Homeಕರ್ನಾಟಕವಿಪಕ್ಷ ನಾಯಕನನ್ನು ನೇಮಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ವಿಪಕ್ಷ ನಾಯಕನನ್ನು ನೇಮಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

- Advertisement -
- Advertisement -

ಜಂಟಿ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಈ ವರೆಗೂ ವಿರೋಧ ಪಕ್ಷ ನಾಯಕನನ್ನು ನೇಮಕ ಮಾಡದಿರುವ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜಿಪಿಯನ್ನು ಟೀಕಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ”ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು. ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ” ಎಂದು ಆರೋಪ ಮಾಡಿದ್ದಾರೆ.

”ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ. ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ” ಎಂದು ಕಟುವಾಗಿ ಟೀಕಿಸಿದ್ದಾರೆ.

”ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನ ಗೌರವಿಸಲಿಲ್ಲ. ಈಗ ವಿಪಕ್ಷ ಸ್ಥಾನದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಕಾಂಗ್ರೆಸ್ ಕಿಡಿಕಾರಿದೆ.

ಅಧಿವೇಶದನದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದೆ. ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಈ ವರೆಗೂ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡದಿರುವುದು ಬಿಜೆಪಿ ಪಕ್ಷಕ್ಕೆ ತೀವ್ರ ಇರಿಸುಮುರಿಸು ಉಂಟುಮಾಡಿದೆ.

ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆ ವಿಳಂಬ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಬಿಜೆಪಿಯೇ ಸಂಕಷ್ಟದಲ್ಲಿ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

0
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ನೋಟಿಸ್ ಜಾರಿ ಮಾಡಿದೆ...