Homeಮುಖಪುಟಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾದ ವೈದ್ಯ ಕಫೀಲ್ ಖಾನ್ ತಾವು ಯಾವುದೇ ಪಕ್ಷ ಸೇರುವುದಿಲ್ಲ ಎಂದಿದ್ದಾರೆ. ಬಿಡುಗಡೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಉಹಾಪೋಹಗಳನ್ನು ತಳ್ಳಿಹಾಕಿರುವ ಅವರು ನಾನು ವೈದ್ಯ, ವೈದ್ಯಾನಾಗಿಯೇ ಇರಲು ಬಯಸುತ್ತೇನೆ ಎಂದಿದ್ದಾರೆ.

ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಆದೇಶಿಸಿತ್ತು. ನಂತರ ಅವರನ್ನು ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

ಪ್ರಸ್ತುತ ರಾಜಸ್ತಾನದಲ್ಲಿರುವ ಡಾ. ಖಾನ್ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಪಿಟಿಐ ತಿಳಿಸಿದೆ. “ನಾನು ವೈದ್ಯನಾಗಿದ್ದೇನೆ ಮತ್ತು ಅದೇ ರೀತಿ ಇರಲು ಬಯಸುತ್ತೇನೆ” ಎಂದ ಅವರು ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಹಾಯ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

“ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮತ್ತು ಮಥುರಾದಿಂದ ಭರತ್‌ಪುರಕ್ಕೆ ಇರುವ ದೂರ ಕೇವಲ 20 ನಿಮಿಷಗಳಾದ್ದರಿಂದ, ಪ್ರಿಯಾಂಕಾ ಗಾಂಧಿ ನನಗೆ ಭರತ್‌ಪುರಕ್ಕೆ ಬರಲು ಹೇಳಿದ್ದರು. ಪ್ರಿಯಾಂಕಾ ಗಾಂಧಿಯವರೊಂದಿಗೆ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಮತ್ತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಡಾ. ಕಫೀಲ್ ಖಾನ್ ತಿಳಿಸಿದ್ದಾರೆ.

ಸೆ.1 ರಂದು ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ ಅವರ ಬಿಡುಗಡೆ ವಿಳಂಬವಾದಾಗ, ಉತ್ತರಪ್ರದೇಶ ಸರ್ಕಾರವು ಮತ್ತೆ ಒಂದು ಪ್ರಕರಣದಲ್ಲಿ ಸಿಲುಕಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಆತಂಕವಿತ್ತು ಎಂದು ಅವರು ಹೇಳಿದರು.

ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಆ ಆತಂಕದಲ್ಲಿದ್ದಾಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾನವೀಯ ನೆಲೆಯಲ್ಲಿ ನನಗೆ ಸಹಾಯ ಮಾಡಿದ್ದಾರೆ. ಆದರೆ ಅಷ್ಟಕ್ಕೆ ಕಾಂಗ್ರೆಸ್ ಪಕ್ಷ ಸೇರಲು ಹೊರಟ್ಟಿದ್ದಾರೆ ಎಂದು ನಿರ್ಣಯಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಈ ನಡುವೆ ಡಾ. ಕಫೀಲ್ ಖಾನ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಗೋರಖ್‌ಪುರದ ವೈದ್ಯಕೀಯ ಕಾಲೇಜಿನಲ್ಲಿ ತಮ್ಮ ಹುದ್ದೆಗೆ ಪುನಃ ನೇಮಕ ಮಾಡುವಂತೆ, ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಶಿಶುವೈದ್ಯರಾಗಿ ಕೆಲಸ ಮಾಡುತ್ತಿದ್ದ ಡಾ. ಖಾನ್ 2017 ರಲ್ಲಿ ಆಮ್ಲಜನಕ ಸಿಲಿಂಡರ್‌ಗಳ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಹಲವಾರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಆರಂಭದಲ್ಲಿ, ತುರ್ತು ಆಮ್ಲಜನಕ ಸಿಲಿಂಡರ್‌ಗಳನ್ನು ಜೋಡಿಸಿದ್ದಕ್ಕಾಗಿ ಅವರನ್ನು ಮಕ್ಕಳ ರಕ್ಷಕ ಎಂದು ಕರೆಯಲಾಯಿತು. ಆದರೆ ನಂತರ ಯೋಗಿ ಸರ್ಕಾರ ಇವರ ಜೊತೆಗೆ ಆಸ್ಪತ್ರೆಯ ಇತರ ಒಂಬತ್ತು ವೈದ್ಯರು ಮತ್ತು ಸಿಬ್ಬಂದಿ ಮೇಲೆ ಕ್ರಮ ಜರುಗಿಸಲಾಯಿತು. ತನಿಖೆಯಲ್ಲಿ ಇವರದು ತಪ್ಪಿಲ್ಲ ಎಂದು ತಿಳಿದುಬಂದು ಇವರೆಲ್ಲರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಆದರೆ ಜನವರಿ 2020ಯಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆ (ಸಿಎಎ) ಪ್ರತಿಭಟನೆಯ ಸಂದರ್ಭದಲ್ಲಿ ಎಎಂಯುನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಖಾನ್ ಅವರನ್ನು ಮತ್ತೆ ಬಂಧಿಸಲಾಯಿತು. ಆದರೆ ಆರೋಪ ಸಾಬೀತಾಗದೆ ಸೆ.1ರಂದು ಅಲಹಾಬಾದ್ ಹೈಕೋರ್ಟ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ, ಅವರು ಮಥುರಾ ಜೈಲಿನಿಂದ ತಡರಾತ್ರಿ ಹೊರನಡೆದರು.

ಸದ್ಯ ವೈದ್ಯ ಕಫೀಲ್ ಖಾನ್ ರಾಜಕೀಯಕ್ಕೆ ಬರುವ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ವೈದ್ಯರಾಗಿಯೇ ಮುಂದುವರೆದು ಜನ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...