Homeಕರ್ನಾಟಕವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿದೆ.

ಇದಕ್ಕೆ ಸ್ಪಷ್ಟನೆಯನ್ನು ನೀಡಿರುವ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದಾರೆ.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದಾರೆ.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿದ್ದೇವೆ” ಎಂದಿದ್ದಾರೆ.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...