Homeಮುಖಪುಟ'ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ': ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

- Advertisement -
- Advertisement -

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ರಾಜಕೀಯ ನಾಯಕರ ವಿರುದ್ಧ ‘ಕ್ರಿಮಿನಲ್ ನ್ಯಾಯಾಂಗ ನಿಂದನೆ’ (criminal contempt) ಕ್ರಮ ಕೈಗೊಳ್ಳುವಂತೆಯೂ ಈ ಅರ್ಜಿಯಲ್ಲಿ ಕೋರಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ನಾಯಕರು ಮತ್ತು ಬೆಂಬಲಿಗರು ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್‌ನತ್ತ ನಡೆಸಿದ ಮೆರವಣಿಗೆಗೆ ಸಂಬಂಧಿಸಿದಂತೆ ಈ ಅರ್ಜಿಯನ್ನು ಸಲ್ಲಿಸಲಾಗಿದೆ.

ಚುನಾವಣಾ ಆಯೋಗ ಮತ್ತು ಗ್ಯಾನೇಶ್ ಕುಮಾರ್‌ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು, ಮನವಿ ಪತ್ರವೊಂದನ್ನು ಸಲ್ಲಿಸುವ ಸಲುವಾಗಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆಐ) ಭೇಟಿಯಾಗಲು ಕೋರಿದ್ದರು. ಆದರೆ, ಈ ವಿಷಯಗಳು ಈಗಾಗಲೇ ನ್ಯಾಯಾಲಯದ ಪರಿಶೀಲನೆಯಲ್ಲಿವೆ ಎಂದು ಹೇಳಿದ ಸಿಜೆಐ, ವಿಪಕ್ಷ ನಾಯಕರ ಭೇಟಿ ಕೋರಿಕೆಯನ್ನು ನಿರಾಕರಿಸಿದ್ದರು. ಇದರ ಬೆನ್ನಲ್ಲೇ ವಿಪಕ್ಷ ನಾಯಕರು ಮತ್ತು ಸಾವಿರಾರು ಬೆಂಬಲಿಗರು ಸುಪ್ರೀಂ ಕೋರ್ಟ್‌ನತ್ತ ಬೃಹತ್ ಮೆರವಣಿಗೆ ನಡೆಸಿದ್ದರು.

ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಸೂರ್ಯ ಕಾಂತ್ ಅವರು, “ನ್ಯಾಯಾಲಯವನ್ನು ಯಾರೂ ಬೆದರಿಸಲು ಸಾಧ್ಯವಿಲ್ಲ” ಎಂದು ಮೌಖಿಕವಾಗಿ ಹೇಳಿರುವುದಾಗಿ livelaw.in ವರದಿ ಮಾಡಿದೆ.

ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಒಂದೇ ರೀತಿಯ ಎರಡು ಅರ್ಜಿಗಳ ಕುರಿತು ನೋಟಿಸ್ ಜಾರಿ ಮಾಡಿದೆ. ಇದರೊಂದಿಗೆ, ಸುಪ್ರೀಂ ಕೋರ್ಟ್ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ನಿರ್ದೇಶನ ನೀಡಿದೆ.

ವಿಚಾರಣೆಯ ಸಮಯದಲ್ಲಿ ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಗೌರವ್ ಭಾಟಿಯಾ ಅವರು, ಸುಪ್ರೀಂ ಕೋರ್ಟ್ ರಾಜಕೀಯ ಮೆರವಣಿಗೆಯೊಂದನ್ನು ಎದುರಿಸಬೇಕಾಗಿ ಬಂದಿರುವುದು ಸ್ವೀಕಾರ್ಹವಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಈ ಘಟನೆ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ಅಲ್ಲದೆ, ಈ ಘಟನೆಯ ಬಗ್ಗೆ ವಕೀಲರಲ್ಲಿ ಉಂಟಾಗಿರುವ ತೀವ್ರ ಆಕ್ರೋಶ ಮತ್ತು ಬೇಸರವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ ಎಂದು livelaw.in ವರದಿ ಮಾಡಿದೆ.

ಇಂತಹ ನಡವಳಿಕೆಯು ನ್ಯಾಯಾಂಗವನ್ನು ‘ಬೆದರಿಸುವ’ ಪ್ರಯತ್ನವಾಗಿದೆ ಎಂದು ಕಳವಳ ವ್ಯಕ್ತಪಡಿಸಿ ಸುಮಾರು 200ಕ್ಕೂ ಹೆಚ್ಚು ವಕೀಲರು ಜ್ಞಾಪನಾ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಭಾಟಿಯಾ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಆದರೆ, ಈ ಪ್ರಯತ್ನವೇ ಕಳವಳಕಾರಿ ಎಂದು ಭಾಟಿಯಾ ಪ್ರತಿಪಾದಿಸಿದ್ದಾರೆ. ಮೆರವಣಿಗೆಯ ವೇಳೆ ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಲಾಗಿದೆ ಎಂದು ಹೇಳಿದ ಅವರು, ನ್ಯಾಯಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ಇಡುವಂತೆ ಕೋರಿದ್ದಾರೆ.

ಈ ವಾದಗಳಿಗೆ ಪ್ರತಿಕ್ರಿಯಿಸಿದ ಸಿಜೆಐ ಇಂತಹ ಪ್ರಯತ್ನಗಳು ‘ಅಲ್ಪಕಾಲಿಕ ಅಥವಾ ಕ್ಷುಲ್ಲಕ’ (fragile), ಯಾರೂ ಇವುಗಳನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದೂ ಹೇಳಿದ್ದಾರೆ. ಇದಲ್ಲದೆ, ನ್ಯಾಯಾಲಯದ ಆವರಣದ ಹೊರಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತಮಗೆ ಸಂಪೂರ್ಣ ಅರಿವಿದೆ ಎಂದು ಅವರು ತಿಳಿಸಿದ್ದಾರೆ.

“ನಾವೇನೂ ದಂತಗೋಪುರಗಳಲ್ಲಿ (ವಾಸ್ತವದಿಂದ ದೂರವಿರುವ ಕಾಲ್ಪನಿಕ ಪ್ರಪಂಚ) ಕುಳಿತಿಲ್ಲ. ಅವರು ನ್ಯಾಯಾಲಯದ ಹೊರಗೆ ಯಾವ ಹೇಳಿಕೆಗಳನ್ನು ನೀಡುತ್ತಾರೆ ಮತ್ತು ನ್ಯಾಯಾಲಯದೊಳಗೆ ಏನು ಮಾತನಾಡುತ್ತಾರೆ ಎಂಬುದು ನಮಗೆ ಚೆನ್ನಾಗಿ ತಿಳಿದಿದೆ. ನಮಗೆ ಎಲ್ಲವೂ ಗೊತ್ತು” ಎಂದು ಸಿಜೆಐ ಹೇಳಿದ್ದಾರೆ.

ನ್ಯಾಯಾಲಯವು ತಾವು ಸಂಗ್ರಹಿಸಿರುವ ಸಿಸಿಟಿವಿ ಅಥವಾ ಇನ್ಯಾವುದೇ ಡಿಜಿಟಲ್ ದೃಶ್ಯಾವಳಿಗಳು ಹಾಗೂ ದಾಖಲೆಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ಎಲ್ಲಾ ಕಾನೂನು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ನ್ಯಾಯವಾದಿ ದಿಗಂತ್ ಮಿಶ್ರಾ ಮತ್ತು ಇತರ ಮೂವರು ವಕೀಲರು ಸಲ್ಲಿಸಿರುವ ಈ ಅರ್ಜಿಯು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಸುತ್ತಮುತ್ತ ನಡೆಯುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸಬೇಕು, ನ್ಯಾಯಾಂಗ ಸಂಕೀರ್ಣಗಳ ಒಳಗೆ ರಾಜಕೀಯ ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅಕ್ಟೋಬರ್ 12 ರ ಘಟನೆಗಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಹಾಗೂ ಭದ್ರತಾ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಕೋರಿದೆ.

ಇದಲ್ಲದೆ, ಬಾಕಿ ಇರುವ ನ್ಯಾಯಾಂಗ ಪ್ರಕ್ರಿಯೆಗಳ ಮೇಲೆ ಪ್ರಭಾವ ಬೀರುವ ಉದ್ದೇಶದ ರಾಜಕೀಯ ಅಭಿಯಾನಗಳ ವಿರುದ್ಧ ಮಾರ್ಗಸೂಚಿಗಳನ್ನು ರೂಪಿಸಬೇಕು ಮತ್ತು ಅರ್ಜಿಯಲ್ಲಿ ಹೆಸರಿಸಲಾದ ರಾಜಕೀಯ ನಾಯಕರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ (criminal contempt) ಪ್ರಕ್ರಿಯೆಗಳನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...

ಅ.23ರಂದು ದೇಶವ್ಯಾಪಿ ಪ್ರತಿಭಟನೆಗೆ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’ ಕರೆ : ದೆಹಲಿಯಲ್ಲಿ ಜಂಟಿ ವೇದಿಕೆ ರಚನೆ

ಚುನಾವಣಾ ಪ್ರಜಾಪ್ರಭುತ್ವದ ಸಮಗ್ರತೆಯನ್ನು ಮರುಸ್ಥಾಪಿಸಲು ಮತ್ತು ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಆದಿವಾಸಿಗಳು, ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಒಕ್ಕೂಟವಾದ ‘ಪೀಪಲ್...

ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಅಂಕಿತಾ ಪೋಷಕರೊಂದಿಗೆ ಕಾಂಗ್ರೆಸ್ ನಾಯಕರು ದೆಹಲಿಯ ಇಂಡಿಯಾ...

ಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

ಅಕ್ಟೋಬರ್ 10, 2026 ರಂದು ನವದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಾಂತಿಯುತ ಪ್ರತಿಭಟನಾಕಾರರು ಹಾಗೂ ವಕೀಲರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ, ದೈಹಿಕ ಹಲ್ಲೆ ಮತ್ತು ಕಾನೂನುಬಾಹಿರ ಬಂಧನಗಳನ್ನು 'ಬಾಂಬೆ...

‘ದೇಶವನ್ನು ದಾರಿ ತಪ್ಪಿಸಬೇಡಿ’: ಸಿಜೆಪಿ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಾಧ್ಯಮ ಸಂಚಾಲಕ ಆಶಿಶ್ ಉಷಾ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ...