Homeಕರ್ನಾಟಕಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

- Advertisement -
- Advertisement -

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಭಾನುವಾರ (ಮಾ.23) ವರದಿಯಾಗಿತ್ತು. ಆದರೆ, ತಾನು ರಾಜೀನಾಮೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಮಾತನಾಡಿದ ಹೊರಟ್ಟಿ, “ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಆ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕರೆ ಮಾಡಿ ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡವಳಿಕೆ ನನ್ನ ಮನಸ್ಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆಗಳು ಬಂದಿವೆ. ಮಾನಸಿಕ ನೆಮ್ಮದಿ ಹಾಳಾಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

“ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ, ಕಾಲ ಕೆಟ್ಟಿದೆ. ಸದನದ ಗೌರವ ಹೋಗಿ ಬಹಳ ದಿನ ಆಗಿದೆ” ಎಂದಿದ್ದಾರೆ.

“ಚುನಾವಣೆಯಲ್ಲಿ ಸೋಲಿಸೋಕೆ ಆಗದಿದ್ರೆ ಈ ತರ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸ್ಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...