Homeಕರ್ನಾಟಕ’ಹಿಜಾಬ್‌ ಧರಿಸಿ ಶಾಲೆಗೆ ಹೋಗುವುದನ್ನು ನಿರಾಕರಿಸುವುದು ಭಯಾನಕ’: ಮಲಾಲಾ

’ಹಿಜಾಬ್‌ ಧರಿಸಿ ಶಾಲೆಗೆ ಹೋಗುವುದನ್ನು ನಿರಾಕರಿಸುವುದು ಭಯಾನಕ’: ಮಲಾಲಾ

- Advertisement -
- Advertisement -

ರಾಜ್ಯದ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು, “ಹೆಣ್ಣು ಮಕ್ಕಳು ತಮ್ಮ ಹಿಜಾಬ್‌ನಲ್ಲಿ ಶಾಲೆಗೆ ಹೋಗುವುದನ್ನು ನಿರಾಕರಿಸುವುದು ಭಯಾನಕವಾಗಿದೆ” ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತೆ, ಹೆಣ್ಣು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ ಹೇಳಿದ್ದಾರೆ.

ರಾಜ್ಯದಲ್ಲಿ ಘರ್ಷಣೆಗೆ ಕಾರಣವಾಗಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಟ್ವೀಟ್ ಮಾಡಿರುವ ಅವರು, “ಕಾಲೇಜುಗಳು ನಮ್ಮನ್ನು ಶಿಕ್ಷಣ ಮತ್ತು ಹಿಜಾಬ್‌ ನಡುವೆ ಒಂದನ್ನು ಆಯ್ಕೆ ಮಾಡಲು ಒತ್ತಾಯಿಸುತ್ತಿವೆ” ಎಂಬ ವಿದ್ಯಾರ್ಥಿನಿಯ ಹೇಳಿಕೆಯನ್ನು ಉಲ್ಲೇಖಿಸಿ ಇದು ಭಯಾನಕ ಎಂದಿದ್ದಾರೆ.

ಕಳೆದ ತಿಂಗಳು ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವವರಿಗೆ ಕಾಲೇಜಿಗೆ ಪ್ರವೇಶ ನಿರ್ಬಂಧಿಸಲಾಯಿತು. ಬಳಿಕ ಆರು ವಿದ್ಯಾರ್ಥಿನಿಯರು ಪ್ರತಿಭಟನೆ ಪ್ರಾರಂಭಿಸಿದರು. ಬಳಿಕ ಇದು ರಾಜ್ಯದ ವಿವಿಧ ಕಾಲೇಜುಗಳಿಗೆ ಹರಡಿ, ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಶುರುವಾಗಿದೆ. ಕರ್ನಾಟಕ ಹೈಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಹೆಣ್ಣುಮಕ್ಕಳು ತಮ್ಮ ಹಿಜಾಬ್‌ಗಳನ್ನು ಧರಿಸಿ ಶಾಲೆಗೆ ಹೋಗುವುದನ್ನು ನಿರಾಕರಿಸುವುದು ಭಯಾನಕವಾಗಿದೆ. ಮಹಿಳೆಯರು ಕಡಿಮೆ ಅಥವಾ ಹೆಚ್ಚು ಬಟ್ಟೆ ಧರಿಸುವುದಕ್ಕೂ ಆಕ್ಷೇಪಗಳು ಮುಂದುವರಿಯುತ್ತಿವೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು” ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.

ಹಿಜಾಬ್ ವಿವಾದ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದೆ.  ಇಂದು ಕೂಡ ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ಮುಂದುವರೆಯಲಿದೆ.


ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...