Homeಮುಖಪುಟಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರಿಂ ಕೋರ್ಟ್‌ ಮಧ್ಯಂತರ ಜಾಮೀನು ಶುಕ್ರವಾರ ನೀಡಿದೆ. “ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾಗಿತ್ತು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಗುಜರಾತ್‌‌ ಹೈಕೋರ್ಟ್‌ ಅನ್ನು ಟೀಕಿಸಿದೆ.

ಗುರುವಾರದಂದು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀಸ್ತಾ ಅವರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು, ಹೈಕೋರ್ಟ್ ತನ್ನ ಜಾಮೀನು ಅರ್ಜಿಯನ್ನು ನಿರ್ಧರಿಸುವವರೆಗೆ ತೀಸ್ತಾ ಅವರು ತನ್ನ ಪಾಸ್‌ಪೋರ್ಟ್ ಅನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಮಧ್ಯಂತರ ಜಾಮೀನು ನೀಡುವ ವೇಳೆ ತಿಳಿಸಿದೆ.

ಇದನ್ನೂ ಓದಿ: ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

“ಅರ್ಜಿದಾರರು 2 ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿದ್ದಾರೆ. ಈ ಹಂತದಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅವರ ವಸ್ತುನಿಷ್ಠ ಅರ್ಜಿಯ ಪರಿಗಣನೆಯ ಬಾಕಿ ಇರುವಾಗ ಮಧ್ಯಂತರ ಜಾಮೀನಿನ ಪರಿಹಾರಕ್ಕೆ ಖಂಡಿತವಾಗಿಯೂ ಅರ್ಹರಾಗಿರುತ್ತಾರೆ” ಎಂದು ಸಿಜೆಐ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿತ ಪ್ರಕರಣದಲ್ಲಿ ತೀಸ್ತಾ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸೂಕ್ತವೆಂದು ಪರಿಗಣಿಸುವ ಷರತ್ತುಗಳಿಗೆ ಒಳಪಟ್ಟು ಅವರನ್ನು ಆದಷ್ಟು ಬೇಗ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸುಪ್ರೀಂಕೋರ್ಟ್ ಗುಜರಾತ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಪ್ರಕರಣದಲ್ಲಿ ನ್ಯಾಯಾಲಯವು ಪರಿಗಣಿಸುವವರೆಗೆ ತನ್ನ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ಮತ್ತು ಬಾಕಿ ಉಳಿದಿರುವ ಪ್ರಕರಣದಲ್ಲಿ ಸಂಪೂರ್ಣ ಸಹಕಾರವನ್ನು ನೀಡುವಂತೆ ತೀಸ್ತಾ ಅವರಿಗೆ ಸುಪ್ರೀಂ ಸೂಚಿಸಿದೆ. ಹೀಗಾಗಿ ತೀಸ್ತಾ ಅವರು ಪಾಸ್‌ಪೋರ್ಟ್‌ ಅನ್ನು ಸಲ್ಲಿಸಿ, ಇತರ ಜಾಮೀನು ಔಪಚಾರಿಕತೆಗಳ ನಂತರ ಬಿಡುಗಡೆಯಾಗುತ್ತಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ‘ಅಮಾಯಕರನ್ನು’ ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಜೂನ್ 26 ರಂದು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಗಜರಾತಿನ ಜೈಲುಗಳಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾಮೀನು ದೊರಕುವುದು ತಡವಾಯಿತು, ಆದರೂ ಸದ್ಯಕ್ಕೆ ಇದು ಸಮಾದಾನಕರ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...