Homeಚಳವಳಿರೈತ ಹೋರಾಟ: ನೋಬೆಲ್ ಪುರಸ್ಕೃತೆ, ಹೋರಾಟಗಾರ್ತಿ ಮಲಾಲಾ ಯೂಸುಫ್ ಬೆಂಬಲ

ರೈತ ಹೋರಾಟ: ನೋಬೆಲ್ ಪುರಸ್ಕೃತೆ, ಹೋರಾಟಗಾರ್ತಿ ಮಲಾಲಾ ಯೂಸುಫ್ ಬೆಂಬಲ

ಭಾರತ ಮತ್ತು ಪಾಕಿಸ್ತಾನಗಳು ನಿಜವಾದ ಉತ್ತಮ ಸ್ನೇಹಿತರಾಗುವುದು ಮತ್ತು ನಾವು ಪರಸ್ಪರರ ದೇಶಗಳಿಗೆ ಭೇಟಿ ನೀಡುವುದನ್ನು ನೋಡುವುದು ನನ್ನ ಕನಸು-ಮಲಾಲಾ ಯೂಸುಫ್ ಝೈ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ನೋಬೆಲ್ ಪ್ರಶಸ್ತಿ ವಿಜೇತೆ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನೀತಿಗಳ ವಿರುದ್ಧ ದನಿ ಎತ್ತಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, ಕಾರ್ಯಕರ್ತರ ಬಂಧನ ಹಾಗೂ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಿದ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ಮೂಲದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಪ್ರಶ್ನಿಸಿದ್ದಾರೆ.

ಜೈಪುರ್ ಸಾಹಿತ್ಯ ಸಮ್ಮೇಳನ (JLF)ದಲ್ಲಿ, ವಿಡಿಯೋ ಕಾನ್ಫರೆನ್ಸ್​ ಮೂಲಕ ತಮ್ಮ ಪುಸ್ತಕ ’I Am Malala: The Story of the Girl Who Stood Up for Education and was Shot by the Taliban’ ಕುರಿತು ಮಲಾಲಾ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಪಾಕಿಸ್ತಾನದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ, 2012 ರ ಅಕ್ಟೋಬರ್‌ನಲ್ಲಿ ತಾಲಿಬಾನ್‌ನಿಂದ ಗುಂಡೇಟಿಗೆ ಒಳಗಾಗಿಯೂ ಬದುಕುಳಿದಿದ್ದರು.

ಭಾರತದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಮತ್ತು ಕಾರ್ಯಕರ್ತರ ಬಂಧನದ ಸುದ್ದಿ ಚಿಂತಾಜನಕವಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ಅಂತರ್ಜಾಲ ಸ್ಥಗಿತ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ.

ಚರ್ಚೆಯ ಸಮಯದಲ್ಲಿ, ಅವರು ಮಾನವ ಹಕ್ಕುಗಳಿಗಾಗಿ ಹೋರಾಡುವ ಭಾರತೀಯ ಬಾಲಕಿಯರು ಮತ್ತು ಯುವತಿಯರನ್ನು ಶ್ಲಾಘಿಸಿದರು. “ಭಾರತದ ರೈತರಿಗಾಗಿ ಧ್ವನಿ ಎತ್ತುತ್ತಾರೆ. ಹವಾಮಾನ ಬದಲಾವಣೆ ಮತ್ತು ಅಲ್ಪಸಂಖ್ಯಾತ ಹಕ್ಕುಗಳ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಈ ಯುವತಿಯರ ಕೆಲಸ ಸ್ಪೂರ್ತಿದಾಯಕ” ಎಂದು ಬೆಂಗಳೂರಿನ ದಿಶಾ ರವಿ ಅವರನ್ನು ಬೆಂಬಲಿಸಿದ್ದಾರೆ.

“ನೀವು ಅವರ ರಾಜಕೀಯ ಅಭಿಪ್ರಾಯವನ್ನು ಒಪ್ಪದೇ ಇರಬಹುದು. ಹಾಗೆಂದು ನೀವು ಅವರನ್ನು ಜೈಲಿನಲ್ಲಿ ಇರಿಸುವುದು ಅಥವಾ ಬಂಧಿಸುವುದು ಸರಿಯಲ್ಲ. ಮಹಿಳೆಯರು ಮತ್ತು ಯುವತಿಯರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಯೂ ಅವರ ರಾಜಕೀಯ ಅಭಿಪ್ರಾಯಗಳನ್ನು ಎತ್ತಿ ತೋರಿಸುವುದು ಪ್ರಜಾಪ್ರಭುತ್ವದ ಹಕ್ಕಾಗಿದೆ. ಆದ್ದರಿಂದ ಜನರು ಶಾಂತಿಯುತವಾಗಿ ಪ್ರತಿಭಟಿಸಬಹುದು ಮತ್ತು ಅವರ ಹಕ್ಕುಗಳನ್ನು ಕೇಳಬಹುದು ಮತ್ತು ಅವರ ದನಿಯನ್ನು ಸರ್ಕಾರ ಕೇಳುತ್ತದೆ ಎಂದು ನಾನು ಭಾವಿಸುತ್ತೇನೆ “ಎಂದು ಮಲಾಲಾ ಹೇಳಿದರು.

ಇದರ ಜೊತೆಗೆ, “ಭಾರತ ಮತ್ತು ಪಾಕಿಸ್ತಾನಗಳು ನಿಜವಾದ ಉತ್ತಮ ಸ್ನೇಹಿತರಾಗುವುದು ಮತ್ತು ನಾವು ಪರಸ್ಪರರ ದೇಶಗಳಿಗೆ ಭೇಟಿ ನೀಡುವುದನ್ನು ನೋಡುವುದು ನನ್ನ ಕನಸು. ನೀವು ಪಾಕಿಸ್ತಾನಿ ನಾಟಕಗಳನ್ನು ನೋಡುವುದನ್ನು ಮುಂದುವರಿಸಬಹುದು, ನಾವು ಬಾಲಿವುಡ್ ಚಲನಚಿತ್ರಗಳನ್ನು ನೋಡುವುದನ್ನು ಮುಂದುವರಿಸಬಹುದು ಮತ್ತು ಕ್ರಿಕೆಟ್ ಪಂದ್ಯಗಳನ್ನು ಆನಂದಿಸಬಹುದು” ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಹೇಳಿದ್ದಾರೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...