Homeಕರ್ನಾಟಕಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ; ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ

- Advertisement -
- Advertisement -

ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1 ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2 ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕುಟದ ಮುಖಂಡರು ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂವಿಧಾನದ ಆಶಯಗಳಿಗೆ ಮತ್ತು ಸುಪ್ರೀಂ ಕೋರ್ಟಿನ ಮಾರ್ಗಸೂಚಿಗೆ, ಡಾ. ನಾಗಮೋಹನ್ ದಾಸ್ ವರದಿಯ ಶಿಫಾರಸುಗಳಿಗೆ ವ್ಯತಿರಿಕ್ತವಾಗಿರುವ ಅಲೆಮಾರಿ ಸಮುದಾಯಗಳಿಗೆ ಸಂಬಂಧಿಸಿದ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಈ ಕೂಡಲೇ ಬದಲಾಯಿಸುವಂತೆ ಸಚಿವ ಸಂಪುಟಕ್ಕೆ ಸೂಚಿಸಬೇಕು. ಅಲೆಮಾರಿ ಸಮುದಾಯಗಳನ್ನು ಪ್ರವರ್ಗ 1 ರಲ್ಲಿ ಇರಿಸಿ, ಪ್ರಥಮ ಆದ್ಯತೆಯ ಪ್ರತ್ಯೇಕ ಶೇ.1 ಮೀಸಲಾತಿಯನ್ನು ಜಾರಿ ಮಾಡಬೇಕು” ಎಂದು ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ನಮ್ಮ ಬೇಡಿಕೆ ಸಲ್ಲಿಸುತ್ತೇವೆ ಎಂದರು.

‘ಅಲೆಮಾರಿ ಸಮುದಾಯಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಆಯೋಗವನ್ನು ರಚಿಸಬೇಕು, ಈ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು’ ಎಂದು ಆಗ್ರಹಿಸಿದರು.

‘ಬಹುತೇಕ ಎಲ್ಲ ಮೂಲಭೂತ ಹಕ್ಕುಗಳಿಂದ ವಂಚಿಸಲ್ಪಟ್ಟಿರುವ ಅಲೆಮಾರಿ ಸಮುದಾಯಗಳಿಗೆ ಈಗಲಾದರೂ ಸೂಕ್ತ ನೆಲೆ, ಶಿಕ್ಷಣ, ಉದ್ಯೋಗ ಮತ್ತು ಪ್ರಾತಿನಿಧ್ಯವನ್ನು ಒದಗಿಸಲು ತ್ವರಿತಗತಿಯ ಮತ್ತು ಪರಿಣಾಮಕಾರಿಯಾದ ಪ್ಯಾಕೇಜ್ ಅನ್ನು ಘೋಷಿಸಬೇಕು’ ಎಂದು ಹೋರಾಟಗಾರರು ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ, ನಾವು ದೆಹಲಿಯನ್ನು ಮುಟ್ಟಿಬರಲು ಹೋಗುತ್ತಿಲ್ಲ. ಹೈಕಮಾಂಡಿನ ಬಾಗಿಲುಗಳನ್ನು ತಟ್ಟಿ ತೆಗೆಸಲು ಹೊರಟಿದ್ದೇವೆ. ದೆಹಲಿಯಲ್ಲಿ ಮೇಲೆ ಉಲ್ಲೇಖಿಸಿರುವ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಷ್ಟ ಪರಿಹಾರ ದೊರಕದೆ ನಾವು ಹಿಂತಿರುಗುವುದಿಲ್ಲ. ಕೆಲದಿನ ದೆಹಲಿಯಲ್ಲೇ ಉಳಿಯಬೇಕಾದರೂ, ಎಐಸಿಸಿ ಕಛೇರಿಯ ಮುಂದೆಯೇ ಬೀಡುಬಿಟ್ಟು ನ್ಯಾಯ ಸಿಗುವ ತನಕ ಕಾಯುತ್ತೇವೆ. ಬೀದಿಯ ಮೇಲೆಯೇ ಬದುಕಿದ ಜನಕ್ಕೆ ಇದು ದೊಡ್ಡ ವಿಚಾರವೇ ಅಲ್ಲ ಎಂಬುದು ತಮಗೂ ಗೊತ್ತಿದೆ. ಇತ್ತ ಕರ್ನಾಟಕ ಸರಕಾರವು ತನ್ನ ಈಗಿನ ನಿಲುವನ್ನು ಪುನಾರವಲೋಕನ ಮಾಡಿಕೊಳ್ಳದೆ. ಇದೇ ತೀರ್ಮಾನದಲ್ಲಿ ಮುಂದುವರೆಯಲು ಬಯಸಿದಲ್ಲಿ ಮತ್ತು ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ನಮ್ಮ ಸಂಘಟನೆಯ ಮೂಲಕ ನ್ಯಾಯಾಲಯದ ಮೊರೆ ಹೋಗಿ ಇಡೀ ಒಳಮೀಸಲಾತಿ ಪ್ರಕ್ರಿಯೆಯ ಮೇಲೆ ತಡೆಯಾಜ್ಞೆ ತರುವುದು ಅನಿವಾರ್ಯವಾಗುತ್ತದೆ. ಅಲ್ಲದೆ ಮುಂದಿನ ಚಳಿಗಾಲದ ಅಧಿವೇಶನಕ್ಕೆ ಕರ್ನಾಟಕದ ಸಮಸ್ತ ಅಲೆಮಾರಿ ಸಮುದಾಯಗಳು ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ. ನಮ್ಮನ್ನು ನಿಷ್ಟೂರ ಸ್ವರೂಪದ ಹೋರಾಟಗಳಿಗೆ ತಳ್ಳಬೇಡಿ ಎಂದು ಮತ್ತೊಮ್ಮೆ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

‘ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ‘ದೆಹಲಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದಲ್ಲದೆ, ಒಂದು ಸಾವಿರ ಅಲೆಮಾರಿ ಸಮುದಾಯಗಳ ಜನ ಭಾಗವಹಿಸಲಿದ್ದಾರೆ. ಜೊತೆಗೆ ಜಿ. ಎನ್. ದೇವಿ, ಸುರೇಶ್ ಮಹಾಲ್‌ ರಂತಹ ಅನೇಕ ಬುದ್ದಿಜೀವಿಗಳು, ದೇಶದ ಮತ್ತು ರಾಜ್ಯದ ಹಲವು ಪ್ರಗತಿ ಚಳುವಳಿಯ ಮುಖಂಡರು ಮತ್ತು ಒಳಮೀಸಲಾತಿ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನಿಡಿದರು.

ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...