Homeಮುಖಪುಟ’ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ’: ತಮ್ಮ ಆರೋಗ್ಯದ ಬಗ್ಗೆ ಅಮಿತ್‌ ಶಾ ಸ್ಪಷ್ಟನೆ

’ನಾನು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ’: ತಮ್ಮ ಆರೋಗ್ಯದ ಬಗ್ಗೆ ಅಮಿತ್‌ ಶಾ ಸ್ಪಷ್ಟನೆ

ಜನರು ಈ ಅರ್ಥಹೀನ ಕೆಲಸಗಳನ್ನು ಬಿಟ್ಟು ನನ್ನ ಕೆಲಸವನ್ನು ಮಾಡಲು ಅವಕಾಶ ಮಾಡಿಕೊಡುತ್ತಾರೆ ಮತ್ತು ಅವರ ಸ್ವಂತ ಕೆಲಸವನ್ನು ಸಹ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ.

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು “ನಾನು ಆರೋಗ್ಯವಾಗಿದ್ದೇನೆ ಮತ್ತು ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ಶನಿವಾರ ಮಧ್ಯಾಹ್ನ ಘೋಷಿಸಿದ್ದಾರೆ. ಆ ಮೂಲಕ ಅವರ ಆರೋಗ್ಯದ ಸುತ್ತ ಹರಡಿರುವ ಎಲ್ಲಾ ವದಂತಿಗಳನ್ನು ಅಲ್ಲಗೆಳೆದಿದ್ದಾರೆ.

ಬಹಳಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಅಮಿತ್‌ ಶಾರವರ ಆರೋಗ್ಯ ತೀರಾ ಹದೆಗೆಟ್ಟಿದೆ, ಅವರಿಗೆ ಮೂಳೆ ಕ್ಯಾನ್ಸರ್‌ ರೋಗವಿದೆ ಎಂಬೆಲ್ಲ ವದಂತಿಗಳನ್ನು ಹಬ್ಬಿಸಿದ್ದರು. ಅವರು ಸಣ್ಣಗಾಗಿದ್ದಾರೆ, ತಲೆ ಕೂದಲೆಲ್ಲಾ ಉದುರಿಹೋಗಿದೆ, ಅದಕ್ಕಾಗಿಯೇ ಅವರು ಇತ್ತೀಚೆಗೆ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂದೆಲ್ಲಾ ಸುದ್ದಿ ಹರಡಿದ್ದರು.

ಈ ಕುರಿತು ವಿವರವಾದ ಟ್ವಿಟ್ಟರ್ ಪೋಸ್ಟ್ ಮಾಡಿರುವ ಅವರು “ಕಳೆದ ಹಲವಾರು ದಿನಗಳಿಂದ, ಕೆಲವರು ನನ್ನ ಆರೋಗ್ಯದ ಬಗ್ಗೆ ಅನೇಕ ವದಂತಿಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹರಡಿದ್ದಾರೆ, ನನ್ನ ಸಾವಿಗೆ ಪ್ರಾರ್ಥಿಸುವುದಾಗಿ ಅನೇಕ ಜನರು ಟ್ವೀಟ್ ಮಾಡಿದ್ದಾರೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ದೇಶವು ಪ್ರಸ್ತುತ ಕರೋನದಂತಹ ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದೆ ಮತ್ತು ನಾನು ದೇಶದ ಗೃಹ ಸಚಿವರಾಗಿ ಕಾರ್ಯನಿರತರಾಗಿರುವುದರಿಂದ, ನಾನು ಈ ಎಲ್ಲದರ ಬಗ್ಗೆ ಗಮನ ಹರಿಸಲಿಲ್ಲ. ನಿನ್ನೆ ತಡರಾತ್ರಿಯಲ್ಲಿ ಇದು ನನ್ನ ಗಮನಕ್ಕೆ ಬಂದಾಗ, ಈ ಜನರೆಲ್ಲರೂ ತಮ್ಮ ಕಾಲ್ಪನಿಕ ಆಲೋಚನೆಗಳನ್ನು ಆನಂದಿಸಬೇಕು ಎಂದು ನಾನು ಭಾವಿಸಿದೆ. ಹಾಗಾಗಿ ನಾನು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.

“ಆದರೆ ಕಳೆದ ಎರಡು ದಿನಗಳಿಂದ ನನ್ನ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಮತ್ತು ನನ್ನ ಹಿತೈಷಿಗಳು ಸಾಕಷ್ಟು ಕಳವಳ ವ್ಯಕ್ತಪಡಿಸಿದ್ದಾರೆ. ಅವರ ಕಾಳಜಿಯನ್ನು ನಾನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ನನಗೆ ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ ಎಂದು ನಾನು ಇಂದು ಸ್ಪಷ್ಟಪಡಿಸಲು ಬಯಸುತ್ತೇನೆ ”ಎಂದು ಶಾ ಹೇಳಿದ್ದಾರೆ.

ನನ್ನ ಆರೋಗ್ಯದ ಬಗ್ಗೆ ತಮ್ಮ ಕಾಳಜಿಯನ್ನು ತೋರಿಸಿದ್ದಕ್ಕಾಗಿ ಹಿತೈಷಿಗಳು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಗೃಹ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.

“ಈ ವದಂತಿಗಳನ್ನು ಹರಡಿದ ಜನರ ಬಗ್ಗೆ ನನಗೆ ಯಾವುದೇ ದ್ವೇಷಭಾವನೆ ಅಥವಾ ಕೋಪ ಇಲ್ಲ. ನಿಮಗೂ ಧನ್ಯವಾದಗಳು” ಎಂದು ಶಾರವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಹಿಂದೂ ನಂಬಿಕೆಗಳ ಪ್ರಕಾರ ಇಂತಹ ವದಂತಿಗಳು ಒಬ್ಬರ ಆರೋಗ್ಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ನಂಬಲಾಗಿದೆ. “ಆದ್ದರಿಂದ, ಅಂತಹ ಎಲ್ಲಾ ಜನರು ಈ ಅರ್ಥಹೀನ ಕೆಲಸಗಳನ್ನು ಬಿಟ್ಟು ನನ್ನ ಕೆಲಸವನ್ನು ಮಾಡಲು ಅವಕಾಶ ಮಾಡಿಕೊಡುತ್ತಾರೆ ಮತ್ತು ಅವರ ಸ್ವಂತ ಕೆಲಸವನ್ನು ಸಹ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: ಕೇರಳದಲ್ಲೀಗ ಕೇವಲ 16 ಕೊರೊನಾ ಸೋಂಕಿತರು: ಸಚಿವ ಥಾಮಸ್ ಐಸಾಕ್ 

Also Read: COVID-19: Chronicle of the world’s largest lockdown

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...