Homeಮುಖಪುಟಈಶಾನ್ಯ ದೆಹಲಿ ಸಾಮಾನ್ಯ ಸ್ಥಿತಿಗೆ: ಗಲಭೆಗೊಳಗಾದ ಪ್ರದೇಶದಲ್ಲಿ ನೀರವ ಮೌನ

ಈಶಾನ್ಯ ದೆಹಲಿ ಸಾಮಾನ್ಯ ಸ್ಥಿತಿಗೆ: ಗಲಭೆಗೊಳಗಾದ ಪ್ರದೇಶದಲ್ಲಿ ನೀರವ ಮೌನ

- Advertisement -
- Advertisement -

ಸೋಮವಾರದಿಂದ ಹಿಂಸಾಚಾರಕ್ಕೆ ಒಳಗಾಗಿದ್ದ ಈಶಾನ್ಯ ದೆಹಲಿ ಸಾಮಾನ್ಯ ಸ್ಥಿತಿಗೆ ಬಂದಿದೆ. ಕೆಲವೇ ಅಂಗಡಿಗಳು ತೆರೆದಿವೆಯಾದರು ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಇನ್ನೂ ಜನಸಂಚಾರ ವಿರಳವಾಗಿದೆ. ಈ ಪ್ರದೇಶದ ನಿವಾಸಿಗಳು ಅಲ್ಲಿಂದ ಹೊರ ಹೋಗಿದ್ದರಿಂದ ಅಲ್ಲಿ ಇನ್ನೂ ನೀರವ ಮೌನವಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಈಶಾನ್ಯ ದೆಹಲಿಯ ಹೆಚ್ಚಿನ ಪ್ರದೇಶಗಳಲ್ಲಿ ವಾಹನ ಸಂಚಾರ ಸಾಮಾನ್ಯವಾಗಿದೆ ಮತ್ತು ಜನರು ಕೆಲಸಕ್ಕೆ ಹೋಗಲು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ಪಡೆ, ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಆಯಕಟ್ಟಿನ ಜಾಗದಲ್ಲಿ ಬೀಡು ಬಿಟ್ಟಿದ್ದಾರೆ. ರಸ್ತೆ ತಡೆಗಳನ್ನು ಮತ್ತು ಸುಟ್ಟುಹೋದ ವಾಹನಗಳನ್ನು ತೆರವುಗೊಳಿಸಲು ಕ್ರೇನ್‌ಗಳು ಮತ್ತು ಬುಲ್ಡೋಜರ್‌ಗಳು ಕಾರ್ಯನಿರ್ವಹಿಸುತ್ತಿವೆ.

ಸಮುದಾಯಗಳ ನಡುವೆ ಸಾಮರಸ್ಯಕ್ಕಾಗಿ ದೆಹಲಿ ಪೊಲೀಸರು ಶಾಂತಿ ಸಭೆಗಳನ್ನು ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 330 ಸಭೆಗಳನ್ನು ಆಯೋಜಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಸಹಾಯಕ್ಕಾಗಿ 22829334 ಮತ್ತು 22829335 ನಂಬರಿನ ಸಹಾಯವಾಣಿಗಳನ್ನು ಪ್ರಾರಂಭಿಸಿದೆ.

ಹಿಂಸಾಚಾರದಲ್ಲಿ ನಲವತ್ತೆರಡು ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ 500ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...