Homeಚಳವಳಿಹಿಜಾಬ್‌ ಕುರಿತು ತುರ್ತು ವಿಚಾರಣೆ ಇಲ್ಲ, ಹೋಳಿ ನಂತರ ಅರ್ಜಿ‌ ಆಲಿಸುವುದಾಗಿ ಸುಪ್ರೀಂಕೋರ್ಟ್

ಹಿಜಾಬ್‌ ಕುರಿತು ತುರ್ತು ವಿಚಾರಣೆ ಇಲ್ಲ, ಹೋಳಿ ನಂತರ ಅರ್ಜಿ‌ ಆಲಿಸುವುದಾಗಿ ಸುಪ್ರೀಂಕೋರ್ಟ್

- Advertisement -
- Advertisement -

ಹಿಜಾಬ್‌ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ದ ಸಲ್ಲಿಸಲಾಗಿರುವ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹೋಳಿ ರಜೆಯ ನಂತರ ನ್ಯಾಯಾಲಯವು ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರಿಗೆ ನ್ಯಾಯಾಲಯ ತಿಳಿಸಿದೆ.

ಹಿಜಾಬ್ ನಿಷೇಧದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹಿಜಾಬ್ ಧರಿಸುವ ಹಕ್ಕನ್ನು ಸಂವಿಧಾನದ 19(1)(ಎ) ಪರಿಚ್ಛೇದದ ಅಡಿಯಲ್ಲಿ ಸಂರಕ್ಷಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಗುರುತಿಸಲು ವಿಫಲವಾಗಿದೆ ಎಂದು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ಮುಂದೆ ವಾದ ಮಂಡಿಸಿದ್ದಾರೆ. ಸಂವಿಧಾನದ 25 ನೇ ವಿಧಿಯನ್ನು ಉಲ್ಲೇಖಿಸಿರುವ ವಿದ್ಯಾರ್ಥಿಗಳು ಹಿಜಾಬ್ ಧರಿಸುವ ಹಕ್ಕನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು

ಕಾಲೇಜಿನಲ್ಲಿ ಹಿಜಾಬ್‌ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಪರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಿಗೆ ನಿರಾಸೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಹಿಜಾಬ್‌ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವ ಹೈಕೋರ್ಟ್‌, ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿ, ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಹಿಜಾಬ್ ಕುರಿತ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡುವಂತೆ ಮಹಿಳಾ ಸಂಘಟನೆಗಳ ಆಗ್ರಹ

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...