Homeಮುಖಪುಟಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

- Advertisement -
- Advertisement -

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ.

ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ವರದಿಗಳ ಪ್ರಕಾರ, ಇಂದೋರ್‌ನ ವೇಗವಾಗಿ ಬೆಳೆಯುತ್ತಿರುವ ಖಜರಾನಾ ಪ್ರದೇಶದ ಸುಮಾರು 3 ಲಕ್ಷ ಜನಸಂಖ್ಯೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು 23 ಜೂನ್ 2020ರಂದು ಮಧ್ಯ ಪ್ರದೇಶ ಸರ್ಕಾರವು ಈ 100 ಬೆಡ್‌ಗಳ ಆಸ್ಪತ್ರೆಯನ್ನು ಮಂಜೂರು ಮಾಡಿತ್ತು. 

ಈ ಆಸ್ಪತ್ರೆಗೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ದಾದಿಯರು (ನರ್ಸ್‌ಗಳು), ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಫಾರ್ಮಾಸಿಸ್ಟ್‌ಗಳು ಸೇರಿದಂತೆ ಒಟ್ಟು 87 ಸರ್ಕಾರಿ ಹುದ್ದೆಗಳನ್ನು ಅನುಮೋದಿಸಲಾಗಿದೆ.

ಕಾಗದದ ಮೇಲಿನ ಆಸ್ಪತ್ರೆ

ಆಶ್ಚರ್ಯಕರ ಸಂಗತಿಯೆಂದರೆ, ಆಸ್ಪತ್ರೆ ಘೋಷಣೆಯಾಗಿ 6 ವರ್ಷ ಕಳೆದರೂ, ಕಟ್ಟಡ ನಿರ್ಮಾಣಕ್ಕೆ ಇಂದಿಗೂ ಭೂಮಿ ಮಂಜೂರಾಗಿಲ್ಲ ಮತ್ತು ಒಂದು ಇಟ್ಟಿಗೆಯನ್ನೂ ಇಟ್ಟಿಲ್ಲ.

ಭೌತಿಕವಾಗಿ ಆಸ್ಪತ್ರೆಯೇ ಇಲ್ಲದಿದ್ದರೂ, ಸರ್ಕಾರಿ ಪೋರ್ಟಲ್‌ನಲ್ಲಿ ಈ ಆಸ್ಪತ್ರೆಯ ಹೆಸರಿನಲ್ಲಿ ಸಿಬ್ಬಂದಿಗಳ ನೇಮಕಾತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿವೆ. ಇತ್ತೀಚೆಗೆ ಜೂನ್ 2026ರಲ್ಲೂ ಒಬ್ಬ ಲ್ಯಾಬ್ ಟೆಕ್ನಿಷಿಯನ್‌ನನ್ನು ಇದೇ ಆಸ್ಪತ್ರೆಗೆ ನೇಮಕ ಮಾಡಲಾಗಿದೆ.

ಸಿಬ್ಬಂದಿ ಎಲ್ಲಿದ್ದಾರೆ?

ವರದಿಗಳ ಪ್ರಕಾರ, ಈ ಆಸ್ಪತ್ರೆಯ ಹೆಸರಿನಲ್ಲಿ ವೇತನ ಪಡೆಯುತ್ತಿರುವ 87 ಸಿಬ್ಬಂದಿಯನ್ನು ಇಂದೋರ್‌ನ ಪಿಸಿ ಸೇಠಿ ಆಸ್ಪತ್ರೆ, ಹುಕುಂಚಂದ್ ಆಸ್ಪತ್ರೆ ಮತ್ತು ಸಂಜೀವಿನಿ ಕ್ಲಿನಿಕ್‌ಗಳಂತಹ ಇತರ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.

ಸರ್ಕಾರದ ಸಮರ್ಥನೆ ಮತ್ತು ವಿರೋಧ ಪಕ್ಷಗಳ ಆಕ್ರೋಶ

ಆಸ್ಪತ್ರೆ ನಿರ್ಮಾಣಕ್ಕೆ ನಗರ ಪ್ರದೇಶದಲ್ಲಿ ಸೂಕ್ತ ಸರ್ಕಾರಿ ಜಾಗ ಸಿಗದ ಕಾರಣ ಯೋಜನೆ ವಿಳಂಬವಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ ಸಮರ್ಥಿಸಿಕೊಂಡಿದ್ದಾರೆ. ಜಾಗದ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗೆ ಹುದ್ದೆ ಸೃಷ್ಟಿಸಿ, ವರ್ಗಾವಣೆ ದಂಧೆ ನಡೆಸುತ್ತಿರುವುದು ವ್ಯವಸ್ಥೆಯ ದೊಡ್ಡ ಹಗರಣ ಮತ್ತು ಆಡಳಿತಾತ್ಮಕ ವೈಫಲ್ಯ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.

ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗಾಗಿ ಹಲವು ವರ್ಷಗಳಿಂದ ನೇಮಕಾತಿ ಮತ್ತು ವರ್ಗಾವಣೆಗಳನ್ನು ಹೇಗೆ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ಪ್ರಶ್ನಿಸಿದ್ದಾರೆ.

“ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುತ್ತೇವೆ. ಸರ್ಕಾರದಿಂದ ಸಮಗ್ರ ಉತ್ತರಗಳನ್ನು ಕೋರುತ್ತೇವೆ. ಅಲ್ಲದೆ, ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ವರ್ಮಾ ಆಗ್ರಹಿಸಿದ್ದಾರೆ.

ಉಪಮುಖ್ಯಮಂತ್ರಿ ವಿವರಣೆ

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಯೋಜನೆಯ ಹಿನ್ನೆಲೆಯನ್ನು ವಿವರಿಸಿದ್ದಾರೆ.

“ಆರಂಭದಲ್ಲಿ ಈ ಪ್ರದೇಶದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿತ್ತು. ಬಳಿಕ ಅದನ್ನು 50 ಹಾಸಿಗೆಗಳ ನಾಗರಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಯಿತು. ನಂತರ 100 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಯಿತು. ಆದರೆ, ಸೂಕ್ತ ಸರ್ಕಾರಿ ಭೂಮಿ ಲಭ್ಯವಾಗದ ಕಾರಣ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲು ಸಾಧ್ಯವಾಗಿಲ್ಲ. ಆಸ್ಪತ್ರೆ ಕಟ್ಟಡ ನಿರ್ಮಾಣವಾಗುವವರೆಗೆ ಮಂಜೂರಾದ ಸಿಬ್ಬಂದಿಯನ್ನು ಇತರ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಿಗೆ ನಿಯೋಜಿಸಲಾಗಿದೆ. ಭೂಮಿಯ ಹುಡುಕಾಟ ಪ್ರಕ್ರಿಯೆ ಇನ್ನೂ ಮುಂದುವರಿದಿದೆ” ಎಂದು ಅವರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...