Homeಮುಖಪುಟ10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

10 ತಿಂಗಳಲ್ಲ, 10 ವರ್ಷಗಳವರೆಗೂ ಹೋರಾಡಲು ಸಿದ್ದರಿದ್ದೇವೆ: ರಾಕೇಶ್ ಟಿಕಾಯತ್

- Advertisement -
- Advertisement -

ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಹತ್ತು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮುಂದಿನ 10 ವರ್ಷಗಳವರೆಗೂ ಚಳವಳಿ ನಡೆಸಲು ಸಿದ್ಧರಿದ್ದಾರೆ. ಆದರೆ ಈ ಕರಾಳ ಕಾಯ್ದೆಗಳನ್ನು ಜಾರಿಗೊಳಿಸಲು ಯಾವತ್ತೂ ಬಿಡುವುದಿಲ್ಲವೆಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ರೈತ ಸಂಘಟನೆಗಳು ಕೃಷಿ ಕಾಯ್ದೆಗಳ ವಿರುದ್ಧ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಮುನ್ನಾ ದಿನವಾದ ರವಿವಾರ ಹರ್ಯಾಣದ ಪಾಣಿಪತ್ ನಡೆದ ಕಿಸಾನ್ ಮಹಾ ಪಂಚಾಯತ್ ನಲ್ಲಿ ಮಾತನಾಡಿ ಅವರು, ‘‘ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಆರಂಭಗೊಂಡು 10 ತಿಂಗಳುಗಳು ಕಳೆದಿವೆ. ಒಂದು ವೇಳೆ ನಾವು ಈ ಕಾಯ್ದೆಗಳ ವಿರುದ್ಧ ಇನ್ನೂ 10 ವರ್ಷಗಳ ಕಾಲ ಪ್ರತಿಭಟನೆ ನಡೆಸಲೂ ಸಿದ್ಧರಿದ್ದೇವೆಂಬುದನ್ನು ಸರಕಾರವು ಕಿವಿಗೊಟ್ಟು ಕೇಳಬೇಕು ಎಂದರು. ಈ ಕಾಯ್ದೆಗಳನ್ನು ರದ್ದುಪಡಿಸುವ ತನಕವೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದರು.

ಒಂದು ವೇಳೆ ತಮ್ಮ ಬೇಡಿಕೆಗಳು ಈಡೇರದೆ ಇದ್ದಲ್ಲಿ ತಮ್ಮ ಚಳವಳಿಯನ್ನು ರೈತರು ಇನ್ನಷ್ಟು ತೀವ್ರಗೊಳಿಸಲಿದ್ದಾರೆಂದು ಅವರು ಹೇಳಿದರು.

ದಿಲ್ಲಿಯತ್ತ ಸಾಗಬೇಕಾದ ಅಗತ್ಯ ಬಂದರೂ ಬರಬಹುದಾದೆಂದು ಹೇಳಿದ ಟಿಕಾಯತ್ ಅದಕ್ಕಾಗಿ ಟ್ರಾಕ್ಟರ್ ಗಳನ್ನು ಸಜ್ಜಾಗಿರಿಸುವಂತೆ ಕರೆ ನೀಡಿದರು.‌ ಒಂದು ವೇಳೆ ಈಗಿನ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದು ಪಡಿಸದೆ ಇದ್ದಲ್ಲಿ ಭವಿಷ್ಯದಲ್ಲಿ ಅಧಿಕಾರಕ್ಕೇರುವ ಸರಕಾರಗಳಾದರೂ ಅದನ್ನು ಹಿಂಪಡೆಯಲೇಬೇಕಾಗುತ್ತದೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನು ಬಲಪಡಿಸಲು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಟಿಕಾಯತ್ ಅವರು ಯುವರೈತರನ್ನು ಆಗ್ರಹಿಸಿದರು.

ರೈತರ ಪ್ರತಿಭಟನೆಗೆ ಕಳಂಕ ಹಚ್ಚಲು ನಡೆಯುತ್ತಿರುವ ಅಭಿಯಾನವನ್ನು ಮಟ್ಟಹಾಕುವ ಅತಿ ದೊಡ್ಡ ಜವಾಬ್ದಾರಿ ಯುವ ರೈತರ ಹೆಗಲ ಮೇಲಿದೆಯೆಂದು ಅವರು ಹೇಳಿದರು. ಆರಂಭದಲ್ಲಿ ಕೇಂದ್ರ ಸರಕಾರವು ಈ ಪ್ರತಿಭಟನೆಯು ಕೇವಲ ಪಂಜಾಬ್ ಗಷ್ಟೇ ಸೀಮಿತವಾಗಿದೆಯೆಂದು ಬಿಂಬಿಸಲು ಯತ್ನಿಸಿತ್ತು. ಆನಂತರ ರೈತರನ್ನು ಬೇರೆ ಬೇರೆ ಹೆಸರುಗಳಿಂದ ಬ್ರಾಂಡ್ ಮಾಡಲಾಯಿತು. ಅಲ್ಲದೆ ಇದು ಶ್ರೀಮಂತರ ರೈತರ ಪ್ರತಿಭಟನೆ ಎಂದು ಬಿಂಬಿಸುವ ಯತ್ನವೂ ನಡೆದಿತ್ತು ಎಂದು ಟಿಕಾಯತ್ ಹೇಳಿದರು.

ಇಂದಿನ ಭಾರತ್ ಬಂದ್‌ ಎಲ್ಲಾ ರಾಜ್ಯಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಬಂದ್ ಯಶಸ್ವಿಯಾಗಿದೆ.


ಇದನ್ನೂ ಓದಿ: ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...