Homeಮುಖಪುಟಶಬರಿಮಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಪಿಣರಾಯಿ ವಿಜಯನ್

ಶಬರಿಮಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಪಿಣರಾಯಿ ವಿಜಯನ್

- Advertisement -
- Advertisement -

ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆಯ ದೂರುಗಳ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.

“ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಈ ಬಾರಿ ಯಾವುದೇ ರೀತಿಯ ದುರ್ಘಟನೆ ನಡೆದಿಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಅಲ್ಲಿ ಜಾರಿಗೆ ತಂದಿರುವ ಹೊಸ ವ್ಯವಸ್ಥೆಗಳ ಕುರಿತು ಸಾರ್ವಜನಿಕರಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.

ಇಡುಕ್ಕಿ ಜಿಲ್ಲೆಯಲ್ಲಿ ನಡೆಯುತ್ತಿರುವ ನವ ಕೇರಳ ಜನಸಂಪರ್ಕ ಕಾರ್ಯಕ್ರಮದ ನಡುವೆ ತೆಕ್ಕಡಿಯಲ್ಲಿ ನಡೆದ ವಿಶೇಷ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಅಯ್ಯಪ್ಪ ಯಾತ್ರಾರ್ಥಿಗಳಿಗೆ ಸೌಲಭ್ಯಗಳ ಕೊರತೆಯ ಬಗ್ಗೆ ಪ್ರಸ್ತಾಪಿಸಿ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಿದ ಯುಡಿಎಫ್ ಸಂಸದರ ವಿರುದ್ಧ ಕಿಡಿಕಾರಿದ್ದಾರೆ.

ಮಂಡಲ ಪೂಜಾ ಋತುವಿನ ಮೊದಲ 19 ದಿನಗಳಲ್ಲಿ ಪ್ರತಿದಿನ ಸರಾಸರಿ 62,000 ಯಾತ್ರಾರ್ಥಿಗಳು ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಡಿಸೆಂಬರ್ 6 ರಿಂದ ನಾಲ್ಕು ದಿನಗಳಲ್ಲಿ ಯಾತ್ರಾರ್ಥಿಗಳ ಸಂಖ್ಯೆ 88,000 ಕ್ಕೆ ಏರಿಕೆಯಾಗಿದೆ. ಇದು ಭಾರೀ ಜನ ದಟ್ಟಣೆಗೆ ಕಾರಣವಾಗಿದೆ ಎಂದು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಈ ಸಮಸ್ಯೆ ಬಗೆಹರಿಸಲು ದರ್ಶನದ ಸಮಯವನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಸ್ಪಾಟ್ ಬುಕ್ಕಿಂಗ್ ಮಿತಿಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಮ್ಯೂನಿಸ್ಟ್ ಸರ್ಕಾರದಿಂದ ಹಿಂದೂಗಳ ಮೇಲೆ ದಾಳಿ ಆರೋಪ

ಕೇರಳದ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ಮೇಲೆ ಕಮ್ಯೂನಿಸ್ಟ್ ಸರ್ಕಾರದ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಮತ್ತು ಸಂಘಪರಿವಾರ ಆರೋಪಿಸಿದೆ. ಮಗುವೊಂದು ಕೈ ಮುಗಿದು ಅಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು’ ಹಿಂದೂ ರಾಷ್ಟ್ರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ ಎಂದು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ವ್ಯಾಪಕವಾಗಿ ಹರಿದಾಡುತ್ತಿರುವ ಮಗು ಕೈಮುಗಿದು ಬೇಡಿಕೊಂಡ ವಿಡಿಯೋ ಹಿಂದೂಗಳ ಮೇಲಿನ ದಾಳಿಯದಲ್ಲ. ಮಗು ತನ್ನ ತಂದೆಯಿಂದ ತಪ್ಪಿಸಿಕೊಂಡಾಗ ತಂದೆಯ ಹತ್ತಿರ ಸೇರಿಸುವಂತೆ ಕೈ ಮುಗಿದು ಬೇಡಿಕೊಂಡಿದೆ ಎಂದು ತಿಳಿದು ಬಂದಿದೆ.

ಕೇರಳ ಬಿಜೆಪಿಯ ಯುವ ಮೋರ್ಚಾ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಇಂದು ತಿರುವನಂತಪುರಂನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: ಲೋಕಸಭೆ ಭದ್ರತಾ ಲೋಪ: ಸಂಸದ ಪ್ರತಾಪ್ ಸಿಂಹರಿಂದ ಪಾಸ್ ಪಡೆದಿದ್ದರೇ ಆಗಂತುಕರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...