Homeಮುಖಪುಟ‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ - ರಾಹುಲ್ ಗಾಂಧಿ

‘ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯ ವಿರೋಧಿ’ – ರಾಹುಲ್ ಗಾಂಧಿ

- Advertisement -
- Advertisement -

ತಾನು ಏಕಸ್ವಾಮ್ಯ ವಿರೋಧಿಯೆ ಹೊರತು ವ್ಯಾಪಾರ ವಿರೋಧಿ ಅಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ದಿನದ ಹಿಂದೆ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ಅವರ ‘ಎ ನ್ಯೂ ಡೀಲ್ ಫಾರ್ ಇಂಡಿಯನ್ ಬ್ಯುಸಿನೆಸ್’ ಎಂಬ ಶೀರ್ಷಿಕೆಯ ಸಂಪಾದಕೀಯ ಲೇಖನಕ್ಕೆ ವ್ಯಕ್ತವಾದ ಟೀಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿನ ನನ್ನ ವಿರೋಧಿಗಳು ನನ್ನನ್ನು ವ್ಯಾಪಾರ ವಿರೋಧಿ ಎಂದು ಬಿಂಬಿಸಿದ್ದಾರೆ. ಆದರೆ ನಾನು ಕೆಲವೆ ಕೆಲವರು ಮಾರುಕಟ್ಟೆಯನ್ನು ನಿಯಂತ್ರಿಸುವುದರ ವಿರೋಧಿ. ಒಬ್ಬ ಅಥವಾ ಎರಡು ಅಥವಾ ಮೂರು ಅಥವಾ ಐದು ಜನರ ವ್ಯವಹಾರದ ಪ್ರಾಬಲ್ಯವನ್ನು ನಾನು ವಿರೋಧಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಲ್ಲಾ ವ್ಯವಹಾರಗಳಿಗೆ ಮುಕ್ತ ಮತ್ತು ನ್ಯಾಯಯುತ ಸ್ಥಳವಿದ್ದರೆ ಆರ್ಥಿಕತೆಯು ಅಭಿವೃದ್ಧಿ ಹೊಂದುತ್ತದೆ ಎಂದು ರಾಹುಲ್ ಹೇಳಿದ್ದು, ತಾನು ”ಉದ್ಯೋಗಗಳ ಪರ, ವ್ಯಾಪಾರದ ಪರ, ನಾವೀನ್ಯತೆ ಪರ, ಸ್ಪರ್ಧೆಯ ಪರ” ಎಂದು ಹೇಳಿದ್ದಾರೆ.

ದಿಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯ ಬರಹದಲ್ಲಿ ರಾಹುಲ್ ಗಾಂಧಿ ಅವರು, “ಎಲ್ಲಾ ವ್ಯವಹಾರಗಳ ಖರ್ಚಿನಲ್ಲಿ ಒಂದೇ ವ್ಯಾಪಾರವನ್ನು ಬೆಂಬಲಿಸಲು ಸರ್ಕಾರ ಅನುಮತಿ ನೀಡಬಾರದು. ನಮ್ಮ ಸಂಸ್ಥೆಗಳು ಇನ್ನು ಮುಂದೆ ನಮ್ಮ ಜನರದ್ದಾಗಿ ಇರಲ್ಲ. ಅವರು ಏಕಸ್ವಾಮ್ಯ ವ್ಯಾಪಾರಿಗಳಿಗೆ ಹರಾಜು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಲೇಖನಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ “ಮತ್ತೊಂದು ಆಧಾರರಹಿತ ಆರೋಪ” ಎಂದು ಕರೆದಿದೆ. “ಮ್ಯಾಚ್-ಫಿಕ್ಸಿಂಗ್ ಏಕಸ್ವಾಮ್ಯ ಗುಂಪುಗಳು ವರ್ಸಸ್ ಫೇರ್-ಪ್ಲೇ ವ್ಯವಹಾರಗಳು” ಸರಳವಾಗಿ ದಾರಿತಪ್ಪಿಸುವಂತಿದೆ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಪಕ್ಷವು ಹೇಳಿದೆ.

ಬುಧವಾರದ ಸಂಪಾದಕೀಯ ಬರಹದಲ್ಲಿ, ಏಕಸ್ವಾಮ್ಯ ಸಂಸ್ಥೆಗಳು “ಬೃಹತ್ ಸಂಪತ್ತನ್ನು” ಸಂಗ್ರಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೇಶದ ಉಳಿದ ಜನಸಂಖ್ಯೆ ಹೆಚ್ಚು ಅಸಮಾನತೆ ಹೊಂದಿದ್ದು, ಅವರ ವಿರುದ್ಧದ ಅನ್ಯಾಯ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಏಕಸ್ವಾಮ್ಯದ ಕಂಪೆನಿಗಳ ವಿರುದ್ಧ ಸ್ಪರ್ಧಿಸಲು ಬೇರೆ ಸಂಸ್ಥೆಗಳು ಕೇವಲ ಅವರ ಜೊತೆಗೆ ಮಾತ್ರವಲ್ಲ, ‘ಭಾರತದ ಆಡಳಿತ ಯಂತ್ರದ’ ಜೊತೆಗೆ ಕೂಡಾ ಸ್ಪರ್ಧಿಸಬೇಕು ಎಂದು ಅವರು ಹೇಳಿದ್ದಾರೆ.

ಲೇಖನದಲ್ಲಿ ರಾಹುಲ್ ಗಾಂಧಿ ಯಾವ ಉದ್ಯಮಿಯನ್ನು ಉಲ್ಲೇಖಿಸಿ ಹೇಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಒಡೆತನದ ಕಂಪೆನಿಗಳಿಗೆ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆಗಾಗ್ಗೆ ಆರೋಪಿಸುತ್ತಲೆ ಇದೆ.

ಅದಾನಿ ಗ್ರೂಪ್ ಭಾರತದ ನಾಗರಿಕ ವಿಮಾನಯಾನ, ಹಡಗು, ಸಿಮೆಂಟ್, ವಿದ್ಯುತ್ ಮತ್ತು ರಕ್ಷಣಾ ಉದ್ಯಮಗಳಲ್ಲಿ ಏಕಸ್ವಾಮ್ಯವನ್ನು ಪಡೆಯಲು ಪ್ರಯತ್ನಿಸುತ್ತಿರುವ “ಸಿಂಡಿಕೇಟ್” ನಿಂದ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅಕ್ಟೋಬರ್ 29 ರಂದು ಆರೋಪಿಸಿದ್ದರು.

ಇದನ್ನೂ ಓದಿ: PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...