HomeಮುಖಪುಟG20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

- Advertisement -
- Advertisement -

G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ವಿಚಾರದಲ್ಲಿ ಅವರು ರಾಜಕೀಯ ಮಾಡಬಾರದಿತ್ತು ಎಂದು ಹೇಳಿದ್ದಾರೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಆಹ್ವಾನಿಸದ ಬಗ್ಗೆ ಪ್ರತಿಕ್ರಿಯಿಸಿ ಇದು “ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಭಾರತದ ಜನಸಂಖ್ಯೆಯ ಶೇ. 60ರಷ್ಟು ಜನರನ್ನು ಪ್ರತಿನಿಧಿಸುವ ನಾಯಕರನ್ನು ಗೌರವಿಸಿಲ್ಲ. ಇದೊಂದು ವಿಧದ ಸರ್ಕಾರದ ನಡೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದರು.

ಜಿ20 ಶೃಂಗಸಭೆ ಹಿನ್ನೆಲೆ ರಾಷ್ಟ್ರಪತಿಗಳು ಆಯೋಜಿಸಿರುವ ಔತಣ ಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯ ಸ್ಥಾನಮಾನವನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಗೌರವಾನ್ವಿತ ಅತಿಥಿಗಳು ಸಹ ಅತಿಥಿ ಪಟ್ಟಿಯಲ್ಲಿದ್ದಾರೆ. ಆದರೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಲಾಗಿಲ್ಲ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...