Homeಮುಖಪುಟ'ಬಿಜೆಪಿಗೆ ಮರಳಲ್ಲ' | ಎನ್‌ಸಿಪಿ(ಎಸ್‌ಪಿ) ನಾಯಕ ಏಕನಾಥ್ ಖಡ್ಸೆ ಹೇಳಿಕೆ

‘ಬಿಜೆಪಿಗೆ ಮರಳಲ್ಲ’ | ಎನ್‌ಸಿಪಿ(ಎಸ್‌ಪಿ) ನಾಯಕ ಏಕನಾಥ್ ಖಡ್ಸೆ ಹೇಳಿಕೆ

- Advertisement -
- Advertisement -

ಮಹಾರಾಷ್ಟ್ರ ಬಿಜೆಪಿಯ ಮಾಜಿ ಹಿರಿಯ ನಾಯಕ ಏಕನಾಥ್ ಖಡ್ಸೆ ಅವರು ಮತ್ತೆ ಪಕ್ಷಕ್ಕೆ ಮರಳುವ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಈ ಬಗ್ಗೆ ಸ್ವತಃ ಏಕನಾಥ್ ಅವರೇ ಪ್ರತಿಕ್ರಿಯಿಸಿದ್ದಾರೆ. “ತಾನು ಮತ್ತೆ ಪಕ್ಷಕ್ಕೆ ಸೇರಲು ಎಂದಿಗೂ ಉತ್ಸುಕನಾಗಿಲ್ಲ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ತಮ್ಮ ಮರು ಸೇರ್ಪಡೆಗೆ ಅಡ್ಡಿಪಡಿಸಲಿದ್ದಾರೆ” ಎಂದು ಹೇಳಿದ್ದಾರೆ.

ಪ್ರಸ್ತುತ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಜೊತೆಗೆ ಇರುವ ಏಕನಾಥ್ ಖಡ್ಸೆ ಮತ್ತೆ ಬಿಜೆಪಿಗೆ ಮರಳುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿದ್ದವು. ಅವರ ಸೊಸೆ ರಕ್ಷಾ ಖಡ್ಸೆ ಅವರನ್ನು 2024 ರ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿ ಮರುನಾಮಕರಣ ಮಾಡಿ, ಅವರು ಗೆದ್ದ ನಂತರ ಅವರನ್ನು ಕೇಂದ್ರದ ರಾಜ್ಯ ಸಚಿವರನ್ನಾಗಿ ಮಾಡಿದ ನಂತರ ಈ ಬಗ್ಗೆ ಬಿರುಸಿನ ಚರ್ಚೆ ನಡೆದಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಈ ವರ್ಷದ ಆರಂಭದಲ್ಲಿ ಏಕನಾಥ್ ಖಾಡ್ಸೆ ಅವರು ಬಿಜೆಪಿಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರೂ ಅವರ ಮರುಸೇರ್ಪಡೆ ಕುರಿತು ಬಿಜೆಪಿಯಿಂದ ಇನ್ನೂ ಯಾವುದೇ ಘೋಷಣೆಯಾಗಿಲ್ಲ. ಮಂಗಳವಾರ ಪ್ರಾದೇಶಿಕ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಅವರು, ”ನಾನು ಬಿಜೆಪಿ ತೆಕ್ಕೆಗೆ ಮರಳಲು ಉತ್ಸುಕನಾಗಿರಲಿಲ್ಲ, ಆದರೆ ಪಕ್ಷದ ಹಿರಿಯ ನಾಯಕರು ನನ್ನನ್ನು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಬಿಜೆಪಿ ಸೇರಲು ಯಾರು ಅಡ್ಡಿಯಾಗಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಂದ್ರ ಫಡ್ನವೀಸ್ ಮತ್ತು ಗಿರೀಶ್ ಮಹಾಜನ್ ತಾನು ಬಿಜೆಪಿಗೆ ಸೇರುವುದಕ್ಕೆ ಅಡ್ಡಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

2023 ರ ಅಕ್ಟೋಬರ್‌ನಲ್ಲಿ ಬಿಜೆಪಿ ತೊರೆದಿದ್ದ ಏಕನಾಥ್ ಖಾಡ್ಸೆ ಅವರು ಆಗಿನ ಅವಿಭಜಿತ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್‌ಸಿಪಿ) ಸೇರಿದ್ದರು. ಈ ವೇಳೆ ಅವರು ಫಡ್ನವೀಸ್ ತಮ್ಮ ರಾಜಕೀಯ ಜೀವನವನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು

ಈ ಬಗ್ಗೆ ಪ್ರತಿಕ್ರಿಯಿಸಿರುವ ಫಡ್ನವಿಸ್‌ ಅವರ ನಿಕಟವರ್ತಿ ಮಹಾಜನ್ ಅವರು, “ಏಕನಾಥ್ ಖಾಡ್ಸೆ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಎಲ್ಲಾ ಪಕ್ಷಗಳು ಮತ್ತು ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಬಯಸುತ್ತಾರೆ. ಅವರ ಸೊಸೆ ಕೇಂದ್ರ ಸಚಿವರಾಗಿದ್ದಾರೆ. ಆದರೆ ತಮ್ಮ ಮಗಳನ್ನು ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ನಿಂದ ಕಣಕ್ಕಿಳಿಸಲು ಉದ್ದೇಶಿಸಿದ್ದಾರೆ. ವಿರೋಧ ಪಕ್ಷ ಎಂವಿಎ ಸರ್ಕಾರ ರಚಿಸಿದರೆ, ಖಡ್ಸೆ ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಬಯಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...