HomeUncategorizedಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಬಹುಮಾನ ಘೋಷಣೆ

ಸಾಹಿತ್ಯ ಕ್ಷೇತ್ರಕ್ಕೆ ನೊಬೆಲ್‌ ಬಹುಮಾನ ಘೋಷಣೆ

- Advertisement -
- Advertisement -

2023ರ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್‌ ಬಹುಮಾನವನ್ನು ಘೋಷಣೆ ಮಾಡಲಾಗಿದ್ದು, ನಾರ್ವೆಯ ಲೇಖಕ, ಕಾದಂಬರಿಕಾರ ಮತ್ತು ನಾಟಕಕಾರ ಜಾನ್ ಫೋಸ್ಸೆ 2023ರ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸ್ವೀಡಿಷ್ ಅಕಾಡೆಮಿಯ ಖಾಯಂ ಕಾರ್ಯದರ್ಶಿ ಮ್ಯಾಟ್ಸ್ ಮಾಲ್ಮ್ ಗುರುವಾರ ಸ್ಟಾಕ್ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ನೊಬೆಲ್ ಪ್ರಶಸ್ತಿಗಳು 11 ಮಿಲಿಯನ್ ಸ್ವೀಡಿಷ್ ಕ್ರೋನರ್ ನಗದು ಬಹುಮಾನವನ್ನು ಒಳಗೊಂಡಿವೆ.

64 ವರ್ಷದ ಫೋಸ್ಸೆ ಎರಡು ಡಜನ್‌ಗಿಂತಲೂ ಹೆಚ್ಚು ನಾಟಕಗಳನ್ನು ಬರೆದಿದ್ದರು. ನಾಲ್ಕು ದಶಕಗಳ ಕಾಲ ಕಾದಂಬರಿಗಳು, ಪ್ರಬಂಧಗಳು, ಕವನ ಸಂಕಲನಗಳು ಮತ್ತು ಮಕ್ಕಳ ಪುಸ್ತಕಗಳನ್ನು ಕೂಡ  ಪ್ರಕಟಿಸಿದ್ದಾರೆ. ಇವರ ಲೇಖನ, ಬರಹಗಳು 40 ಭಾಷೆಗಳಲ್ಲೂ ಭಾಷಾಂತರ ಮಾಡಲಾಗಿದೆ.

2023ರ ಸಾಲಿನ ರಸಾಯನಶಾಸ್ತ್ರ ವಿಭಾಗಕ್ಕೆ ನೊಬೆಲ್ ಪ್ರಶಸ್ತಿಯನ್ನು ನಿನ್ನೆ ಘೋಷಿಸಲಾಗಿತ್ತು. ವಿಜ್ಞಾನಿಗಳಾದ ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಸಿಕ್ಕಿತ್ತು.

2023ರ ಭೌತಶಾಸ್ತ್ರದ ನೊಬೆಲ್‌ ಬಹುಮಾನವನ್ನು ವಿಜ್ಞಾನಿಗಳಾದ ಪಿಯರೆ ಅಗೊಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್ ಹುಲ್ಲಿಯರ್ ಅವರಿಗೆ ನೀಡಲಾಗಿದೆ.

ಇದಲ್ಲದೆ ಕೋವಿಡ್ -19 ವಿರುದ್ಧ ಹೋರಾಡಲು ಮೊದಲು ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳಾದ ಕ್ಯಾಟಲಿನ್ ಕಾರಿಕೊ ಹಾಗೂ ಡ್ರ್ಯೂ ವೈಸ್‌ಮನ್ ಅವರಿಗೆ ಕೂಡ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಈ ಬಹುಮಾನವನ್ನು ನೀಡಲಿದೆ. ಈ ವಾರದಲ್ಲಿ ವೈದ್ಯಕೀಯ, ಭೌತಶಾಸ್ತ್ರ ರಸಾಯನ ಶಾಸ್ತ್ರ ಮತ್ತು ಸಾಹಿತ್ಯ ವಿಭಾಗಕ್ಕೆ ಬಹುಮಾನವನ್ನು ನೀಡಲಾಗಿದೆ.

ಇದನ್ನು ಓದಿ: ಬಿಹಾರ: ಪೊಲೀಸ್‌ ದಾಳಿ ವೇಳೆ ಬಾಲಕ ಸಾವು; ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...