Homeಮುಖಪುಟಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

- Advertisement -
- Advertisement -

ಬುಧವಾರ ಬಿಜೆಪಿಯ ಅಮಿತ್‌ ಶಾ ಅವರನ್ನು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭೇಟಿಯಾದಾಗಿನಿಂದ ಅವರು ಬಿಜೆಪಿ ಸೇರುವ ವಿಚಾರ ಚರ್ಚೆಗೆ ಬಂದಿತ್ತು ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿರುವ ಕ್ಯಾಪ್ಟನ್, ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದಾರೆ.

NDTV ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. “ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ. ಆದರೆ ಮುಂದೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು” ಎಂದು ಹೇಳಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಪಂಜಾಬ್ ಕಾಂಗ್ರೆಸ್ ನಾಯಕ ಅಮರಿಂದರ್‌ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು.

ಇದನ್ನೂ ಓದಿ: ‘ಪಿಎಂ ಪೋಶಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

“ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಪ್ರಶ್ನಿಸಿದ್ದಾರೆ.

ಪಕ್ಷದಿಂದ ನನಗೆ ಮೂರು ಬಾರಿ ಅವಮಾನ ಮಾಡಲಾಗಿದೆ ಎಂದು ಸೋನಿಯಾ ಗಾಂಧಿ ಅವರಿಗೆ ತಿಳಿಸಿರುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಕೆಳಗಿಳಿಯುತ್ತಿದೆ ಎಂದು ಹೇಳಿರುವ  ಅಮರಿಂದರ್‌ ಸಿಂಗ್, ನವಜೋತ್ ಸಿಂಗ್ ಸಿಧು ಅವರನ್ನು “ಚೈಲ್ಡಿಶ್” ಎಂದು ಕರೆದಿದ್ದಾರೆ.

“ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇಳಿಮುಖವಾಗುತ್ತಿದೆ. ಜುಲೈ ಮತ್ತು ಸೆಪ್ಟೆಂಬರ್ ನಡುವೆ ಕಾಂಗ್ರೆಸ್ ನಡೆಸಿದ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಜನಪ್ರಿಯತೆ ಏರುತ್ತಿರುವುದು ಮತ್ತು ಕಾಂಗ್ರೆಸ್ ಜನಪ್ರಿಯತೆ 20% ಕುಸಿದಿರುವುದು ವರದಿಯಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಅಮಿತ್‌ ಶಾ ಅವರನ್ನು ಭೇಟಿಯಾದ ಪಂಜಾಬ್ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...