Homeಕರ್ನಾಟಕ'ಭಾರತ ವಿಕಾಸ ಸಂಗಮ ಸಂಸ್ಥೆ' ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

‘ಭಾರತ ವಿಕಾಸ ಸಂಗಮ ಸಂಸ್ಥೆ’ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ಅಧಿಕೃತ ಆಹ್ವಾನವೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಂಘಪರಿವಾರ ಹಿನ್ನೆಲೆಯ ‘ಭಾರತ ವಿಕಾಸ ಸಂಗಮ ಸಂಸ್ಥೆ’ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸುತ್ತಾರೆ ಎಂಬ ಆಹ್ವಾನ ಪತ್ರಿಕೆ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ನನಗೆ ಅಧಿಕೃತ ಆಹ್ವಾನವೂ ಬಂದಿಲ್ಲ” ಎಂದು ಇಂದು ಹೇಳಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ.

2025ರ ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ನಡೆದ 75ನೇ ಸಂವಿಧಾನ ದಿನಾಚರಣೆ ಸೇರಿದಂತೆ ಹಲವು ಭಾರಿ ಸಂಘಪರಿವಾರದ ವಿರುದ್ಧ ನೇರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಅವರು, ಸೈದ್ಧಾಂತಿಕವಾಗಿ ವಿರೋಧಿಸುತ್ತಾರೆ. ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾತ್ತಿದ್ದಾರೆ ಎಂಬದು ಸಾಕಷ್ಟು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಕೆಲವರು ಸಿದ್ದರಾಮಯ್ಯ ಅವರು ನೇರವಾಗಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದರು.

ವಿವಾದ ತೀವ್ರವಾಗುತ್ತಿದ್ದಂತೆಯೇ, ಊಹಾಪೋಹ ಹಾಗೂ ಚರ್ಚೆಗೆ ಸಿಎಂ ತೆರೆ ಎಳೆದಿದ್ದಾರೆ. ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...

‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ!

ಕಾಕ್‌ರೋಚ್ ಜನತಾ ಪಾರ್ಟಿಯ ಯುವ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸುತ್ತಿರುವ ಕಸ್ಟಡಿ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಪ್ರಜಾಪ್ರಭುತ್ವವಾದಿ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ...

ಯೇಸುವಿನ ದರ್ಶನದ ಹೆಸರಲ್ಲಿ 191 ಜನರ ಮಾರಣಹೋಮ : ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಸೇರಿ 29 ಮಂದಿ ತಪ್ಪಿತಸ್ಥರು ಎಂದ ನ್ಯಾಯಾಲಯ  

ಬರೋಬ್ಬರಿ 191 ಜನರ ಸಾವಿಗೆ ಕಾರಣನಾದ ಕೀನ್ಯಾದ ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಮತ್ತು ಆತನ ಸಹಚರರನ್ನು ಸೋಮವಾರ (ಅಕ್ಟೋಬರ್ 19) ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನವೆಂಬರ್ 6ರಂದು ಶಿಕ್ಷೆ ಪ್ರಮಾಣ...

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...