Homeಕರ್ನಾಟಕಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು - ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಮೆಕ್ಕೆಜೋಳಕ್ಕೆ ಸಿಗುತ್ತಿಲ್ಲ ಬೆಂಬಲ ಬೆಲೆ; ಬೆಳೆಗಾರರು ಕಂಗಾಲು – ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಸರ್ಕಾರದ ಈ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಪ್ರಧಾನವಾಗಿ ಬೆಳೆಯಲಾಗುತ್ತದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದ ಅಧಿಕ ಭೂಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದು ಈಗ ಕಟಾವಿಗೆ ಬಂದಿದೆ. ಮಳೆ ಕಾಲ ಕಾಲಕ್ಕೆ ಸುರಿದ ಪರಿಣಾಮ ಮೆಕ್ಕೆಜೋಳ ಉತ್ತಮ ಇಳುವಳಿ ಬಂದಿದೆ. ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯೂ ಸಿಗದೆ ರೈತರು ಕಂಗಾಲಾಗುವಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ರೈತರಿಂದ ನೇರವಾಗಿ ಮೆಕ್ಕೆಜೋಳ ಕೊಳ್ಳಲು ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯ ಕೇಳಿಬಂದಿದೆ.

ಉತ್ತರ ಕರ್ನಾಟಕದ ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ, ಬೆಳಗಾವಿ ಜಿಲ್ಲೆಯ ಹಾವೇರಿ, ಮಧ್ಯಕರ್ನಾಟಕದ ಶಿವಮೊಗ್ಗ ಭಾಗದಲ್ಲಿ ವ್ಯಾಪಕವಾಗಿ ಮೆಕ್ಕೆಜೋಳ ಬೆಳೆಯಲಾಗಿದೆ. ಕಡಿಮೆ ನೀರಿನಲ್ಲಿ, ಕಡಿಮೆ ಸಮಯದಲ್ಲಿ ಬೆಳೆ ಕೈಬರುತ್ತದೆ ಎಂಬ ಕಾರಣಕ್ಕಾಗಿ ಬಹುತೇಕ ರೈತರು ಮೆಕ್ಕೆಜೋಳದ ಮೊರೆಹೋಗಿದ್ದರು. ಎಲ್ಲಾ ಕಡೆ ಬೆಳೆ ಚೆನ್ನಾಗಿ ಬಂದಿದ್ದು ಕಟಾವು ಕೂಡ ಮಾಡಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಮತ್ತು ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ಶಾಸಕ ಆರ್‌‌. ವಿ. ದೇಶಪಾಂಡೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಅವರಿಗೆ ಬರೆದಿರುವ ಪತ್ರ

ಕ್ವಿಂಟಾಲ್ ಮೆಕ್ಕೆಜೋಳ ಕೇವಲ 1300 ರೂಗಳಿಗೆ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1860 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೂ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಷ್ಟದ ಕಾಲದಲ್ಲಿ ಸ್ವಲ್ಪಮಟ್ಟಿನ ಲಾಭವಾದರೂ ಬರಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಮೆಕ್ಕೆಜೋಳವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದು ನಿರಾಸೆ ತರಿಸಿದೆ. ರಾಜ್ಯದ ಒಂದೊಂದು ಜಿಲ್ಲೆಯಲ್ಲೂ ಒಂದೊಂದು ಬೆಲೆಯಡಿ ಮೆಕ್ಕೆಜೋಳ ಖರೀದಿ ನಡೆಯುತ್ತಿದೆ.

ಇದನ್ನೂ ಓದಿ: (ರೈತ) ಚಳುವಳಿಯ ಬಿಕ್ಕಟ್ಟು : ಕೆ. ಪಿ. ಸುರೇಶ್

ಉತ್ತರ ಕರ್ನಾಟಕದ ರಾಯಚೂರು, ಗದಗ, ಬಾಗಲಕೋಟೆ ಭಾಗದಲ್ಲಿ 1400 ರೂಗಳಿಗೆ ಮೆಕ್ಕೆಜೋಳಕ್ಕೆ ಬೆಲೆ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1300 ರೂ, ತುಮಕೂರು ಜಿಲ್ಲೆಯಲ್ಲಿ 1500 ರೂ ಹೀಗೆ ಥರಾವರಿ ಬೆಲೆಯಲ್ಲಿ ಖರೀದಿಸುತ್ತಿದ್ದರೂ ಬೆಂಬಲ ಬೆಲೆಗಿಂತ 400-500 ರೂಪಾಯಿ ಕಡಿಮೆ ಬೆಲೆಗೆ ಕೊಳ್ಳಲಾಗುತ್ತಿದೆ. ಕೊರೊನ ಸಂಕಟದಿಂದಾಗಿ ಎಲ್ಲಾ ಬೆಳೆಗಳಲ್ಲೂ ನಷ್ಟ ಅನುಭವಿಸಿದ್ದ ರೈತರು ಈಗ ಬೆಂಬಲ ಬೆಲೆಯೂ ಸಿಗದೆ ತೊಂದರೆಗೆ ಸಿಲುಕಿದ್ದು ಸರ್ಕಾರ ರೈತರಿಂದ ನೇರ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸಂಬಂಧ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಹಕಾರ ಸಚಿವ ಎಚ್.ಟಿ.ಸೋಮಶೇಖರ್ ಅವರಿಗೆ ಪತ್ರ ಬರೆದು ಮೆಕ್ಕೇಜೋಳವನ್ನು ಕೇವಲ 1300 ರೂಗಳಿಗೆ ಖರೀದಿ ಮಾಡುತ್ತಿದ್ದಾರೆ. ರೈತರಿಗೆ ಸೂಕ್ತ ಬೆಲೆಯೇ ಸಿಗುತ್ತಿಲ್ಲ. ಇದರಿಂದ ಮೆಕ್ಕೆಜೋಲ ಬೆಳೆದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಮಧ್ಯಪ್ರವೇಶ ಮಾಡಿ ಮೆಕ್ಕೆಜೋಳವನ್ನು ಕೊಳ್ಳಲು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸಿರುವ 1860 ರೂಗಳಿಗೆ ಮೆಕ್ಕೇಜೋಳ ಖರೀದಿಸಬೇಕು ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಳಿಯಾಳ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಹೆಚ್ಚಾಗಿ ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಪ್ರತಿಹೆಕ್ಟೇರ್ ಗೆ 37.50 ಕ್ವಿಂಟಾಲ್ ಬೆಳೆ ನಿರೀಕ್ಷಿಸಲಾಗಿದೆ. ಅಂದರೆ 3500 ಹೆಕ್ಟೇರ್ ಭೂಪ್ರದೇಶದಲ್ಲಿ 2,43,750 ಕ್ವಿಂಟಾಲ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಸಹಕಾರ ಸಚಿವರು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನೇ ಹೆಚ್ಚಾಗಿ ಬೆಳೆಯುವುದನ್ನು ರೈತರು ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ರೈತರ ಬಗ್ಗೆ ಉತ್ತರ ಕರ್ನಾಟಕ ಭಾಗದ ಯಾವುದೇ ಜನ ಪ್ರತಿನಿಧಿಗಳು, ಶಾಸಕರು ಸಚಿವರು ಮತ್ತು ಸಂಸದರೂ ಕೂಡ ರೈತರ ಸಮಸ್ಯೆಗಳ ಕುರಿತು ದನಿ ಎತ್ತಿಲ್ಲ. ಮೆಕ್ಕೆಜೋಳವನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸವನ್ನೂ ಯಾರೊಬ್ಬರೂ ಮಾಡಿಲ್ಲದಿರುವುದು ಶೋಚನೀಯ ಸಂಗತಿ ಎಂಬ ಟೀಕೆ ವ್ಯಕ್ತವಾಗಿದೆ.

ಶಾಸಕ ಆರ್‌‌. ವಿ. ದೇಶಪಾಂಡೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ 5000 ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೆಕ್ಕೆಜೋಳ ಬೆಳೆದು ನಷ್ಟ ಅನುಭವಿಸಿದ್ದ ರೈತರು ಸರ್ಕಾರಕ್ಕೆ ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳನ್ನೂ ನೀಡಿದ್ದರು. ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ದೂರಿದ್ದಾರೆ. ಒಂದು ಕಡೆ ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸರ್ಕಾರವೂ ನೇರವಾಗಿ ಖರೀದಿಸಿ ರೈತರ ಸಂಕಷ್ಟವನ್ನು ನಿವಾರಿಸುವ ಗೋಜಿಗೆ ಹೋಗುತ್ತಿಲ್ಲ. ಕೊರೊನ ಕಾಲದಲ್ಲಿ ರೈತರ ನೋವನ್ನು ಕೇಳುವವರೇ ಇಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ಮೌನ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...