Homeಮುಖಪುಟಕೇಂದ್ರ ಸಚಿವ ಬಂಡಿ ಸಂಜಯ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಕೇಂದ್ರ ಸಚಿವ ಬಂಡಿ ಸಂಜಯ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

- Advertisement -
- Advertisement -

ಶಾಸಕರು ಮತ್ತು ಸಂಸದರನ್ನು ಒಳಗೊಂಡ ಪ್ರಕರಣಗಳನ್ನು ನಿರ್ವಹಿಸುವ ಹೈದರಾಬಾದ್‌ನಲ್ಲಿ ಅಬಕಾರಿ ಪ್ರಕರಣಗಳ ವಿಶೇಷ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ (ವಿಶೇಷ ಜೆಎಫ್‌ಸಿಎಂ) ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯೂ) ಹೊರಡಿಸಿದ್ದಾರೆ.

ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ಮೇಲ್ವಿಚಾರಣೆ ನಡೆಸುವ ವಿಶೇಷ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ವಾರಂಟ್‌ ನೀಡಿದ್ದು, ಸಚಿವರು 2021 ರ ಕರೀಮ್‌ನಗರದ ಹುಜೂರಾಬಾದ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗದ ನಂತರ ಬಂದಿದೆ. ವಾರಂಟ್ ಹೊರಡಿಸಿದ ನಂತರ ನ್ಯಾಯಾಧೀಶರು ವಿಚಾರಣೆಯನ್ನು ಜುಲೈ 30 ರವರೆಗೆ ಮುಂದೂಡಿದರು.

ಹುಜೂರಾಬಾದ್ ವಿಧಾನಸಭಾ ಉಪಚುನಾವಣೆಯ ಸಮಯದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆರೋಪದ ಪ್ರಕರಣ ಇದಾಗಿದೆ. ಸಂಸತ್ತಿನ ಅಧಿವೇಶನದಲ್ಲಿ ಪಾಲ್ಗೊಂಡಿರುವುದರಿಂದ ಅವರು ಕೋರ್ಟ್‌ಗೆ ಹಾಖರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರ ಪರ ವಕೀಲರು ವಿವರಿಸಿದರು.

ಆದರೂ, ನ್ಯಾಯಾಲಯವು ಅವರಿಗೆ ಹಾಜರಾಗಲು ನಿರ್ದೇಶಿಸಿದ್ದು, ಆದೇಶ ಪಾಲಿಸಲು ವಿಫಲವಾದ ಹಿಂದಿನ ಸಂದರ್ಭಗಳನ್ನು ಉಲ್ಲೇಖಿಸಿ, ಕಠಿಣ ನಿಲುವು ತೆಗೆದುಕೊಂಡು ಎನ್ಬಿಡಬ್ಲ್ಯೂ ಹೊರಡಿಸಿತು.

ಅಕ್ಟೋಬರ್ 2021 ರಲ್ಲಿ ಐಪಿಸಿ ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲಿ, ಬಂಡಿ ಸಂಜಯ್ ಕುಮಾರ್ ಎದುರಾಳಿ ಪಕ್ಷದ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ, ಅವರು ನಾಯಕರಿಗೆ ಪ್ರತಿ ಮತಕ್ಕೆ ಹಂಚಿಕೆಗಾಗಿ 20,000 ರೂ.ಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಕೇವಲ 5,000 ರೂ.ಗಳನ್ನು ಮತದಾರರಿಗೆ ತಲುಪಿದ್ದು, ಉಳಿದ ಹಣ ಅವರ ಜೇಬಿಗೆ ಸೇರಿದೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 2023 ರಲ್ಲಿ ಆರೋಪಪಟ್ಟಿ ಸಲ್ಲಿಸಿದರು. ಬಳಿಕ ಪ್ರಕರಣವನ್ನು ವಿಶೇಷ ಜೆಎಫ್‌ಸಿಎಂಗೆ ವರ್ಗಾಯಿಸಲು ಕಾರಣವಾಯಿತು.

ಕೇರಳ: 2011ರ ಅತ್ಯಾಚಾರ-ಕೊಲೆ ಅಪರಾಧಿ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...