Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...