Homeಮುಖಪುಟಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಪ್ರಧಾನಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?" ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

- Advertisement -
- Advertisement -

ಆರ್‌ಟಿ-ಪಿಸಿಆರ್ ವರದಿಯಿಲ್ಲದೆ ಪಶ್ಚಿಮ ಬಂಗಾಳಕ್ಕೆ ಬರುವ ಹೊರಗಿನವರಿಗೆ ಅನುಮತಿಸದಂತೆ ಚುನಾವಣಾ ಆಯೋಗಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಬಿಜೆಪಿಯ ರ್‍ಯಾಲಿಗಳಲ್ಲಿ ಹೊರಗಿನಿಂದ ಬಂದು ಹಾಜರಾಗುವವರು ಮತ್ತು ಕಾರ್ಯಕ್ರಮ ಸಂಘಟಿಸುವವರು ಕೊರೊನಾ ವೈರಸ್‌ ಸೋಂಕನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಚುನಾವಣೆಗಳನ್ನು ನಡೆಸುವ ಪ್ರಯತ್ನದಲ್ಲಿ, ಕೊರೊನಾ ಸೋಂಕನ್ನು ನಿರ್ಲಕ್ಷಿಸಿದೆ, ಇದರ ಪರಿಣಾಮವಾಗಿ ಈಗ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ -19 ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯಿಲ್ಲದೆ ಯಾರನ್ನೂ ರಾಜ್ಯಕ್ಕೆ ಪ್ರವೇಶಿಸಲು ಅನುಮತಿಸಬಾರದು ಎಂದು ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ ”ಎಂದು ಉತ್ತರ 24 ಪರಗಣಗಳಲ್ಲಿ ನಡೆದ ಸಾರ್ವಜನಿಕ ಪ್ರಚಾರ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಗುರುವಾರ 6,769 ಹೊಸ ಪ್ರಕರಣಗಳು ಪತ್ತೆಯಾಗಿವೆ. 2020 ರ ಆರಂಭದಲ್ಲಿ ಇಷ್ಟು ಪ್ರಕರಣಗಳು ವರದಿಯಾಗಿದ್ದವು. ನಂತರದ ದಿನಗಳಲ್ಲಿ ಗುರುವಾರವೇ ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಚುನಾವಣಾ ಕಾರ್ಯಕ್ರಮವನ್ನು ಆಯೋಜಿಸಲು, ವೇದಿಕೆ ಮತ್ತು ಪೆಂಡಾಲ್‌ಗಳನ್ನು ನಿರ್ಮಿಸಲು ಪ್ರಧಾನಿ ಮೋದಿ ರ್‍ಯಾಲಿ ಇದ್ದಾಗ ರಾಜ್ಯದ ಹೊರಗಿನಿಂದ ಸಾವಿರಾರು ಜನರು ಬರುತ್ತಿದ್ದಾರೆ. ಎಲ್ಲಾ ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳನ್ನು ಅವರಿಗಾಗಿ ಕಾಯ್ದಿರಿಸಲಾಗುತ್ತಿದೆ. ಅವರು ಕೊರೊನಾ ಸೋಂಕಿತರಾಗಿದ್ದಾರೆಯೇ ಇಲ್ಲವೇ ಎಂದು ಹೇಗೆ ತಿಳಿಯುವುದು? ಅವರು ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಗೂ ಒಳಗಾಗಿರುವುದಿಲ್ಲ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇತರ ರಾಜ್ಯಗಳ ಬಿಜೆಪಿ ಮುಖಂಡರೊಂದಿಗೆ ಹೊರಗಿನವರು ಜೊತೆಯಾಗಿರುವುದರಿಂದ ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗಿದೆ ಎಂದು ಟಿಎಂಸಿ ಮುಖ್ಯಸ್ಥರು ಕಳೆದ ಕೆಲವು ದಿನಗಳಿಂದ ಆರೋಪಿಸುತ್ತಿದ್ದಾರೆ.

“ನೆಗೆಟಿವ್ ವರದಿಯಿಲ್ಲದೆ ಬಂಗಾಳದಲ್ಲಿ ಹೊರಗಿನವರಿಗೆ ಅವಕಾಶ ನೀಡದಂತೆ ನಾವು ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇವೆ. ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಸ್ವಾಗತವಿದೆ. ಆದರೆ ಅವರು ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಜನರನ್ನು ಏಕೆ ಕರೆತರಬೇಕು?” ಎಂದು ಪ್ರಶ್ನಿಸಿದ್ದಾರೆ.

“ಕೊರೊನಾ ಸೋಂಕನ್ನು ಬಂಗಾಳದಲ್ಲಿ ಹರಡಬೇಡಿ, ನರೇಂದ್ರ ಮೋದಿಯವರೇ, ನಾವು ನಿಮ್ಮನ್ನು ಪದೇ ಪದೇ ಒತ್ತಾಯಿಸುತ್ತಿದ್ದೇವೆ. ನೀವು ರಾಜಕೀಯವನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಿಲ್ಲ” ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನೆಲೆ ಉಳಿದ ಎಲ್ಲಾ ಹಂತದ ವಿಧಾನಸಭಾ ಚುನಾವಣೆಯನ್ನು ಒಂದೇ ಸಮಯದಲ್ಲಿ ನಡೆಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ ಅದು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...