Homeಮುಖಪುಟಮಹಿಳಾ ಮೀಸಲಾತಿ ಜಾರಿಯಾಗದಿರಲು 'ಉತ್ತರ ಭಾರತದ ಮನಸ್ಥಿತಿಯೆ' ಕಾರಣ: ಶರದ್ ಪವಾರ್

ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

- Advertisement -
- Advertisement -

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.

ಪುಣೆ ವೈದ್ಯರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಜಾರಿಗೊಳಿಸುವ ಮಸೂದೆಗಳಿಗೆ ಇನ್ನು ಅನುಮೋದನೆ ನೀಡಿಲ್ಲ. ಇದು ಮಹಿಳಾ ನಾಯಕತ್ವವನ್ನು ಒಪ್ಪಿಕೊಳ್ಳಲು ದೇಶ ಇನ್ನೂ ಮಾನಸಿಕವಾಗಿಲ್ಲ ಸಿದ್ದವಾಗಿಲ್ಲದಿರುವುದನ್ನು ತೋರಿಸುತ್ತದೆ ಎಂದಿದ್ದಾರೆ.

“ನಾನು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಸದಸ್ಯನಾಗಿದ್ದಾಗಿನಿಂದಲೂ ಈ ವಿಷಯದ ಕುರಿತು ಮಾತನಾಡುತ್ತ ಬಂದಿದ್ದೇನೆ. ಮನಸ್ಥಿತಿ ಅದರಲ್ಲಿಯೂ ಉತ್ತರ ಭಾರತದ ಮನಸ್ಥಿತಿ ಈ ವಿಷಯದಲ್ಲಿ ಅನುಕೂಲಕರವಾಗಿಲ್ಲ. ನಾನು ಹಿಂದೊಮ್ಮೆ ಕಾಂಗ್ರೆಸ್ ಸಂಸದನಾಗಿದ್ದಾಗ ಈ ವಿಷಯದ ಕುರಿತು ಲೋಕಸಭೆಯಲ್ಲಿ ಮಾತನಾಡಿದ್ದೆ. ಭಾಷಣ ಮುಗಿಸಿ ಹಿಂದೆ ತಿರುಗಿ ನೋಡಿದಾಗ ಯಾರೋಬ್ಬರೂ ಇರದೆ ಎದ್ದು ಹೋಗಿದ್ದರು. ಅಂದರೆ ಮಹಿಳಾ ಮೀಸಲಾತಿ ವಿಷಯವು ನಮ್ಮ ಪಕ್ಷದ ಸದಸ್ಯರಿಗೆ ಜೀರ್ಣಿಸಿಕೊಳ್ಳಲು ಅಸಾಧ್ಯದವಾದ ವಿಷಯವಾಗಿದೆ” ಎಂದು ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ: ವಾಸ್ತವ ಮತ್ತು ವೈರುಧ್ಯಗಳು – ಭಾರತೀದೇವಿ.ಪಿ

ನಾನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿಯಂತಹ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ್ದೆ. ಇದಕ್ಕೆ ಆರಂಭದಲ್ಲಿ ಅಪಸ್ವರ ಕೇಳಿಬಂದರೂ ನಂತರ ಎಲ್ಲರೂ ಒಪ್ಪಿಕೊಂಡಿದ್ದಾರೆ. ಹಾಗಾಗಿ ಎಲ್ಲಾ ಪಕ್ಷಗಳು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ನಿರಂತರವಾಗಿ ಪ್ರಯತ್ನಿಸಬೇಕು ಎಂದು ಅವರು ಹೇಳಿದ್ದಾರೆ.

ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಎನ್‌.ವಿ.ರಮಣ ಅವರು ಇತ್ತೀಚೆಗೆ ಕರೆ ನೀಡಿದ್ದರು. ದೇಶದ್ಯಾಂತ ಇರುವ ಕಾನೂನು ಕಾಲೇಜುಗಳಲ್ಲಿಯೂ ಮಹಿಳೆಯರಿಗೆ ಅರ್ಧದಷ್ಟು ಮೀಸಲಾತಿ ನೀಡಬೇಕೆಂಬ ಒತ್ತಾಯ ಸಹ ಮಾಡಿದ್ದನ್ನು ಈ ಸಂದರ್ಭದಲ್ಲಿ ನೆನೆಯಬಹುದು.

ಇದನ್ನೂ ಓದಿ: ಮಹಿಳಾ ಮೀಸಲಾತಿ ಪುಸ್ತಕದೊಳಗಿನ ಗಂಟು ಎಂದು ತೋರಿಸಿಕೊಟ್ಟ ಗ್ರಾಮ ಪಂಚಾಯ್ತಿ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...