Homeಮುಖಪುಟ"ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ": ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ”: ನಿಮಿಷಾ ಪ್ರಿಯಾ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಯೆಮೆನ್‌ನಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ತಡೆಯಲು “ಭಾರತ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

“ಸರ್ಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ. ಯೆಮೆನ್ ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ. ಬ್ಲಡ್ ಮನಿ ವಿಚಾರ ಖಾಸಗಿ ಮಾತುಕತೆಯಾಗಿದೆ. ಸರ್ಕಾರ ಖಾಸಗಿ ಮಾರ್ಗಗಳ ಮೂಲಕ ನಿಮಿಷಾ ಅವರನ್ನು ರಕ್ಷಿಸಲು ತನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತಿದೆ” ಎಂದು ಕೇಂದ್ರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವೆಂಕಟರಮಣಿ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

ಜುಲೈ 16ರಂದು ನಿಮಿಷಾ ಪ್ರಿಯಾ ಅವರಿಗೆ ಮರಣದಂಡನೆ ಜಾರಿಯಾಗಲಿದ್ದು, ಅದನ್ನು ತಡೆಯಲು ಸರ್ಕಾರ ಮಧ್ಯಪ್ರವೇಶಿಸುವಂತೆ ನಿರ್ದೇಶಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಿದೆ.

ಈ ವಿಚಾರದಲ್ಲಿ ಭಾರತ ಸರ್ಕಾರ ಯಾವ ಹಂತದವರೆಗೆ ಹೋಗಬಹುದು ಎಂಬುದಕ್ಕೆ ಒಂದು ಮಿತಿಯಿದೆ. ನಾವು ಆ ಮಿತಿಯನ್ನು ತಲುಪಿದ್ದೇವೆ. ಯೆಮೆನ್ ಪ್ರಪಂಚದ ಇತರ ದೇಶಗಳಂತೆ ಅಲ್ಲ. ನಾವು ಸಾರ್ವಜನಿಕವಾಗಿ ಮಾತನಾಡುವ ಮೂಲಕ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಿರಲಿಲ್ಲ. ಖಾಸಗಿಯಾಗಿ ನಿಮಿಷಾ ಅವರ ರಕ್ಷಣೆಗೆ ಎಲ್ಲಾ ಪ್ರಯತ್ನಿಗಳನ್ನು ಮಾಡಿದ್ದೇವೆ ಎಂದು ಎಜಿ ಹೇಳಿದ್ದಾರೆ.

ಸರ್ಕಾರ ನಿಮಿಷಾ ಅವರ ಪ್ರಕರಣದಲ್ಲಿ ಮೃತ ಯೆಮನ್‌ ಪ್ರಜೆಯ ಕುಟುಂಬದೊಂದಿಗೆ ಮಾತುಕತೆ ನಡೆಸಬೇಕು. ನಿಮಿಷಾ ಅವರ ಕುಟುಂಬ ಮೃತನ ಕುಟುಂಬಕ್ಕೆ 8.6 ಕೋಟಿ ರೂಪಾಯಿ ಬ್ಲಡ್ ಮನಿ ನೀಡಲು ಮುಂದಾಗಿದೆ. ಇದು ಯೆಮನ್‌ನ ಷರಿಯಾ ಕಾನೂನಿನಡಿಯಲ್ಲಿ ಮಾನ್ಯವಾಗಿರುವ ನಿಬಂಧನೆಯಾಗಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಜಿ, “ಬ್ಲಡ್ ವಿಚಾರವಾಗಿ ಖಾಸಗಿ ಮಾತುಕತೆಯಾಗಿದೆ. ಸರ್ಕಾರ ಅಲ್ಲಿನ ಕೆಲ ಶೇಖ್‌ಗಳು, ಪ್ರಭಾವಿ ವ್ಯಕ್ತಿಗಳೊಂದಿಗೆ ಖಾಸಗಿಯಾಗಿ ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಟೆನ್ನಿಸ್‌ ಆಟಗಾರ್ತಿ ರಾಧಿಕಾ ಯಾದವ್ ಹತ್ಯೆ ಪ್ರಕರಣ: ‘ಗೋಧಿ ಮೀಡಿಯಾ’ಗಳ ‘ಲವ್ ಜಿಹಾದ್’ ಆರೋಪ ಟುಸ್ಸಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...