ಜಾಮೀನು ರಹಿತ ವಾರಂಟ್‌ಗಳನ್ನು ನೀಡುವುದನ್ನು ವಾಡಿಕೆಯಾಗಿರಿಸಿರುವ ಬಗ್ಗೆ ಮೇ 1ರಂದು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬಾರದು ಮತ್ತು ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಥವಾ ಸಾಕ್ಷ್ಯವನ್ನು ನಾಶಪಡಿಸುವ ಸಾಧ್ಯತೆಯಿದೆ ಎಂದಾದರೆ ಮಾತ್ರ ಜಾಮೀನು ರಹಿತ ವಾರಂಟ್‌ಗಳನ್ನು ನೀಡಬೇಕು ಎಂದು ಹೇಳಿದೆ.
ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಲು ಯಾವುದೇ ಸಮಗ್ರ ಮಾರ್ಗಸೂಚಿಗಳಿಲ್ಲದಿದ್ದರೂ, ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬಾರದು ಎಂದು ಈ ನ್ಯಾಯಾಲಯವು ಹಲವಾರು ಸಂದರ್ಭಗಳಲ್ಲಿ ಗಮನಿಸಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು ನೀಡಬಾರದು ಮತ್ತು ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ, ಪುರಾವೆ ನಾಶಪಡಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯವು ಗಮನಿಸಿದ್ದಲ್ಲಿ ಮಾತ್ರ ಜಾಮೀನು ರಹಿತ ವಾರಂಟ್‌ಗಳನ್ನು ಹೊರಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠ ಹೇಳಿದೆ.
ಜಾಮೀನು ನೀಡಬಹುದಾದ ವಾರಂಟ್ ಜಾರಿ ಮಾಡಿದರೂ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗದಿದ್ದರೆ ವಿಚಾರಣಾ ನ್ಯಾಯಾಲಯವು ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಬಹದು.
ಮೇಲ್ಮನವಿದಾರರ ವಿರುದ್ಧ ಐಪಿಸಿಯ 323, 504, 506, 120ಬಿ, 308 ಮತ್ತು 325ರ ಅಡಿಯಲ್ಲಿ ಅಪರಾಧಗಳನ್ನು ಒಳಗೊಂಡಿರುವ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಹೈಕೋರ್ಟ್‌ನ ಆದೇಶಗಳನ್ನು ರದ್ದುಗೊಳಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬರೆದಿರುವ ತೀರ್ಪು, ಮೇಲ್ಮನವಿದಾರರ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರಂಟ್‌ಗಳು ಸಮರ್ಥನೀಯವಲ್ಲ ಮತ್ತು ಅದನ್ನು ರದ್ದುಗೊಳಿಸಬೇಕು ಎಂದು ಹೇಳಿದೆ.
ಜಾಮೀನು ರಹಿತ ವಾರಂಟ್‌ಗಳನ್ನು ಪದೇ ಪದೇ ಹೊರಡಿಸಲಾಗುವುದಿಲ್ಲ ಮತ್ತು ಸಾರ್ವಜನಿಕ ಮತ್ತು ರಾಜ್ಯದ ಹೆಚ್ಚಿನ ಹಿತಾಸಕ್ತಿಯ ಅಗತ್ಯದ ಹೊರತು ವ್ಯಕ್ತಿಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುವುದಿಲ್ಲ ಎಂಬುದು ಕಾನೂನಿನ ಸ್ಥಿರವಾದ ನಿಲುವು ಎಂದು ನ್ಯಾಯಾಲಯ ಹೇಳಿದೆ.
The Supreme Court, in a judgment delivered on May 1, cautioned against the routine issuance of non-bailable warrants. The Court said that non-bailalbe warrants not be issued unless the accused is charged with a heinous crime, and is likely to evade the process of law or… pic.twitter.com/DC3QmCMPUC
— Live Law (@LiveLawIndia) May 2, 2024


