Homeಮುಖಪುಟನೊಬೆಲ್ ಶಾಂತಿ ಪ್ರಶಸ್ತಿ: ಜೈಲಿನಲ್ಲಿರುವ ಇರಾನ್‌ನ ನರ್ಗೆಸ್ ಮೊಹಮ್ಮದಿಯವರಿಗೆ ಪುರಸ್ಕಾರ

ನೊಬೆಲ್ ಶಾಂತಿ ಪ್ರಶಸ್ತಿ: ಜೈಲಿನಲ್ಲಿರುವ ಇರಾನ್‌ನ ನರ್ಗೆಸ್ ಮೊಹಮ್ಮದಿಯವರಿಗೆ ಪುರಸ್ಕಾರ

- Advertisement -
- Advertisement -

ನಾರ್ವೆಯ ನೊಬೆಲ್ ಆಯ್ಕೆ ಸಮಿತಿಯು ಇರಾನಿನಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆಯ ವಿರುದ್ಧ ಮತ್ತು ಎಲ್ಲರಿಗೂ ಮಾನವ ಹಕ್ಕುಗಳು ಹಾಗೂ ಸ್ವಾತಂತ್ರ್ಯವನ್ನು ಉತ್ತೇಜಿಸಲು ಮಾಡಿದ ಹೋರಾಟಕ್ಕಾಗಿ ಮಾನವ ಹಕ್ಕುಗಳ ಕಾರ್ಯಕರ್ತೆ ನರ್ಗಿಸ್ ಮುಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಿದೆ.

ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರ ವಿರುದ್ಧ ತಾರತಮ್ಯ ಮತ್ತು ದಬ್ಬಾಳಿಕೆಯ ದೇವಪ್ರಭುತ್ವ ಆಡಳಿತದ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದ ನೂರಾರು ಸಾವಿರಾರು ಜನರನ್ನೂ ಗುರುತಿಸಿದೆ ಎಂದು ಸಮಿತಿಯು ಹೇಳಿದೆ.

ಇರಾನ್ ಸರಕಾರವು 51 ವರ್ಷ ವಯಸ್ಸಿನ ಮುಹಮ್ಮದಿ ಅವರನ್ನು 13 ಸಲ ಬಂಧಿಸಿದ್ದು, ನ್ಯಾಯಾಲಯಗಳು ಐದು ಬಾರಿ ಅವರನ್ನು ದೋಷಿ ಎಂದು ಘೋಷಿಸಿ ಒಟ್ಟು 31 ವರ್ಷಗಳ ಜೈಲು ವಾಸ ಮತ್ತು 154 ಚಾಟಿಯೇಟಿನ ಶಿಕ್ಷೆ ವಿಧಿಸಿವೆ. ಮುಹಮ್ಮದಿ ಈಗಲೂ ಜೈಲಿನಲ್ಲಿದ್ದಾರೆ.

ಮೊಹಮ್ಮದಿ 2003ರಲ್ಲಿ ಟೆಹ್ರಾನ್‌ನ ಮಾನವ ಹಕ್ಕುಗಳ ಕೇಂದ್ರದ ರಕ್ಷಕರೊಂದಿಗೆ ತೊಡಗಿಸಿಕೊಂಡರು. ಅವರ ”ಕೆಚ್ಚೆದೆಯ ಹೋರಾಟ”ಕ್ಕೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತೀರ್ಪುಗಾರರು ಹೇಳಿದರು.

”ಇರಾನಿಯನ್ ಆಡಳಿತದಲ್ಲಿನ ಮಹಿಳೆಯರನ್ನು ಗುರಿಯಾಗಿಸುವ ತಾರತಮ್ಯ ಮತ್ತು ದಬ್ಬಾಳಿಕೆಯ ನೀತಿಗಳ ವಿರುದ್ಧ ಹೋರಾಟಗಳನ್ನು ಮಾಡಿದ್ದಾರೆ” ಎಂದು ತೀರ್ಪುಗಾರ ಹೇಳಿದರು.

ಇದನ್ನೂ ಓದಿ: ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್‌ಗೆ ‘ನೋಬೆಲ್ ಸಾಹಿತ್ಯ ಪ್ರಶಸ್ತಿ-2022’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...