Homeಕರ್ನಾಟಕಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅಷ್ಟೇ ಅಲ್ಲ, ಮತ್ತಷ್ಟು ಸಿಎಂ ಆಕಾಂಕ್ಷಿಗಳಿದ್ದಾರೆ: ಎಂ.ಬಿ.ಪಾಟೀಲ್

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅಷ್ಟೇ ಅಲ್ಲ, ಮತ್ತಷ್ಟು ಸಿಎಂ ಆಕಾಂಕ್ಷಿಗಳಿದ್ದಾರೆ: ಎಂ.ಬಿ.ಪಾಟೀಲ್

- Advertisement -
- Advertisement -

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರ ಆಕಾಂಕ್ಷಿಗಳಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

“ನಾನು ಸೇರಿದಂತೆ ಸಿಎಂ ಸ್ಥಾನಕ್ಕೆ ಹಲವು ಸಮರ್ಥ ಸ್ಪರ್ಧಿಗಳಿದ್ದಾರೆ” ಎಂದು ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ಪಾಟೀಲ್ ಹೇಳಿದ್ದಾರೆ.

ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ (ಬ್ರಾಹ್ಮಣ) ಮತ್ತು ಕೃಷ್ಣ ಬೈರೇಗೌಡ (ಒಕ್ಕಲಿಗ) ಅವರನ್ನು ಸಂಭಾವ್ಯ ಸಿಎಂ ಅಭ್ಯರ್ಥಿಗಳೆಂದು ಅವರು ಹೆಸರಿಸಿದ್ದಾರೆ.

“ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯರಾದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ನಮ್ಮ ಪಕ್ಷದ ಉನ್ನತ ನಾಯಕರು. ನಾನು, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತು ಕೃಷ್ಣ ಬೈರೇಗೌಡ ಅವರು ನಂತರದ ಸಾಲಿನ ರಾಜ್ಯ ನಾಯಕರು” ಎಂದು ಪಾಟೀಲ್ ಹೇಳಿದ್ದಾರೆ.

“ಸಿಎಂ ಆಗುವ ಆಸೆಯನ್ನು ಯಾರು ಬೇಕಾದರೂ ವ್ಯಕ್ತಪಡಿಸಬಹುದು. ಆದರೆ ಒಬ್ಬರ ವೈಯಕ್ತಿಕ ಆಸಕ್ತಿ, ವಾಸ್ತವಕ್ಕೆ ದೂರವಿರಬಹುದು. ಅಂತಿಮವಾಗಿ ಶಾಸಕರ ಬೆಂಬಲ ಪಡೆಯಬೇಕು” ಎಂದು ಪಾಟೀಲ್ ಒತ್ತಿ ಹೇಳಿದ್ದಾರೆ.

“ಶಾಸಕರು ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುತ್ತಾರೆ. ಇದನ್ನು ಅನುಸರಿಸಿ, ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ಕಾಂಗ್ರೆಸ್ಸಿನ ಪರಂಪರೆಯಾಗಿದೆ” ಎಂದಿದ್ದಾರೆ ಪಾಟೀಲ್.

“ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಸಿಎಂ ಆಗಬೇಕೆಂದು ಆಕಾಂಕ್ಷೆ ವ್ಯಕ್ತಪಡಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪಕ್ಷ ಯಾರನ್ನೂ ಪ್ರೊಜೆಕ್ಟ್ ಮಾಡಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಉನ್ನತ ನಾಯಕರು ಸ್ಪಷ್ಟಪಡಿಸಿದ್ದಾರೆ” ಎಂದಿದ್ದಾರೆ.

ಎಂ.ಬಿ.ಪಾಟೀಲ್ ಅವರು ಹೇಳಿರುವ ಮಾತುಗಳನ್ನೇ ಇತ್ತೀಚೆಗೆ ಸಿದ್ದರಾಮಯ್ಯನವರು ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದರು. ಆದರೆ ಎನ್‌ಡಿಟಿವಿ ಹೇಳಿಕೆಯನ್ನು ತಿರುಚಿ ಟೀಕೆಗೆ ಗುರಿಯಾಗಿತ್ತು. “ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳು ಸುದ್ದಿ ವರದಿ ಮಾಡಿತ್ತು.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿತ್ತು. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿತ್ತು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎಂದಿದ್ದರು ಸಿದ್ದರಾಮಯ್ಯ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎಂದು ಸ್ಪಷ್ಟಡಿಸಿದ್ದರು.

ತಿರುಚಿ ವರದಿ ಮಾಡಿದ್ದ ಎನ್‌ಡಿಟಿವಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಬಳಿಕ ಸುದ್ದಿಯನ್ನು ಎನ್‌ಡಿಟಿವಿ ತಿದ್ದಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...