Homeಮುಖಪುಟಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

ಎಲ್ಲ ಮತಾಂತರಗಳು ಕಾನೂನು ಬಾಹಿರವಲ್ಲ: ಹೈಕೋರ್ಟ್ ಆದೇಶ ತಡೆಗೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಗೆ ಸಂಬಂಧಿಸಿದಂತೆ ಇತ್ತೀಚಿನ ಮಧ್ಯಪ್ರದೇಶ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ (ಜನವರಿ 3) ನಿರಾಕರಿಸಿದೆ. ಪ್ರತಿ ಮತಾಂತರಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ತಿಳಿಸಿರಬೇಕು ಎಂದು ಹೇಳಿದ ಕಾಯಿದೆಯ ನಿಬಂಧನೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

“ಎಲ್ಲಾ ಮತಾಂತರಗಳು ಕಾನೂನುಬಾಹಿರ ಎಂದು ಹೇಳಲಾಗುವುದಿಲ್ಲ” ಎಂದು ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಹೇಳಿದೆ ಎಂದು ‘ಬಾರ್‌ ಅಂಡ್ ಬೆಂಚ್’ ವರದಿ ಮಾಡಿದೆ.

ನವೆಂಬರ್ 2022ರಲ್ಲಿ ಮಧ್ಯಪ್ರದೇಶದ ಹೈಕೋರ್ಟ್ ಪೀಠವು ಸರ್ಕಾರಕ್ಕೆ ಸೂಚನೆ ನೀಡಿತ್ತು. “ಮತಾಂತರಕ್ಕೂ ಮುನ್ನವೇ ಕಡ್ಡಾಯ ಘೋಷಣೆ ಮಾಡಬೇಕೆಂಬ ನಿಬಂಧನೆಗೆ ಬದ್ಧವಾಗಿರಲು ವಿಫಲರಾದ ಯಾರ ವಿರುದ್ಧವೂ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಸೂಚಿಸಿತ್ತು.

“ಮತಾಂತರವನ್ನು ಬಯಸುವ ನಾಗರಿಕನು ಈ ವಿಷಯದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಘೋಷಣೆಯನ್ನು ನೀಡಬೇಕಿರುವುದು ಕಡ್ಡಾಯಗೊಳಿಸುತ್ತದೆ ಎಂದು ಕಾನೂನಿನ ಪರಿಚ್ಛೇದ 10 ಹೇಳುತ್ತದೆ. ಇದು ನಮ್ಮ ಅಭಿಪ್ರಾಯದಲ್ಲಿ ಅಸಾಂವಿಧಾನಿಕವಾಗಿದೆ. 21ರ ಕಾಯಿದೆಯ ಸೆಕ್ಷನ್ 10ರ ಉಲ್ಲಂಘನೆಗಾಗಿ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡದೆ ತಮ್ಮ ಧರ್ಮವನ್ನು ಮತಾಂತರಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಹೈಕೋರ್ಟ್ ತಡೆದಿದ್ದನ್ನು ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಗೆತ್ತಿಕೊಂಡಿದೆ.

ಕಾಯಿದೆಯ ಸೆಕ್ಷನ್ 10ರ ಪ್ರಕಾರ, “ಬೇರೆಧರ್ಮಕ್ಕೆ ಮತಾಂತರಗೊಳ್ಳಲು ಬಯಸುವ ವ್ಯಕ್ತಿಗಳು 60 ದಿನಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳಿಗೆ ಘೋಷಣೆಯನ್ನು ಸಲ್ಲಿಸಬೇಕು, ಅವರು ಯಾವುದೇ ಬಲ, ಬಲವಂತ, ಅನಗತ್ಯ ಪ್ರಭಾವ ಅಥವಾ ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿರಬೇಕು.”

ನಿಬಂಧನೆಯನ್ನು ಪಾಲಿಸದವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 50,000 ರೂ. ದಂಡ ವಿಧಿಸಲಾಗುವುದೆಂದು ಕಾನೂನು ಹೇಳಿದೆ.

ಮಂಗಳವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಪದೇ ಪದೇ ಮನವಿ ಮಾಡಿದರು ಎಂದು ‘ಲೈವ್ ಲಾ’ ವರದಿ ತಿಳಿಸಿದೆ.

ಇದಕ್ಕೆ ಸುಪ್ರೀಂ ಕೋರ್ಟ್, “ಎಲ್ಲಾ ಧಾರ್ಮಿಕ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದೆ.

“ಮದುವೆಯನ್ನು ಕಾನೂನುಬಾಹಿರ ಮತಾಂತರಕ್ಕೆ ಬಳಸಲಾಗುತ್ತದೆ. ಇದನ್ನು ನೋಡುತ್ತಾ ನಾವು ಕಣ್ಣುಮುಚ್ಚಿ ಕೂರುವುದಿಲ್ಲ” ಎಂದು ಮೆಹ್ತಾ ವಾದಿಸಿದ್ದಾರೆ.

ನ್ಯಾಯಪೀಠವು ಆದೇಶವನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಈ ವಿಷಯದ ಬಗ್ಗೆ ನೋಟಿಸ್ ಜಾರಿಗೊಳಿಸಿತು. ಇದೀಗ ನ್ಯಾಯಾಲಯವು ಫೆಬ್ರವರಿ 7ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ತಪ್ಪು ನಿರೂಪಣೆ, ಬಲಪ್ರಯೋಗ, ಅನಗತ್ಯ ಪ್ರಭಾವ, ಬಲಾತ್ಕಾರ, ಯಾವುದೇ ಇತರ ಮೋಸದ ವಿಧಾನ, ಆಮಿಷ ಅಥವಾ ಮದುವೆಯ ಭರವಸೆಯ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಬಾರದು ಎಂದು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ, 2021 ಹೇಳುತ್ತದೆ.

ಬಲಪಂಥೀಯರ ಪಿತೂರಿ ಸಿದ್ಧಾಂತವಾದ ‘ಲವ್‌ ಜಿಹಾದ್’ (ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳನ್ನು ಮದುವೆಯಾಗಿ ಮತಾಂತರ ಮಾಡುತ್ತಾರೆಂಬ ವಾದ) ಪ್ರಸ್ತಾಪವನ್ನು ಬಿಜೆಪಿ ನಾಯಕರು ಆಗಾಗ್ಗೆ ಮಾಡುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೇಂದ್ರ ಗೃಹ ಸಚಿವಾಲಯವು ಲವ್ ಜಿಹಾದ್‌ನಂತಹ ಯಾವುದೇ ಪ್ರಕರಣಗಳ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಆದರೂ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳು ‘ಲವ್ ಜಿಹಾದ್’ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The right answer for love ziyad , if BJP people’s have the strong dum & thakat(guts) is love pankthi (bhojana)for all Hindus with together(poor&rich) in all over India……

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....