Homeಮುಖಪುಟಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ 100 ಮನೆಗಳ ಧ್ವಂಸಕ್ಕೆ ನೋಟಿಸ್: ಸಾರ್ವಜನಿಕರ ಆಕ್ರೋಶ

ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

- Advertisement -
- Advertisement -

ಜನರ ತೀವ್ರ ಆಕ್ರೋಶಗಳು ಮತ್ತು ಪ್ರತಿಭಟನೆಗಳ ನಡುವೆಯು ಲಕ್ಷದ್ವೀಪ ಆಡಳಿತ ತನ್ನ ವಿಧ್ವಂಸಕ ನೀತಿಯನ್ನು ಮುಂದುವರಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇತ್ತೀಚೆಗೆ ಹೊರಡಿಸಲಾಗಿರುವ ಆದೇಶಗಳಲ್ಲಿ, ಸಮುದ್ರ ತೀರದಿಂದ 20 ಮೀಟರ್ ಒಳಗೆ ಇರುವ ನೂರು ಮನೆಗಳನ್ನು ಧ್ವಂಸ ಮಾಡಲು ಹೇಳಲಾಗಿದೆ. ಈ ಹೊಸ ಆದೇಶದಲ್ಲಿ ತೀರದಿಂದ 20 ಮೀಟರ್‌‌ ಒಳಗೆ ಇರುವ ಶೌಚಾಲಯಗಳು ಮತ್ತು ನಿರ್ಜನ ದ್ವೀಪಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಮೀನುಗಾರಿಕಾ ಶೆಡ್‌ಗಳನ್ನು ಸಹ ಧ್ವಂಸ ಮಾಡಲು ಹೇಳಿದೆ.

ಲಕ್ಷದ್ವೀಪದ ಆಡಳಿತ ಕೇಂದ್ರವಾಗಿರುವ ಕವರತ್ತಿಯ 102 ಮನೆಗಳಿಗೆ ನೋಟಿಸ್ ಪಡೆದಿವೆ. ಅಷ್ಟೇ ಅಲ್ಲದೆ ಇನ್ನೂ 52 ಮನೆಗಳಿಗೆ ಶೀಘ್ರದಲ್ಲೇ ನೋಟಿಸ್‌‌ ನೀಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೆರಿಯಮ್, ಸುಹೆಲಿ ಪಾರ್ ಮತ್ತು ಕಲ್ಪೇನಿ ದ್ವೀಪಗಳ ಅನೇಕರು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳಿಂದ ಇದೀ ರೀತಿಯ ನೋಟಿಸ್ ಪಡೆದಿದ್ದಾರೆ ಎಂದು ‘ಮಾಧ್ಯಮಂ’ ವರದಿ ಮಾಡಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಮನೆಗಳಿಗೆ ನೀಡಲಾದ ನೋಟಿಸ್‌ಗೆ ಉತ್ತರಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ನೋಟಿಸ್‌ ನೀಡಿದ ಕಟ್ಟಡಗಳನ್ನು ಧ್ವಂಸ ಮಾಡಲು ವಿಫಲವಾದರೆ ಅದನ್ನು ಅಧಿಕಾರಿಗಳೇ ಧ್ವಂಸ ಮಾಡಲಿದ್ದು, ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡದ ಮಾಲಿಕರು ನೀಡಬೇಕಾಗುತ್ತದೆ.

ಸಮುದ್ರ ತೀರದಿಂದ 50 ಮೀಟರ್ ದೂರವಿರುವ ಕಟ್ಟಡಗಳಿಗೂ ನೋಟಿಸ್‌ ಬಂದಿದೆ ಎಂದು ದ್ವೀಪವಾಸಿಗಳು ಹೇಳಿದ್ದಾರೆ. ನೋಟಿಸ್ ಪಡೆದ ಹಲವು ಕಟ್ಟಡಗಳು ತೀರದಿಂದ 50 ಮೀಟರ್ ದೂರದಲ್ಲೆ ನಿರ್ಮಿಸಲ್ಪಟ್ಟಿತ್ತಾದರೂ, ಸಮುದ್ರ ಕೊರೆತದಿಂದ ಅದರ ಅಂತರ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

“ಇಂಟಿಗ್ರೇಟೆಡ್ ಐಲ್ಯಾಂಡ್ ಮ್ಯಾನೇಜ್ಮೆಂಟ್ ಪ್ಲ್ಯಾನ್ ಅಡಿಯಲ್ಲಿ ಕಾನೂನುಬಾಹಿರವಾಗಿ ಕಟ್ಟಲ್ಪಟ್ಟ ಕಟ್ಟವೆಂದು ಕಂಡುಬಂದವರಿಗೆ ಮಾತ್ರ ನೋಟಿಸ್ ನೀಡಲಾಗುತ್ತದೆ. ಅಲ್ಲದೆ, ಶಿಥಿಲವಾದ ಮನೆಗಳು ಮತ್ತು ಶೌಚಾಲಯಗಳನ್ನು ಮಾತ್ರ ಉರುಳಿಸುತ್ತಿದ್ದು, ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಐದು ಸ್ಥಳಗಳಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲು ಬೇಕಾಗಿ ಕಟ್ಟಡಗಳನ್ನು ತೆಗೆದುಹಾಕಲಾಗುತ್ತದೆ” ಎಂದು ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಈ ಮಧ್ಯೆ, ದ್ವೀಪವಾಸಿಗಳು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಕಳಪೆ ತ್ಯಾಜ್ಯ ನಿರ್ವಹಣೆಗೆ ದಂಡ ವಿಧಿಸಲಿರುವ ಹೊಸ ಆದೇಶಕ್ಕೆ ಆಕ್ರೋಶಗಳು ಹೆಚ್ಚಿವೆ. ತ್ಯಾಜ್ಯ ನಿರ್ವಹಣೆಗೆ ಯಾವುದೆ ಮೂಲಸೌಕರ್ಯಗಳೇ ಇಲ್ಲದೆ ಇರುವಾಗ ದಂಡ ವಿಧಿಸುವಂತಹ ಆದೇಶಗಳು ಹೇಗೆ ತಾರ್ಕಿಕವಾಗುತ್ತದೆ ಎಂದು ದ್ವೀಪವಾಸಿಗಳು ವಾದಿಸುತ್ತಿದ್ದಾರೆ.

ಈ ಮೊದಲು ಚೆರಿಯಮ್ ದ್ವೀಪದಲ್ಲಿ, ಕಡಲತೀರದ ಉದ್ದಕ್ಕೂ ಇರುವ ಮೀನುಗಾರರ ನಿರ್ಮಾಣಗಳನ್ನು ಏಳು ದಿನಗಳಲ್ಲಿ ತೆರವುಗೊಳಿಸಲು ಆಡಳಿತವು ಆದೇಶಿಸಿತ್ತು. ಮೀನುಗಾರರು ಅದನ್ನು ಸ್ವಇಚ್ಛೆಯಿಂದ ಮಾಡದಿದ್ದರೆ, ಕಂದಾಯ ಇಲಾಖೆಯು ಇದನ್ನು ಮಾಡುತ್ತದೆ ಎಂದು ಆದೇಶವು ಉಲ್ಲೇಖಿಸಿತ್ತು.

ಲಕ್ಷದ್ವೀಪ ಆಡಳಿತವು ಈ ಮೊದಲು ಕೂಡಾ ಮೀನುಗಾರರ ನಿರ್ಮಾಣಗಳನ್ನು ಇದೇ ಮಾದರಿಯಲ್ಲಿ ಕಿತ್ತುಹಾಕಿತ್ತು. ಇದು ದ್ವೀಪವಾಸಿಗಳು ಸೇರಿದಂತೆ ಭಾರತದಾದ್ಯಂತ ಭಾರಿ ಆಕ್ರೋಶವನ್ನು ಹುಟ್ಟಹಾಕಿತ್ತು. ಪ್ರಫುಲ್ ಪಟೇಲ್ ನೇತೃತ್ವದ ಹೊಸ ಲಕ್ಷದ್ವೀಪ ಆಡಳಿತವು ಪರಿಚಯಿಸಿದ ಅನೇಕ ಕಠಿಣ ಯೋಜನೆಗಳಲ್ಲಿ ಇದು ಒಂದಾಗಿದೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಇದಕ್ಕೂ ಮುನ್ನ, ಶನಿವಾರದಂದು, ಪರಿಸರ ಕಾಳಜಿಗಳ ಬಗ್ಗೆ ತಜ್ಞರ ಎಚ್ಚರಿಕೆಗಳ ಹೊರತಾಗಿಯೂ, ಒಕ್ಕೂಟ ಸರ್ಕಾರವು ಲಕ್ಷದ್ವೀಪದಲ್ಲಿ ಪ್ರಮುಖ ಪ್ರವಾಸೋದ್ಯಮ ಯೋಜನೆಗೆ ಅನುಮೋದನೆ ನೀಡಿತ್ತು. ಲಕ್ಷದ್ವೀಪದ ಮಿನಿಕಾಯ್ ದ್ವೀಪದಲ್ಲಿ ರೆಸಾರ್ಟ್‌ಗಳನ್ನು ನಿರ್ಮಿಸಲು ಖಾಸಗಿ ಕಂಪನಿಗೆ 75 ವರ್ಷಗಳ ಅವಧಿಗೆ 15 ಹೆಕ್ಟೇರ್ ಭೂಮಿಯನ್ನು ಸರ್ಕಾರ ಗುತ್ತಿಗೆಗೆ ನೀಡಲಿದೆ.

ಪ್ರಫುಲ್ ಪಟೇಲ್‌‌ ತಾನು ದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ, ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು.

ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟಕ್ಕೂ ಮುಂದಾಗಿದ್ದು, ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ಡೈರಿ ಫಾರಂಗಳನ್ನು ಮುಚ್ಚುವ ಮತ್ತು ಶಾಲೆಯ ಮಧ್ಯಾಹ್ನದ ಊಟದಲ್ಲಿ ಮಾಂಸವನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಪ್ರಫುಲ್ ಪಟೇಲ್‌ ನೀಡಿದ್ದ ಎರಡು ವಿವಾದಾತ್ಮಕ ಆದೇಶಗಳನ್ನು ಕೇರಳ ಹೈಕೋರ್ಟ್ ತಡೆಹಿಡಿದಿತ್ತು.

ಇದನ್ನೂ ಓದಿ: ಲಕ್ಷದ್ವೀಪ ನ್ಯಾಯಾಂಗ ವ್ಯಾಪ್ತಿ ಬದಲಾವಣೆ ಪ್ರಸ್ತಾಪ – ಆಡಳಿತ ದುರುಪಯೋಗ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...