Homeಕರ್ನಾಟಕಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ...! - ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

- Advertisement -
- Advertisement -

ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲ್ ಹಾಕಿದ್ದಾರೆ. 4 ಕ್ಷೇತ್ರಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ, ಭಾರೀ ಬಹುಮತದೊಂದಿಗೆ ಗೆದ್ದು ಪ್ರತಿಸ್ಪರ್ಧಿಗಳನ್ನು ಇಲ್ಲವಾಗಿಸುತ್ತೇವೆ ಎಂದೂ ಹೇಳಿದ್ದಾರೆ.

“2019 ರ ಲೋಕಸಭಾ ಚುನಾವಣೆಯಲ್ಲಿ 27 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದ್ದೇವೆ. ಅದೇ ವರ್ಷ, ಉಪಚುನಾವಣೆಗಳು ನಡೆದ 15 ವಿಧಾನಸಭಾ ಸ್ಥಾನಗಳಲ್ಲಿ, 12 ಸ್ಥಾನಗಳನ್ನು ಗೆದ್ದುಕೊಂಡಿದ್ದೇವೆ. 2020 ರಲ್ಲಿ ಸಿರಾ ಮತ್ತು ರಾಜರಾಜೇಶ್ವರಿ ನಗರ ಎರಡೂ ಕ್ಷೇತ್ರಗಳಲ್ಲೂ ನಮ್ಮ ಪಕ್ಷ ಗೆದ್ದಿದೆ” ಎಂದು ಯಡಿಯೂರಪ್ಪ ವಿಧಾನಸಭಾ ಅಧಿವೇಶನದಲ್ಲಿ ಹೇಳಿದರು.

ಇದನ್ನೂ ಓದಿ: ಪ್ರತ್ಯಕ್ಷದರ್ಶಿಯ ರೈತ ಪ್ರತಿಭಟನೆ ವರದಿ, ವಿಶ್ಲೇಷಣೆ; ಒಂದು ಹೆಜ್ಜೆ ಹಿಂದಕ್ಕೆ, ಎರಡು ಹೆಜ್ಜೆ ಮುಂದಕ್ಕೆ

ಈ ವರ್ಷ ನಡೆಯಲಿರುವ ಉಪಚುನಾವಣೆಗಳಲ್ಲಿ ಮಸ್ಕಿ, ಬಸವಕಲ್ಯಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳು ಮತ್ತು ಬೆಳಗಾವಿ ಲೋಕಸಭಾ ಸ್ಥಾನಗಳು ಸೇರಿವೆ. ಈ ನಾಲ್ಕೂ ಕ್ಷೇತ್ರಗಳಲ್ಲೂ ನಾವೆ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು.

ಗುರುವಾರದ ಅಧಿವೇಶನದ ನೇರ ಪ್ರಸಾರ ನೋಡಲು ಇಲ್ಲಿ ಕ್ಲಿಕ್ ಮಾಡಿ.

“ನಿಮ್ಮ (ಸಿದ್ದರಾಮಯ್ಯ) ನಾಯಕತ್ವದಲ್ಲಿ ಕಾಂಗ್ರೆಸ್ ಈ ಎಲ್ಲಾ ಚುನಾವಣೆಯಲ್ಲೂ ಕಳಪೆ ಪ್ರದರ್ಶನ ನೀಡಿದೆ. ಇದಕ್ಕೆ ಕಾರಣ ಜನರು ಕಾಂಗ್ರೆಸ್ ಮೇಲಿನ ನಂಬಿಕೆಯನ್ನು ಕಳೆದುಕೊಂಡಿರುವುದೇ ಆಗಿದೆ. ಸವಾಲುಗಳು ಯಾವಾಗಲೂ ನನಗೆ ಪ್ರೇರಣೆಯನ್ನು ನೀಡುತ್ತವೆ. ಇದುವರೆಗೂ ನಾನು ನೂರಾರು ಸವಾಲುಗಳನ್ನು ಎದುರಿಸಿದ್ದೇನೆ ಮತ್ತು ಅವುಗಳಲ್ಲಿ ಗೆದ್ದಿದ್ದೇನೆ” ಎಂದು ಹೇಳಿದರು.


ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...