ಬಗ್ಗೆ ತಿಳಿಸಬೇಕೇ ಎಂದು ಪ್ರಶ್ನಿಸಿದರು.

ಡಿಎಂಕೆ ಸಂಸದರು ಈ ಸಮಸ್ಯೆಯನ್ನು ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನ ದೀರ್ಘಕಾಲದ ಪ್ರತಿರೋಧಕ್ಕೆ ಜೋಡಿಸಿದರು. ಜನವರಿ 25, 1965 ಅನ್ನು ರಾಜ್ಯದಲ್ಲಿ ‘ಶೋಕಾಚರಣೆಯ ದಿನ’ ಎಂದು ನೆನಪಿಸಿಕೊಂಡರು, ಇದನ್ನು ವಾರ್ಷಿಕವಾಗಿ ‘ಮೋಳಿ ಪೋರ್’ (ಭಾಷಾ ಯುದ್ಧ) ಎಂದು ಆಚರಿಸಲಾಗುತ್ತಿದೆ. ಅವರು 1976 ರ ಅಧಿಕೃತ ಭಾಷಾ ನಿಯಮಗಳನ್ನು ಉಲ್ಲೇಖಿಸಿದರು.

ಉತ್ತರ ಪ್ರದೇಶದ ದಲಿತರ ಮೇಲೆ ಹೆಚ್ಚುತ್ತಿರುವ ದಬ್ಬಾಳಿಕೆ; ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...