Homeಕರ್ನಾಟಕಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ: ಬೊಮ್ಮಾಯಿ

- Advertisement -
- Advertisement -

ಬೆಂಗಳೂರು: ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಯಾವುದೂ ಅಸಾಧ್ಯವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕೆ.ಎಸ್.ಆರ್.ಟಿ.ಸಿ. ವತಿಯಿಂದ ನವೀಕೃತಗೊಂಡಿರುವ ಕೋವಿಡ್ 19 ಆಸ್ಪತ್ರೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ, ಬಿಬಿಎಂಪಿ, ಕಾರ್ಪೊರೇಟ್ ವಲಯ ಎಲ್ಲರೂ ಸೇರಿ ಈ ಮಕ್ಕಳ ಆಸ್ಪತ್ರೆಯನ್ನು ಪುನರ್ ನಿರ್ಮಿಸಿದ್ದಾರೆ. ಕೋವಿಡ್‌ನಿಂದಾಗಿ ಎಲ್ಲರಿಗೂ ಆರ್ಥಿಕ ತೊಂದರೆಗಳಾಗಿವೆ. ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಆದರೆ ಮತ್ತೊಂದೆಡೆ ನಮ್ಮೆಲ್ಲರನ್ನು ಒಗ್ಗೂಡಿಸಿಸುವ ಕೆಲಸವನ್ನು ಮಾಡಿದೆ. ಎಲ್ಲರೂ ಒಟ್ಟಾಗಿ ಇದನ್ನು ಎದುರಿಸಬೇಕೆನ್ನುವ ಮನಸ್ಥಿತಿಗೆ ಬಂದದ್ದರಿಂದ ಇಂಥ ಕೆಲಸಗಳು ಆಗುತ್ತವೆ ಎಂದರು.

ಮಾನವೀಯತೆ ಬಹಳ ಮುಖ್ಯ. ಇನ್ನೊಬ್ಬರಿಗಾಗಿ ಮನ ಮಿಡಿಯದಿದ್ದರೆ, ಮತ್ತೊಬ್ಬರಿಗಾಗಿ ನಾವು ಕೆಲಸ ಮಾಡದಿದ್ದರೆ, ಈ ಜೀವನ ಸಾರ್ಥಕವಾಗುವುದಿಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದ ಸಾಕಷ್ಟು ಪಾಠವನ್ನು ಕಲಿತಿದ್ದೇವೆ. ಕೋವಿಡ್ ಮೂರನೇ ಅಲೆ ಬರಬಾರದು. ಬಂದರೂ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಆಕ್ಸಿಜನ್ ಮಹತ್ವವನ್ನು ಕೋವಿಡ್ ಸಂದರ್ಭದಲ್ಲಿ ಅರಿತೆವು. ದಿನನಿತ್ಯದ ಆಹಾರದಲ್ಲಿನ ಮಹತ್ವವನ್ನು ಅರಿತು, ಪೌಷ್ಟಿಕ ಆಹಾರವನ್ನು ಪಡೆದುಕೊಂಡರೆ, ನಮ್ಮ ದೇಹದ ವ್ಯವಸ್ಥೆ ಸುಧಾರಿಸುತ್ತದೆ. ಏನಾದರೂ ಕೊರತೆಯಾದಾಗ ಮಾತ್ರ ನಮಗೆ ಅದರ ಮಹತ್ವ ತಿಳಿಯುತ್ತದೆ. ಜಯನಗರ ಟಿ. ಬ್ಲಾಕ್ ಆಸ್ಪತ್ರೆ ಕೊರತೆಯಾದ ಸಂದರ್ಭದಲ್ಲಿ ಹುಟ್ಟಿಕೊಂಡಿದ್ದು, ಎಲ್ಲರೂ ಈ ಆಸ್ಪತ್ರೆಗೆ ಸಹಾಯ ಮಾಡಿದ್ದಾರೆ. ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಇಲ್ಲಿನ ಸಿಬ್ಬಂದಿಯದ್ದು ಎಂದು ತಿಳಿಸಿದರು.

ಇದನ್ನೂ ಓದಿ: ಆರೋಗ್ಯ ಕವಚ ಸೇವೆಗೆ 120 ಆಂಬ್ಯುಲೆನ್ಸ್ ಸೇರ್ಪಡೆ

ಕೊಡುಗೆ ನೀಡಿದ ಎಲ್ಲ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು. ಆಗ ಮಾತ್ರ ಜೀವನಕ್ಕೆ ನಿಜವಾದ ಅರ್ಥ ಬರುತ್ತದೆ. ಅಗತ್ಯಕ್ಕಿಂತ ಹೆಚ್ಚಿನದನ್ನು ಪಡೆದುಕೊಳ್ಳುವ ಪ್ರವೃತ್ತಿಗಿಂತ ಕೊಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದರು.

ಆರೋಗ್ಯ ವ್ಯವಸ್ಥೆ ಒಂದೇ ಪ್ರಾಧಿಕಾರದಡಿಗೆ ಬರಬೇಕು ಎನ್ನುವ ಚಿಂತನೆ ಇದೆ. ಬೆಂಗಳೂರಿಗೆ ಯೋಜಿತ ಬೆಳವಣಿಗೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ದೊರೆಯಬೇಕು. ಬೆಂಗಳೂರಿನಲ್ಲಿ ಮೆಗಾ ಯೋಜನೆಗಳು ಶೀಘ್ರದಲ್ಲಿಯೇ ಕಾರ್ಯಗತಗೊಳಿಸಿ ಇನ್ನಷ್ಟು ವಾಸಯೋಗ್ಯವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಂಸದ ತೇಜಸ್ವಿ ಸೂರ್ಯ, ಶಾಸಕಿ ಸೌಮ್ಯ ರೆಡ್ಡಿ, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹಾಜರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...