Homeಮುಖಪುಟಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ ಉತ್ಸವಕ್ಕೆ ಪ್ರಯಾಣಿಸುವವರಿಗೆ ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂದ್ ಬೆಂಬಲಿಸಿ ಮಹಿಳೆಯರು ಕೇಂದ್ರ ಭದ್ರತಾ ಪಡೆ ವಾಹನಗಳನ್ನು ತಡೆದು ‘ಮಣಿಪುರ/ಕಾಂಗ್ಲೇಪಾಕ್’ ಎಂಬ ಸ್ಟಿಕರ್ ಅನ್ನು ಅವುಗಳ ವಿಂಡ್‌ಶೀಲ್ಡ್‌ಗಳಿಗೆ ಅಂಟಿಸಿಸಿದ್ದಾರೆ. ಕಾಂಗ್ಲೇಪಾಕ್ ಎಂಬುವುದು ಮಣಿಪುರದ ಐತಿಹಾಸಿಕ ಹೆಸರನ್ನು ಸೂಚಿಸುತ್ತದೆ.

ಶುಕ್ರವಾರ ಮುಂಜಾನೆ, ಇಂಫಾಲ್ ಪೂರ್ವ ಜಿಲ್ಲೆಯ ಆಂಡ್ರೊ ಪಾರ್ಕಿಂಗ್, ಕೊಂಗ್ಬಾ ಮತ್ತು ಖುರೈ ಪ್ರದೇಶಗಳಲ್ಲಿನ ರಸ್ತೆಬದಿಯ ತರಕಾರಿ ಮಾರಾಟಗಾರರಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ವ್ಯಾಪಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್, ಸಿಂಗ್ಜಮೈ ಮತ್ತು ಕ್ವಾಕಿಥೆಲ್‌ನಲ್ಲಿಯೂ ಸಂಪೂರ್ಣ ಬಂದ್ ಪರಿಸ್ಥಿತಿಯಿದೆ ಎಂದು ವರದಿ ಹೇಳಿದೆ.

ಗುರುವಾರ ರಾತ್ರಿ 2 ಕಿಲೋಮೀಟರ್ ಪಂಜಿನ ಮೆರವಣಿಗೆ ನಡೆಸಿದ ಬಂದ್ ಪ್ರತಿಭಟನಾಕಾರರು “ಮಣಿಪುರವನ್ನು ಅಳಿಸಿಹಾಕಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭದ್ರತಾ ದೃಷ್ಟಿಯಿಂದ ರಾಜಭವನಕ್ಕೆ ಹೋಗುವ ಆಯಕಟ್ಟಿನ ಸ್ಥಳಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಸಾಗಿಸುತ್ತಿದ್ದ ಬಸ್‌ನಲ್ಲಿದ್ದ ‘ಮಣಿಪುರ’ ರಾಜ್ಯದ ಹೆಸರನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಬುಧವಾರ ತನಿಖೆ ಆರಂಭಿಸಿದೆ.

ಮಂಗಳವಾರ ಉಖ್ರುಲ್ ಜಿಲ್ಲಾ ಪ್ರವಾಸೋದ್ಯಮ ಉತ್ಸವಕ್ಕೆ ಅಥವಾ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಅನ್ನು ತಡೆದ ಭದ್ರತಾ ಪಡೆಗಳು ಮಣಿಪುರ ಹೆಸರಿಗೆ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಡಿಐಪಿಆರ್ ಸಿಬ್ಬಂದಿ ವಿಂಡ್‌ಸ್ಕ್ರೀನ್‌ನಲ್ಲಿದ್ದ ರಾಜ್ಯದ ಹೆಸರನ್ನು ಬಿಳಿ ಕಾಗದದಿಂದ ಮರೆಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಈ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಸಮಿತಿ ರಚಿಸಿದೆ. ಏನು ತಪ್ಪಾಗಿದೆ ಎಂಬುವುದರ ಬಗ್ಗೆ ಸಮಿತಿ ತನಿಖೆ ಮಾಡುತ್ತದೆ ಮತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಸರ್ಕಾರ ಹೇಳಿದೆ.

ಆಯುಕ್ತರ ಎನ್. ಅಶೋಕ್ ಕುಮಾರ್ ಮತ್ತು ಕಾರ್ಯದರ್ಶಿ ಟಿ ಕಿರಣ್‌ಕುಮಾರ್ ಸಿಂಗ್ ಅವರನ್ನೊಳಗೊಂಡ ಸಮಿತಿಯು 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲಿದೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ ಕ್ಷಮೆಯಾಚನೆ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಕೊಮಿ ಸಂಘಟನೆ ಬುಧವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಪ್ರಾರಂಭಿಸಿದೆ.

“ರಾಜ್ಯದ ಬಸ್‌ನಿಂದ ಮಣಿಪುರ ಹೆಸರನ್ನು ತೆಗೆದುಹಾಕಿದ ಕ್ರಮ ಮಣಿಪುರ ವಿರೋಧಿ ನಡೆಯಾಗಿದೆ. ಇದು ಮಣಿಪುರದ ಕಲ್ಪನೆ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತಿನ ಪ್ರಶ್ನೆಯಾಗಿದೆ” ಎಂದು ಕೊಕೊಮಿ ಸಂಚಾಲಕ ಖುರೈಜಮ್ ಅಥೌಬಾ ಹೇಳಿದ್ದಾರೆ.

“ಯಾರ ಅದೇಶ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಣಿಪುರದ ಜನರಿಗೆ ಗೊತ್ತಾಗಬೇಕು. 48 ಗಂಟೆಗಳ ಒಳಗೆ ಸಾರ್ವಜನಿಕರಿಗೆ ಇದನ್ನು ಸ್ಪಷ್ಟಪಡಿಸಬೇಕು” ಎಂದು ಅಥೌಬಾ ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಎರಡು ವರ್ಷಗಳ ನಂತರ ಶಿರುಯಿ ಲಿಲಿ ಉತ್ಸವ ಪುನರಾರಂಭಗೊಂಡಿದೆ. ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾದ ರಾಜ್ಯ ಈಗ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ನಕ್ಸಲ್ ಬಸವರಾಜ್ ಭಾಗಿಯಾಗಿದ್ದ: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...