Homeಮುಖಪುಟಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

- Advertisement -
- Advertisement -

ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ”ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ” ಎಂದು ಪುನರುಚ್ಚರಿಸಿದ್ದಾರೆ. ಗೋಮಾಂಸ ತಿನ್ನುವುದನ್ನು ಇಲ್ಲಿಯ ಜನರ ಜೀವನಶೈಲಿಯಾಗಿದೆ ಅದನ್ನು “ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಮಾವ್ರಿಯವರು ಹೇಳಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗೋಮಾಂಸ ತಿನ್ನುವುದರ ಬಗ್ಗೆ ಮಾತನಾಡಿದ್ದರು. ಇದೀಗ ಮತ್ತೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಈ ಬಗ್ಗೆ ಮಾತನಾಡಿದ್ದು, ”ಬೇರೆ ರಾಜ್ಯಗಳು  ಗೋಮಾಂಸ ನಿಷೇಧ ಕಾಯ್ದೆಯನ್ನು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿ ಇದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಮೇಘಾಲಯದಲ್ಲಿ ಯಾವುದೇ ನಿಷೇಧವಿಲ್ಲ. ಇದು ಜನರ ಜೀವನಶೈಲಿಯಾಗಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತದಲ್ಲಿಯೂ ಅಂತಹ ನಿಯಮವಿಲ್ಲ. ಕೆಲವು ರಾಜ್ಯಗಳು ಕೆಲವು ಕಾಯಿದೆಗಳನ್ನು ಜಾರಿಗೆ ತಂದಿವೆ. ಮೇಘಾಲಯದಲ್ಲಿ ನಮ್ಮಲ್ಲಿ ಕಸಾಯಿಖಾನೆ ಇದೆ, ಅಲ್ಲಿ ಎಲ್ಲರೂ ಹಸು ಅಥವಾ ಹಂದಿಯನ್ನು ಮಾರುಕಟ್ಟೆಗೆ ತರುತ್ತಾರೆ” ಎಂದು ಮಾವ್ರಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ಈ ಬಾರಿ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದ ಮಾವ್ರಿ, ಕೇಸರಿ ಪಕ್ಷ ಕ್ರಿಶ್ಚಿಯನ್ ವಿರೋಧಿ ಎಂಬ ಆರೋಪವನ್ನು ತಳ್ಳಿಹಾಕಿದರು. ರಾಜಕೀಯ ಪ್ರಚಾರಕ್ಕಾಗಿ ಇಂತಹ ಆರೋಪಗಳನ್ನೆಲ್ಲಾ ಮಾಡುತ್ತಾರೆ ಎಂದರು.

ದೇಶದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಎನ್‌ಡಿಎ ಸರ್ಕಾರ ಇದ್ದು, ಯಾವುದೇ ಚರ್ಚ್‌ಗಳ ಮೇಲೆ ದಾಳಿಗಳಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಗೋವಾ, ನಾಗಾಲ್ಯಾಂಡ್‌ನಂತಹ ರಾಜ್ಯಗಳು ನಿಮಗೆ ಸಾಕ್ಷಿಯಾಗಿವೆ, ಅಲ್ಲಿ ಬಿಜೆಪಿ ಕ್ರಿಶ್ಚಿಯನ್‌ರ ವಿರೋಧಿಯಾಗಿಲ್ಲ ಎಂದು ಅವರು ಹೇಳಿದರು. ”ನಾನು ಸಹ ಕ್ರಿಶ್ಚಿಯನ್  ಆದರೆ, ಬಿಜೆಪಿ ನಾಯಕರು ಯಾರೂ ನನಗೆ ಎಂದಿಗೂ ಚರ್ಚ್‌ಗೆ ಹೋಗಬೇಡಿ ಎಂದು ಹೇಳುವುದಿಲ್ಲ..” ಎಂದರು.

”2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಮೇಘಾಲಯದ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಸಮೀಕ್ಷೆಯ ಪ್ರಕಾರ, ನಾವು ಸ್ಪಷ್ಟಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಮೇಘಾಲಯ ವಿಧಾನಸಭಾ ಚುನಾವಣೆ ಸೋಮವಾರ ನಡೆಯಲಿದೆ. ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರದ ಸಂದರ್ಭದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ, ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...