Homeಮುಖಪುಟಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

- Advertisement -
- Advertisement -

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರದ ವಿಷಯ ಬಂದಾಗ ಮಹಿಳೆಯರನ್ನು ಸಂಪೂರ್ಣವಾಗಿ ಹೊರಗಿಡುವುದು ಸರ್ಕಾರದ ಪುರುಷಪ್ರಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ರಾಜಕೀಯ ಆಯ್ಕೆಯಾಗಿದೆ” ಎಂದು ಸಂಘಟನೆ ನೇರ ವಾಗ್ದಾಳಿ ನಡೆಸಿದೆ.

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಚಿವ ಸಂಪುಟದ ಸ್ವರೂಪವನ್ನು ಕಟುವಾಗಿ ವಿಮರ್ಶಿಸಲಾಗಿದ್ದು, ನೀವು ಅಧಿಕಾರ ವಹಿಸಿಕೊಂಡಾಗ ರಚನೆಯಾದ ಮೊದಲ ಸಂಪುಟದಲ್ಲಿ ಮಹಿಳೆಯರಿರಲಿಲ್ಲ. ವಿಸ್ತರಣೆಯಲ್ಲಾದರೂ ಈ ಗಂಭೀರ ಲೋಪ ಸರಿಯಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸಂಪೂರ್ಣವಾಗಿ ಪುರುಷರೇ ತುಂಬಿರುವ ಸಂಪುಟವನ್ನು ರಚಿಸುವ ಮೂಲಕ ಮಹಿಳಾ ನಾಯಕತ್ವವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದೀರಿ. ಇದು ಆಕಸ್ಮಿಕವಾಗಿ ನಡೆದದ್ದಲ್ಲ, ಬದಲಿಗೆ ಮಹಿಳೆಯರನ್ನು ಅಧಿಕಾರದಿಂದ ದೂರವಿಡುವ ಉದ್ದೇಶಪೂರ್ವಕ ರಾಜಕೀಯ ಆಯ್ಕೆಯಾಗಿದೆ ಎಂದು ತೀವ್ರ ಅಸಮಾಧಾನ ಹೊರಹಾಕಲಾಗಿದೆ.

2023ರ ವಿಧಾನಸಭಾ ಚುನಾವಣೆಯ ದತ್ತಾಂಶಗಳನ್ನು ಉಲ್ಲೇಖಿಸಿರುವ ಒಕ್ಕೂಟ, ರಾಜ್ಯದ ಒಟ್ಟು ಮತದಾರರಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಮಹಿಳಾ ಮತದಾರರೇ ಹೆಚ್ಚಿದ್ದ 52 ಕ್ಷೇತ್ರಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಅಂದರೆ ನಿಮ್ಮ ಬೆನ್ನೆಲುಬಾಗಿ ನಿಂತದ್ದು ಮಹಿಳಾ ಮತದಾರರು. ಆದಾಗ್ಯೂ, ಸಚಿವ ಸ್ಥಾನದ ವಿಷಯ ಬಂದಾಗ ಒಬ್ಬೇ ಒಬ್ಬ ಮಹಿಳಾ ಜನಪ್ರತಿನಿಧಿಯನ್ನೂ ಆಯ್ಕೆ ಮಾಡದಿರುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಎಸಗಿದ ದ್ರೋಹ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆ ಹಾಗೂ ಗ್ಯಾರಂಟಿ ಪ್ರಚಾರಗಳನ್ನು ನೆನಪಿಸಿರುವ ನಾಯಕಿಯರು, ಚುನಾವಣೆಗೂ ಮುನ್ನ ‘ನಾ ನಾಯಕಿ’ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಬೃಹತ್ ಸಮಾವೇಶಗಳನ್ನು ನಡೆಸಿ, ಮಹಿಳಾ ನಾಯಕತ್ವದ ಬಗ್ಗೆ ಮಾತನಾಡಿದ್ದಿರಿ. ಆದರೆ ಅಧಿಕಾರಕ್ಕೆ ಬಂದ ಮೇಲೆ ‘ನಾ ನಾಯಕಿ’ ಎಂಬುದು ಸಂಪೂರ್ಣವಾಗಿ ಮರೆಯಾಗಿ ‘ನಾ ನಾಯಕ’ ಎನ್ನುವ ಪುರುಷ ಪ್ರಾಬಲ್ಯದ ಸಿದ್ಧಾಂತ ಮಾತ್ರ ಎದ್ದು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಸತ್ತಿನಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿ ಕಾಯ್ದೆಯನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷ, ತನ್ನದೇ ಆಡಳಿತವಿರುವ ರಾಜ್ಯದಲ್ಲಿ ಸಂಪೂರ್ಣ ಪುರುಷಮಯ ಸಂಪುಟ ರಚಿಸಿರುವುದು ಅದರ ರಾಷ್ಟ್ರೀಯ ಮಟ್ಟದ ನೈತಿಕತೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವಾಗ ನಡೆದ ರಾಜಕೀಯ ಮೇಲಾಟಗಳನ್ನು ಪ್ರಸ್ತಾಪಿಸಿರುವ ಒಕ್ಕೂಟ, ಸಚಿವರ ಮೊದಲ ಪಟ್ಟಿಯಲ್ಲಿದ್ದ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಅಂತಿಮ ಕ್ಷಣದಲ್ಲಿ ಕೈಬಿಡಲಾಯ್ತು. ರಾಜಕೀಯ ಸಮೀಕರಣಗಳನ್ನು ಸರಿದೂಗಿಸಲು ಮಹಿಳಾ ಪ್ರಾತಿನಿಧ್ಯವನ್ನು ಎಷ್ಟು ಸುಲಭವಾಗಿ ಬಲಿಕೊಡಬಹುದು ಎಂಬುದಕ್ಕೆ ಇದು ಉದಾಹರಣೆ. ಮಹಿಳಾ ನಾಯಕತ್ವವನ್ನು ಕೇವಲ ಬಳಸಿ ಎಸೆಯುವ ವಸ್ತುವಿನಂತೆ ಸರ್ಕಾರ ನೋಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ರಾಜ್ಯದ ಆಡಳಿತ, ಆರ್ಥಿಕತೆ, ಜ್ಞಾನ ಕ್ಷೇತ್ರ, ಶ್ರಮಿಕ ವರ್ಗ ಮತ್ತು ಸಾಮಾಜಿಕ ಚಳವಳಿಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಹೀಗಿರುವಾಗ ಸಂಪುಟದಿಂದ ಅವರನ್ನು ಹೊರಗಿಡುವುದು ಸಂವಿಧಾನ ನೀಡಿದ ಸಮಾನತೆ ಮತ್ತು ಗೌರವದ ಹಕ್ಕನ್ನು ಕಸಿದುಕೊಂಡಂತೆ. ನಿಮ್ಮ ಪಕ್ಷದಲ್ಲಿ ಸಮರ್ಥ ಹಾಗೂ ಪ್ರಬುದ್ಧ ಮಹಿಳಾ ಜನಪ್ರತಿನಿಧಿಗಳಿದ್ದಾರೆ. ಸರ್ಕಾರ ಕೂಡಲೇ ಈ ಐತಿಹಾಸಿಕ ಪ್ರಮಾದವನ್ನು ತಿದ್ದುಕೊಂಡು, ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಹಾಗೂ ಗೌರವಾನ್ವಿತ ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಬಹಿರಂಗ ಪತ್ರಕ್ಕೆ ರಾಜ್ಯದ ಪ್ರಮುಖ 25ಕ್ಕೂ ಹೆಚ್ಚು ಮಹಿಳಾ, ಕಾರ್ಮಿಕ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘಟನೆಗಳು ಸಹಿ ಹಾಕಿ ಬೆಂಬಲ ಸೂಚಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...