Homeಮುಖಪುಟಬಾಂಗ್ಲಾದೇಶ | ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೋಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್ ಪ್ರಮಾಣವಚನ

ಬಾಂಗ್ಲಾದೇಶ | ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೋಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್ ಪ್ರಮಾಣವಚನ

- Advertisement -
- Advertisement -

ರಾಜಕೀಯ ಅರಾಜಕತೆ ಸೃಷ್ಟಿಯಾಗಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನುಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

84 ವರ್ಷ ವಯಸ್ಸಿನ ಯೂನುಸ್ ಅವರು ಸರ್ಕಾರದ ನಿರ್ದೇಶಕರಾಗಿ ಅಧಿಕಾರವಹಿಸಿಕೊಂಡಿದ್ದು, ಈ ಹುದ್ದೆ ಪ್ರಧಾನಿ ಸ್ಥಾನಕ್ಕೆ ಸಮನಾಗಿದೆ.

ರಾಜಧಾನಿ ಢಾಕಾದಲ್ಲಿರುವ ಬಾಂಗ್ಲಾದೇಶದ ಅಧ್ಯಕ್ಷೀಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಂವಿಧಾನವನ್ನು ಎತ್ತಿಹಿಡಿದು, ಅದನ್ನು ರಕ್ಷಿಸುವುದಾಗಿ” ಎಂದು ಯೂನುಸ್ ಪ್ರತಿಜ್ಞೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ನಾಗರಿಕ ಸಮಾಜದ ಮುಖಂಡರು ಸೇನಾ ಮುಖ್ಯಸ್ಥರು ಮತ್ತು ಇತರ ರಾಜತಾಂತ್ರಿಕರು ಇದ್ದರು.

ಯೂನುಸ್ ಅವರ ಜೊತೆ 16 ಜನರು ಸರ್ಕಾರದ ಸದಸ್ಯ ಸಲಹೆಗಾರರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಯಾರೂ ಮಂತ್ರಿಗಳಲ್ಲ. ಮಧ್ಯಂತರ ಸರ್ಕಾರ ನಾಗರಿಕ ತಂಡವಾಗಿದೆ. ಒಬ್ಬರು ನಿವೃತ್ತ ಬ್ರಿಗೇಡಿಯರ್ ಜನರಲ್ ಕೂಡ ಈ ತಂಡದಲ್ಲಿದ್ಧಾರೆ ಎಂದು ವರದಿಯಾಗಿದೆ.

ಸರ್ಕಾರದ ನಿರ್ದೇಶಕ ಮುಹಮ್ಮದ್ ಯೂನುಸ್ ಮತ್ತು 16 ಜನ ಸದಸ್ಯ ಸಲಹೆಗಾರರ ತಂಡ ದೇಶವನ್ನು ಒಂದು ನಿರ್ದಿಷ್ಟ ಅವಧಿಗೆ ಮುನ್ನಡೆಸಲಿದೆ ಮತ್ತು ಚುನಾಯಿತ ಸರ್ಕಾರ ರಚನೆಗೆ ರೂಪುರೇಷೆಗಳನ್ನು ಸಿದ್ದಪಡಿಸಲಿದೆ.

ಬ್ರಿಗೇಡಿಯರ್ ಜನರಲ್ (ನಿವೃತ್ತ) ಎಂ ಸಖಾವತ್ ಹುಸೈನ್, ಮಹಿಳಾ ಹಕ್ಕುಗಳ ಕಾರ್ಯಕರ್ತೆ ಫರೀದಾ ಅಖ್ತರ್, ಬಲಪಂಥೀಯ ಪಕ್ಷ ಹೆಫಾಜತ್-ಎ-ಇಸ್ಲಾಮ್‌ನ ಉಪ ಮುಖ್ಯಸ್ಥ ಎಎಫ್‌ಎಂ ಖಾಲಿದ್ ಹುಸೈನ್, ಗ್ರಾಮೀಣ ಟೆಲಿಕಾಂ ಟ್ರಸ್ಟಿ ನೂರ್‌ಜಹಾನ್ ಬೇಗಂ, ಸ್ವಾತಂತ್ರ್ಯ ಹೋರಾಟಗಾರ್ತಿ ಶರ್ಮೀನ್ ಮುರ್ಷಿದ್, ಚಿತ್ತಗಾಂಗ್ ಗುಡ್ಡಗಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸುಪ್ರದೀಪ್ ಚಕ್ಮಾ, ಪ್ರೊ.ಬಿಧನ್ ರಂಜನ್ ರಾಯ್ ಮತ್ತು ಮಾಜಿ ವಿದೇಶಾಂಗ ಕಾರ್ಯದರ್ಶಿ ತೌಹಿದ್ ಹುಸೈನ್ ಸಹ ಸಲಹಾ ಮಂಡಳಿಯ ಸದಸ್ಯರಲ್ಲಿ ಸೇರಿದ್ದಾರೆ.

ಶೇಖ್ ಹಸೀನಾ ಸರ್ಕಾರದ ವಿರುದ್ದ ಪ್ರತಿಭಟಿಸಿದ್ದ ‘ಸ್ಟೂಡೆಂಟ್ ಅಗನೆಸ್ಟ್ ಡಿಸ್ಕ್ರಿಮಿನೇಶನ್’ ಗುಂಪಿನ ಇಬ್ಬರು ಪ್ರಮುಖ ನಾಯಕರಾದ ‘ನಹೀದ್ ಇಸ್ಲಾಂ ಮತ್ತು ಆಸಿಫ್ ಮಹಮೂದ್’ ಅವರನ್ನೂ ಮಧ್ಯಂತರ ಸರ್ಕಾರದಲ್ಲಿ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ : ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...